Headlines

ಬೆಂಗಳೂರು: ಇಂದಿನಿಂದ ಡಿಸೆಂಬರ್ 7ರವರೆಗೆ ಕಬ್ಬನ್ ಪಾರ್ಕ್ನಲ್ಲಿ ಫ್ಲವರ್ ಶೋ!

ಬೆಂಗಳೂರು: ಇಂದಿನಿಂದ ಡಿಸೆಂಬರ್ 7ರವರೆಗೆ ಕಬ್ಬನ್ ಪಾರ್ಕ್ನಲ್ಲಿ ಫ್ಲವರ್ ಶೋ!


ಇಂದಿನಿಂದ ಕಬ್ಬನ್ ಪಾರ್ಕ್‌ನಲ್ಲಿ ಫ್ಲವರ್ ಶೋ!

ಬೆಂಗಳೂರು, ನವೆಂಬರ್ 27: ಪ್ರತಿ ವರ್ಷ ಲಾಲ್ಬಾಗ್ ಫಲ ಪುಷ್ಪ ಪ್ರದರ್ಶನಕ್ಕೆ ಜನರು ಬಂದು ಕಣ್ತುಂಬಿಕೊಳ್ಳುತ್ತಾರೆ. ಇದೇ ಮಾದರಿಯಲ್ಲಿ ಇಂದಿನಿಂದ (ನ.27) ಕಬ್ಬನ್ ಪಾರ್ಕ್‌ನಲ್ಲಿಯೂ (ಕಬ್ಬನ್ ಪಾರ್ಕ್) ಪುಷ್ಪ ಮೇಳಕ್ಕೆ ತೋಟಗಾರಿಕೆ ಇಲಾಖೆ ಚಾಲನೆ ನೀಡಲಿದೆ. ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಹತ್ತು ವರ್ಷಗಳ ಬಳಿಕ ಫ್ಲವರ್ ಶೋ ನಡೆಯುತ್ತಿದ್ದು, ಡಿಸೆಂಬರ್ 7 ರವರೆಗೂ ಪುಷ್ಪ ಪ್ರದರ್ಶನ ನಡೆಯಲಿದೆ.

ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಪ್ರವೇಶ

ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯೋತ್ಸವ ಅಂಗವಾಗಿ ತೋಟಗಾರಿಕೆ ಇಲಾಖೆ ಮಾತ್ರ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನವನ್ನು ನಡೆಸುತ್ತಿದೆ ಈಗ ಕಬ್ಬನ್ ಉದ್ದಾನದಲ್ಲಿ ರಾಜೋತ್ಸವ, ಮಕ್ಕಳ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಪ್ರವೇಶ ಇದ್ದು, ದೊಡ್ಡವರಿಗೆ 30 ರೂ. ಹಾಗೂ ಮಕ್ಕಳಿಗೆ 10 ರೂ. ಶುಲ್ಕದ ಟಿಕೆಟ್ ನಿಗದಿಪಡಿಸಲಾಗಿದೆ.

ಇಲಾಖೆ ಪುಷ್ಪ ಪ್ರದರ್ಶನದ ಜೊತೆಗೆ ಕಲಾ, ಸಂಸ್ಕೃತಿ ಹಬ್ಬವನ್ನೂ ಸಹ ಆಯೋಜಿಸಲಾಗಿದೆ, ಆಲಂಕಾರಿಕ ಕುಂಡಗಳನ್ನೂ ಸಿದ್ಧ ಮಾಡಿಕೊಂಡಿದೆ. ಪುಷ್ಪಗಳಲ್ಲಿ ಪ್ರಾಣಿಗಳ ಕರಕುಶಲಗಳನ್ನು ರಚಿಸಿ ಆಕರ್ಷಿಸುವ ಯೋಜನೆ ರೂಪಿಸಲಾಗಿದೆ. ಕಬ್ಬನ್ ಪಾರ್ಕ್‌ನ ಬ್ಯಾಂಡ್ ಸ್ಟ್ಯಾಂಡ್ ಹತ್ತಿರ 20 ರಿಂದ 25 ಸಾವಿರ ಕುಂಡಗಳನ್ನು ಇಡಲು ಯೋಜನೆ ಮಾಡಿದ್ದು, ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪ್ರದರ್ಶನ ಇರಲಿದೆ ಎಂದು ತೋಟಗಾರಿಕೆ ಇಲಾಖೆಯ ನಿರ್ದೇಶಕಿ ಕುಸುಮಾ ಹೇಳಿದ್ದಾರೆ.

ಇದನ್ನೂ ಓದಿ ಫ್ಲವರ್ ಶೋ ಹಿನ್ನೆಲೆ ಕಬ್ಬನ್ ಪಾರ್ಕ್ ಸುತ್ತ ಮುತ್ತ ಸಂಚಾರ ಬದಲಾವಣೆ

11 ದಿನಗಳ ಕಾಲ ಸಂಚಾರ ನಿರ್ಬಂಧ

ಕಬ್ಬನ್ ಪಾರ್ಕ್‌ನಲ್ಲಿ ಹೂವಿನಲ್ಲಿ ಅರಳಿದ ಆನೆ, ಚಿಟ್ಟೆ, ಡಾಲ್ಫಿನ್ ಕಲಾಕೃತಿಗಳು ಜನರನ್ನು ಆಕರ್ಷಿಸುತ್ತಿವೆ, ಕಬ್ಬನ್ ಪಾರ್ಕ್ ಜನರು ಪುಷ್ಪ ಮೇಳವನ್ನು ನೋಡಲು ಸಿಟಿ ಉತ್ಸಾಹಿಗಳು. ಪಾರ್ಕ್ನ ಒಂದು ಗೇಟ್ ಸಂಚಾರ ನಿಯಂತ್ರಣಕ್ಕೆ ಇಲಾಖೆ ಮುಂದಾಗಿದ್ದು, ಹೈ ಕೋರ್ಟ್ ನಿಂದ ವಿಠಲ್ ಮಲ್ಯ ರಸ್ತೆ ಸಂಪರ್ಕಿಸುವ ರಸ್ತೆ, ಬ್ಯಾಂಡ್ ಸ್ಟ್ಯಾಂಡ್ ಬಾಲಭವನದ ಮುಂಭಾಗದ ರಸ್ತೆ ಸಂಚಾರಕ್ಕೆ ನಿರ್ಬಂಧ ತೋಟಗಾರಿಕೆ ಇಲಾಖೆ ಮುಂದಾಗಿದೆ. ಮುಂದಿನ 11 ದಿನಗಳ ಕಾಲ ಈ ನಿರ್ಬಂಧ ಇರಲಿದೆ, ಇದರಿಂದ ಕಬ್ಬನ್ ಪಾರ್ಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಎದುರಾಗುವ ಸಾಧ್ಯತೆಯಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *