ದೇವನಹಳ್ಳಿ, ನವೆಂಬರ್ 24: ಕರ್ನಾಟಕ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮಧ್ಯೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಶಾಸಕರ ಎರಡನೇ ತಂಡ ದೆಹಲಿಗೆ ತಲುಪಿದೆ. ತಡರಾತ್ರಿಯೇ ದೆಹಲಿಗೆ ತಲುಪಿದ ಈ ಆರು ಶಾಸಕರ ತಂಡದಲ್ಲಿ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ, ಕದಲೂರು ಉದಯ್, ಶಿವಗಂಗಾ ಬಸವರಾಜ್, ಇಕ್ಬಾಲ್ ಹುಸೇನ್, ಶಾಸಕಿ ನಯನಾ ಮೋಟಮ್ಮ ಮತ್ತು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಸೇರಿದ್ದಾರೆ. ಈ ತಂಡವು ಇಂದು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಪಕ್ಷದಲ್ಲಿನ ಸದ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸುವ ಸಾಧ್ಯತೆಯಿದೆ. ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಇದ್ದರೂ ಡಿಕೆಶಿ ಬಣದ ಶಾಸಕರು ಅವರನ್ನು ಭೇಟಿಯಾಗಲಿಲ್ಲ. ಕಳೆದ ವಾರವೂ ಡಿ.ಕೆ. ಶಿವಕುಮಾರ್ ಆಪ್ತ ಶಾಸಕರು ದೆಹಲಿಗೆ ಭೇಟಿ ನೀಡಿದ್ದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.