ಭಾರತ-ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯ ಬೆನ್ನಲ್ಲೇ ಏಕದಿನ ಸರಣಿ ಆರಂಭ. ನವೆಂಬರ್ 30 ರಂದು ಆರಂಭಗೊಂಡಿರುವ ಈ ಸರಣಿಯ ಮೊದಲ ಪಂದ್ಯದಲ್ಲೇ ರೋಹಿತ್ ಶರ್ಮಾ (ರೋಹಿತ್ ಶರ್ಮಾ) ಹಾಗೂ ವಿರಾಟ್ ಕೊಹ್ಲಿ (ವಿರಾಟ್ ಕೊಹ್ಲಿ) ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ.
ನವೆಂಬರ್ 30 ರಂದು ರಾಂಚಿಯಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾದ ವಿರುದ್ಧ ಆಟಗಾರ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿದರೆ, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ಜೋಡಿ ಎಂಬ ವಿಶ್ವ ದಾಖಲೆ ರೋಹಿತ್, ವಿರಾಟ್ ಹೆಸರಿಗೆ ಸೇರ್ಪಡೆಯಾಗಲಿದೆ.
ಸದ್ಯ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಹೆಸರಿನಲ್ಲಿದ್ದಾರೆ. ಸಚಿನ್-ರಾಹುಲ್ಯು ಜೊತೆಯಾಗಿ 391 ಜೋಡಿ ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ಮೂಲಕ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ಅವರ 391 ಅಂತಾರಾಷ್ಟ್ರೀಯ ಪಂದ್ಯಗಳ ದಾಖಲೆಯನ್ನು ಸರಿಗಟ್ಟಿದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಇದೀಗ ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿದ್ದಾರೆ.
ಅದರಂತೆ ನವೆಂಬರ್ 30 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ಜೋಡಿ ಎಂಬ ವಿಶ್ವ ದಾಖಲೆಯನ್ನು ರೋಹಿತ್ ಶರ್ಮಾ ಹಾಗೂ ವಿರಾಟ್ ತಮ್ಮದಾಗಿಸಿಕೊಳ್ಳಲಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವ ಸರಣಿಗಳ ಮೂಲಕ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ 400 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆಯುವ ಅವಕಾಶ ಕೂಡ ರೋ-ಕೊ ಜೋಡಿ ಮುಂದಿದೆ.




