ದಾವಣಗೆರೆ, ನವೆಂಬರ್ 24: ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಹೋರಾಟ ನಡೆಸಿದ ರೈತರ ಕಿಚ್ಚು (ರೈತರ ಪ್ರತಿಭಟನೆ) ತಣ್ಣಗಾಯಿತು ಎನ್ನುವಷ್ಟರಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆ ನೋವು ಆರಂಭವಾಗಿದೆ. ಈಗಲೇ ಮೆಕ್ಕೆಜೋಳ ಹಾಗೂ ಭತ್ತಕ್ಕೆ (ಭತ್ತ) ನೀಡುವಂತೆ ರೈತ ಸಂಘಗಳು ಹೋರಾಟ ನಡೆಸಿದ್ದು, ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಲ್ಲಿ ಬಿಜೆಪಿ ತಾಲೂಕು ಮಂಡಲದಿಂದ ಬಂದ್ ಕೂಡ ಮಾಡಲಾಗಿತ್ತು. ಇದೀಗ ಹೋರಾಟದ ಕಿಚ್ಚು ಮತ್ತೊಂದು ಹೆಜ್ಜೆ ಮುಂದೆ ಹೋಗಿದೆ. ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (ಬಿ.ವೈ. ವಿಜಯೇಂದ್ರ) ಎಂಟ್ರಿ ಕೊಟ್ಟಿದ್ದಾರೆ. ಕಬ್ಬು ಹೋರಾಟಗಾರರ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿದ್ದ ವಿಜಯೇಂದ್ರ ಈಗ ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ನೀಡುವುದಾಗಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿಯಲಿದ್ದಾರೆ. ದಾವಣಗೆರೆಯಿಂದ ಆರಂಭಿಸಿ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ.
ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ದಾವಣಗೆರೆ ಜಿಲ್ಲಾ ಬಿಜೆಪಿಯಿಂದ ನವೆಂಬರ್ 25 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನಾ ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಸಿ.ಟಿ.ರವಿ, ಎಂ.ಪಿ.ರೇಣುಕಾಚಾರ್ಯ, ಎಸ್.ಎ.ರವೀಂದ್ರನಾಥ್ ಸೇರಿದಂತೆ ಅನೇಖ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ. ಪ್ರತಿಭಟನೆಯು ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡು ಎಸ್ಸಿ ಕಚೇರಿಗೆ ತಲುಪಲಿದೆ, ಈ ಮೂಲಕ ಭಟ್ ಮತ್ತು ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡುವಂತೆ ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಲಿದ್ದಾರೆ. ಈ ಬೃಹತ್ ಪ್ರತಿಭಟನೆಯಲ್ಲಿ ದಾವಣಗೆರೆಯಲ್ಲಿ ಸಾವಿರಾರು ಜನರ ರೈತರು ಬರುವ ನಿರೀಕ್ಷೆ ಇದೆ.
ಇದನ್ನೂ ಓದಿ: ಟನ್ ಕಬ್ಬಿಗೆ 3500 ರೂ.ಗೆ ಪಟ್ಟು: ವಿಜಯಪುರ, ಬೆಳಗಾವಿ ರೈಲ್ವೆ ಬಂದ್ ಮಾಡಿ ರೈತರ ಪ್ರತಿಭಟನೆ
ಒಟ್ಟಿನಲ್ಲಿ ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ನೀಡುವಂತೆ ಬಿಜೆಪಿ ಬಿದಿಗಿಳಿದು ಹೋರಾಟ ನಡೆಸಲು ಸಜ್ಜಾಗಿದ್ದರೆ, ಇನ್ನಾದರೂ ರಾಜ್ಯ ಸರ್ಕಾರ ಮೆಕ್ಕೆಜೋಳ ಹಾಗೂ ಭತ್ತಕ್ಕೆ ಬೆಂಬಲ ಬೆಲೆ ನೀಡುವ ಮೂಲಕ ರೈತರ ಹಿತ ಕಾಪಾಡುತ್ತಿದೆಯಾ ಎಂದು ಕಾದು ನೋಡಬೇಕಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ