ನಿಮ್ ಮನೆಗೆ ಕಾಳಿಂಗ ಸರ್ಪ ಬಂತಾ? ಹಿಡಿಯೋಕೆ ಅರಣ್ಯ ಇಲಾಖೆನೇ ಮಾಡುತ್ತೆ ವ್ಯವಸ್ಥೆ! ಸರ್ಕಾರದಿಂದ ಮಹತ್ವದ ಕ್ರಮ

ನಿಮ್ ಮನೆಗೆ ಕಾಳಿಂಗ ಸರ್ಪ ಬಂತಾ? ಹಿಡಿಯೋಕೆ ಅರಣ್ಯ ಇಲಾಖೆನೇ ಮಾಡುತ್ತೆ ವ್ಯವಸ್ಥೆ! ಸರ್ಕಾರದಿಂದ ಮಹತ್ವದ ಕ್ರಮ


ಕಾಳಿಂಗ ಸರ್ಪಗಳ ಸೆರೆಗೆ ತಂಡ ರಚನೆ ಸಭೆಯಲ್ಲಿ ಸೂಚನೆ ನೀಡಿದ ಸಚಿವ ಈಶ್ವರ ಖಂಡ್ರೆ

ಚಿಕ್ಕಮಗಳೂರು, ನವೆಂಬರ್ 24: ಚಿಕ್ಕಮಗಳೂರು (ಚಿಕ್ಕಮಗಳೂರು) ಜಿಲ್ಲೆಯ ಅಜ್ಜಂಪುರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿರುವ ಕಾಳಿಂಗ ಸರ್ಪವನ್ನು ಸೆರೆಹಿಡಿಯಲು ವಿಶೇಷ ತಂಡವನ್ನು ರಚಿಸುವಂತೆ ಸೂಚನೆ ನೀಡಿದ್ದಾರೆ. ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು, ಕಾಡಿಗೆ ಬಿಡಲು ಯಾವುದೇ ಖಾಸಗಿ ಸಂಸ್ಥೆಗಳ ಮೊರೆ ಹೋಗದೆ ಅರಣ್ಯ ಇಲಾಖೆ ವಿಭಾಗದ 5 ಸಿಬ್ಬಂದಿಗೆ ತರಬೇತಿ ನೀಡುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಕಾಳಿಂಗನ ಮೇಲಿನ ದೌರ್ಜನ್ಯಕ್ಕೆ ಬ್ರೇಕ್

ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಉಡುಪಿ ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಂಡು ಬರುತ್ತಿವೆ. ಜನವಸತಿ ಪ್ರದೇಶ ಸೇರಿದಂತೆ ಮನೆಯೊಳಗೆ, ತೋಟಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗನಿಂದ ಸಾರ್ವಜನಿಕರಲ್ಲಿ ಭಯ ಮೂಡುತ್ತಿದೆ. ಇದಕ್ಕೆ ಪರಿಹಾರವಾಗಿ ಉರಗ ತಜ್ಞರು ಮತ್ತು ಖಾಸಗಿ ಸಂಸ್ಥೆಗಳನ್ನು ಸಂಪರ್ಕಿಸುವ ಅಗತ್ಯವಿಲ್ಲ ಎಂದು ಹೇಳಿರುವ ಈಶ್ವರ್ ಖಂಡ್ರೆ, ಕಾಳಿಂಗ ಸರ್ಪವನ್ನು ಹಿಡಿಯಲು ಮತ್ತು ಸುರಕ್ಷಿತವಾಗಿ ಕಾಡಿಗೆ ಬಿಡಲು ನಮ್ಮದೇ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ಒಬ್ಬ ಪ್ರಾದೇಶಿಕ ಅರಣ್ಯಾಧಿಕಾರಿಗೆ ತರಬೇತಿ ಪಡೆ 5 ಜನರ ತಂಡವನ್ನು ನೇಮಿಸಬೇಕು. ಈಗಾಗಲೆ ರಚಿಸಿರುವ ಇಟಿಎಫ್(ಎಲಿಫೆಂಟ್ ಟಾಸ್ಕ್ ಫೋರ್ಸ್) ಮತ್ತು ಎಲ್‌ಟಿಎಫ್ (ಚಿರತೆ ಟಾಸ್ಕ್ ಫೋರ್ಸ್) ಹಾಗೆಯೇ ಕಾಳಿಂಗ ಸರ್ಪವನ್ನು ಹಿಡಿಯಲು ಒಂದು ತಂಡ ರಚಿಸುವುದರಿಂದ ಸರ್ಪಗಳ ಸೆರೆಯಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನೂ ತಪ್ಪಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ ಆಗುಂಬೆ ಭಾಗದಲ್ಲಿ ಕಾಳಿಂಗ ಸರ್ಪ ಸಂಶೋಧನಾ ಹೆಸರಿನಲ್ಲಿ ವಂಚನೆ: ತನಿಖೆಗೆ ಆದೇಶ

ಈ ಹಿಂದೆ ಆಗುಂಬೆಯಲ್ಲಿರುವ ಕಾಳಿಂಗ ಮನೆಯ ವಿರುದ್ಧ ದೂರು ದಾಖಲಾಗಿತ್ತು. ಅದರೊಂದಿಗೆ ಪರಿಸರ ವಲಯದಲ್ಲಿ ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿರುವ ಸೂಕ್ಷ್ಮ ಮತ್ತು ಸಂಶೋಧನಾ ಅನುಮತಿಗಳನ್ನು ದುರುಪಯೋಗಪಡಿಸಿಕೊಂಡ ಆರೋಪವೂ ಕೇಳಿ ಬಂದಿತ್ತು. ಇಂತಹ ಎಲ್ಲಾ ಚಟುವಟಿಕೆಗಳನ್ನು ಹತೋಟಿಗೆ ತರಲು ಅರಣ್ಯ ಸಚಿವರು ಮುಂದಾಗಿದ್ದು, ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿಯಲು ಅರಣ್ಯಾಧಿಕಾರಿಗಳ ತಂಡವನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *