Headlines

ಡಿಕೆ ಶಿವಕುಮಾರ್ ಜತೆ 40-60 ಶಾಸಕರು? ಸಚಿವ ಜಮೀರ್ ಅಚ್ಚರಿಯ ಹೇಳಿಕೆ

ಡಿಕೆ ಶಿವಕುಮಾರ್ ಜತೆ 40-60 ಶಾಸಕರು? ಸಚಿವ ಜಮೀರ್ ಅಚ್ಚರಿಯ ಹೇಳಿಕೆ


ಬೆಂಗಳೂರು, ನವೆಂಬರ್ 25: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಚರ್ಚೆಗಳ ನಡುವೆ, ಕಾಂಗ್ರೆಸ್‌ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಬಿಜೆಪಿ ಆರೋಪವನ್ನು ಸಚಿವ ಜಮೀರ್ ಅಹ್ಮದ್ ಅಲ್ಲಗಳೆದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುದುರೆ ವ್ಯಾಪಾರ ಎಂಬುದು ಬಿಜೆಪಿಯವರಿಗೆ ಅಭ್ಯಾಸವಾಗಿದೆ. 2008ರಿಂದ ಕರ್ನಾಟಕದಲ್ಲಿ ಬಹುಮತ ಸಿಗದೆ ಅವರು ಆಪರೇಷನ್ ಕಮಲದ ಮೂಲಕ ಸರ್ಕಾರ ರಚಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬೆಳವಣಿಗೆ ಇಲ್ಲ. ಜೊತೆಗೆ, ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ 60 ಶಾಸಕರು ಸಹಿ ಹಾಕಿದ್ದಾರೆ ಎಂಬ ವರದಿಗಳನ್ನು ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *