ದೆಹಲಿಯಲ್ಲಿ ಡಿಕೆಶಿ ಬೆಂಬಲಿಗರ ಶಕ್ತಿ ಪ್ರದರ್ಶನ: ಇಂದು ರಾಹುಲ್ ಗಾಂಧಿ, ಖರ್ಗೆ ಮಹತ್ವದ ಮೀಟಿಂಗ್ ಸಾಧ್ಯತೆ

ದೆಹಲಿಯಲ್ಲಿ ಡಿಕೆಶಿ ಬೆಂಬಲಿಗರ ಶಕ್ತಿ ಪ್ರದರ್ಶನ: ಇಂದು ರಾಹುಲ್ ಗಾಂಧಿ, ಖರ್ಗೆ ಮಹತ್ವದ ಮೀಟಿಂಗ್ ಸಾಧ್ಯತೆ


ದೆಹಲಿಯಲ್ಲಿ ಡಿಕೆಶಿ ಬೆಂಬಲಿಗರ ಶಕ್ತಿ ಪ್ರದರ್ಶನ: ಇಂದು ರಾಹುಲ್ ಗಾಂಧಿ, ಖರ್ಗೆ ಮಹತ್ವದ ಮೀಟಿಂಗ್ ಸಾಧ್ಯತೆ

ಬೆಂಗಳೂರು, ನವೆಂಬರ್ 25: ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊತ್ತಿರುವ ನಾಯಕತ್ವ ಬದಲಾವಣೆಯ ಕಿಚ್ಚು ದೆಹಲಿಗೂ ವ್ಯಾಪಿಸಿದೆ. ದೆಹಲಿ ನಾಯಕರ ಎದುರೇ ಅಧಿಕಾರ ಹಂಚಿಕೆ ಒಪ್ಪಂದ ಆಗಿರುವ ವಿಚಾರವಿದ್ದು ದೆಹಲಿಯಲ್ಲೇ ಲೆಕ್ಕ ಚುಕ್ತಾ ಮಾಡಲು ಡಿಸಿಎಂ ಡಿಕೆ ಶಿವಕುಮಾರ್ ಬಣ ತಂತ್ರ ಹೂಡಿದ್ದಾರೆ. ಇದೇ ಕಾರಣಕ್ಕೆ ದೆಹಲಿಗೆ ಡಿಕೆ ಬೆಂಬಲಿಗ ಶಾಸಕರ ಒಂದು ಗುಂಪು ತಲುಪಿ ಹೈಕಮಾಂಡ್ ನಾಯಕರ ಮುಂದೆ ಹಾಜರಾತಿ ಹಾಕಿತ್ತು. ಇದೀಗ ಮತ್ತೊಂದು ತಂಡ ದೆಹಲಿಯಲ್ಲಿ ಬೀಡುಬಿಟ್ಟಿದೆ. ಮಾಗಡಿ ಶಾಸಕ ಎಚ್‌ಸಿ ಬಾಲಕೃಷ್ಣ, ಮದ್ದೂರು ಶಾಸಕ ಕದಲೂರು ಉದಯ್, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ಮತ್ತೊಂದೆಡೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಹೈಕಮಾಂಡ್ ನಾಯಕರಿಗೆ ತಲೆನೋವು ತಂದಿದೆ. ಹೀಗಾಗಿ, ಮೂರು ದಿನ ರಾಜ್ಯ ನಾಯಕರ ಅಹವಾಲು ಆಲಿಸುತ್ತಿರುವ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇಂದು ದೆಹಲಿಗೆ ತೆರಳುತ್ತಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜೊತೆಗೆ ಸಭೆ ನಡೆಸುವ ಸಾಧ್ಯತೆ ದಟ್ಟವಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *