llegal cow transport in Nelamangala: ನೆಲಮಂಗಲದಲ್ಲಿ ಅಕ್ರಮ ಗೋಸಾಗಾಟ: 10 ಗೋವುಗಳ ರಕ್ಷಣೆ | 10 Cows Rescued From Illegal Transport To Slaughterhouse In Nelamangala

ನೆಲಮಂಗಲದಲ್ಲಿ, ಬೆಂಗಳೂರಿನ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳನ್ನು ಶ್ರೀರಾಮ ಸೇನೆ ಕಾರ್ಯಕರ್ತರು ಮತ್ತು ಪೊಲೀಸರು ಜಂಟಿಯಾಗಿ ರಕ್ಷಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ವಾಹನ ತಡೆದು, ಗೋವುಗಳನ್ನು ರಕ್ಷಿಸಲಾಗಿದ್ದು, ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ (.28):ರಾಜಧಾನಿ ಬೆಂಗಳೂರು ನಗರಕ್ಕೆ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 10 ಗೋವುಗಳನ್ನು ನೆಲಮಂಗಲದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಮತ್ತು ಟೌನ್ ಪೊಲೀಸರು ಜಂಟಿಯಾಗಿ ರಕ್ಷಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ, ನೆಲಮಂಗಲ ಟೌನ್ ಪೊಲೀಸರ ನೆರವಿನೊಂದಿಗೆ ಶ್ರೀರಾಮ ಸೇನೆಯ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ, ಕುದೂರು ಮೂಲಕ ಬೆಂಗಳೂರು ನಗರದತ್ತ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದಿದ್ದಾರೆ.

ಹತ್ತು ಗೋವುಗಳು ರಕ್ಷಣೆ:

ಈ ಜಾನುವಾರುಗಳನ್ನು ಗೂಡ್ಸ್ ವಾಹನದಲ್ಲಿ ತುಂಬಿಸಿಕೊಂಡು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ದ್ಯ ರಕ್ಷಿಸಲಾದ 10 ಗೋವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಅಕ್ರಮ ಸಾಗಾಟದಲ್ಲಿ ಭಾಗಿಯಾಗಿದ್ದವರ ವಿರುದ್ಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Source link

Leave a Reply

Your email address will not be published. Required fields are marked *