ಹೀನಾಯ ಅತೀ ಹೀನಾಯ… ಭಾರತ ತಂಡದ್ದು ಅಂತಿಂಥ ಸೋಲಲ್ಲ!

ಹೀನಾಯ ಅತೀ ಹೀನಾಯ… ಭಾರತ ತಂಡದ್ದು ಅಂತಿಂಥ ಸೋಲಲ್ಲ!


ಗುವಾಹಟಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ ಸೋತಿದೆ. ಕೊಲ್ಕತ್ತಾದಲ್ಲಿ ನಡೆದ ಮೊದಲ ಪ್ರದರ್ಶನ 30 ರನ್ ಗಳ ಸೋಲನುಭವಿಸಿದ್ದ ಟೀಮ್ ಇಂಡಿಯಾ ಈ ಬಾರಿ ಪರಾಜಯಗೊಂಡಿದ್ದು ಬರೋಬ್ಬರಿ 408 ರನ್ ಗಳ ಅಂತರದಿಂದ.

93 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಭಾರತ ತಂಡವು ಇದೇ ಮೊದಲ ಬಾರಿಗೆ 400+ ರನ್ಗಳ ಅಂತರದಿಂದ ಸೋಲನುಭವಿಸಿದೆ. ಈ ಮೂಲಕ ಅತ್ಯಂತ ಹೀನಾಯ ಸೋಲನ್ನು ತನ್ನದಾಗಿಸಿಕೊಂಡಿದೆ.

ಇದಕ್ಕೂ ಮುನ್ನ ಟೀಮ್ ಇಂಡಿಯಾ ಅತ್ಯಧಿಕ ರನ್ ಗಳ ಅಂತರದಿಂದ ಸೋತಿದ್ದು ಆಸ್ಟ್ರೇಲಿಯಾ ವಿರುದ್ಧ. 2004 ರಲ್ಲಿ ನಾಗಪುರದಲ್ಲಿ ನಡೆದ ಟೆಸ್ಟ್ ಆಸ್ಟ್ರೇಲಿಯಾ ಟೀಮ್ ಇಂಡಿಯಾಗೆ 543 ರನ್ ಗಳ ಗುರಿ ನೀಡಿದ್ದರು.

ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 200 ರನ್ ಗಳಿಗೆ ಆಲೌಟ್ ಆಗಿ ಬರೋಬ್ಬರಿ 342 ರನ್ ಗಳಿಂದ ಸೋಲೊಪ್ಪಿಕೊಂಡಿದೆ.

ಇದೀಗ ಸೌತ್ ಆಫ್ರಿಕಾ ತಂಡವು ಟೀಮ್ ಇಂಡಿಯಾವನ್ನು ಬರೋಬ್ಬರಿ 408 ರನ್ ಗಳ ಅಂತರದಿಂದ ಬಗ್ಗು ಬಡಿದಿದೆ. ಈ ಮೂಲಕ ಭಾರತ ತಂಡಕ್ಕೆ ಟೆಸ್ಟ್ ಇತಿಹಾಸದಲ್ಲೇ ಹೀನಾಯ ಸೋಲುಣಿಸಿದ ಹಿರಿಮೆಯನ್ನು ತನ್ನದಾಗಿಸಿಕೊಂಡಿದೆ.

ಅಷ್ಟೇ ಅಲ್ಲದೆ 25 ವರ್ಷಗಳ ಬಳಿಕ ಭಾರತದಲ್ಲಿ ಸರಣಿ ಗೆಲ್ಲುವಲ್ಲಿಯೂ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ. ಅದು ಕೂಡ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಮೂಲಕ ಎಂಬುದು ವಿಶೇಷ.

ಒಟ್ಟಿನಲ್ಲಿ ಟೆಸ್ಟ್ ಇತಿಹಾಸದಲ್ಲಿ ತವರಿನ ಹುಲಿಗಳೆಂದು ಗುರುತಿಸಲ್ಪಟ್ಟ ಟೀಮ್ ಇಂಡಿಯಾ ಇದೀಗ ಅತ್ಯಂತ ಹೀನಾಯ ಸೋಲಿನೊಂದಿಗೆ ಭಾರೀ ಮುಖಭಂಗಕ್ಕೆ ಒಳಗಾಗಿದೆ.

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್, ರಯಾನ್ ರಿಕಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಟ್ರಿಸ್ಟನ್ ಸ್ಟಬ್ಸ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಸೆನುರಾನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್.

ಇದನ್ನೂ ಓದಿ: IND vs SA: ಟೀಮ್ ಇಂಡಿಯಾದಿಂದ 8 ಆಟಗಾರರು ಔಟ್

ಭಾರತ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಧ್ರುವ ಜುರೆಲ್, ರಿಷಭ್ ಪಂತ್ (ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.



Source link

Leave a Reply

Your email address will not be published. Required fields are marked *