ಕೃಷ್ಣನೂರು ಉಡುಪಿಗೆ ಇಂದು ಮೋದಿ: ಎಲ್ಲೆಡೆ ಅಲರ್ಟ್, ಎಷ್ಟೊತ್ತಿಗೆ ಏನು ಕಾರ್ಯಕ್ರಮ? ಇಲ್ಲಿದೆ ವಿವರ

ಕೃಷ್ಣನೂರು ಉಡುಪಿಗೆ ಇಂದು ಮೋದಿ: ಎಲ್ಲೆಡೆ ಅಲರ್ಟ್, ಎಷ್ಟೊತ್ತಿಗೆ ಏನು ಕಾರ್ಯಕ್ರಮ? ಇಲ್ಲಿದೆ ವಿವರ


ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಮಾರ್ಗದ ಪೊಲೀಸರಿಂದ ನಿರಂತರ ತಪಾಸಣೆ

ಉಡುಪಿ, ನವೆಂಬರ್ 28: ಎರಡು ದಿನ ಹಿಂದಷ್ಟೇ ಅಯೋಧ್ಯೆಯ ರಾಮ ಮಂದಿರದಲ್ಲಿ ಧರ್ಮ ಧ್ವಜ ಸ್ಥಾಪಿಸಿದ್ದ ಪ್ರಧಾನಿ ಮೋದಿ (ನರೇಂದ್ರ ಮೋದಿ) ಇವತ್ತು ಕೃಷ್ಣನೂರು ಉಡುಪಿಗೆ (ಉಡುಪಿ) ಬರುತ್ತಿದ್ದಾರೆ. ಕೃಷ್ಣಮಠದ ವಿಶ್ವಪರ್ಯಯ ನಡೆಯುತ್ತಿದ್ದು, ಇದರ ಭಾಗವಾಗಿ ಲಕ್ಷ ಕಂಠ ಗೀತೆ ಪರಾಯಣ ಆಯೋಜಿಸಲಾಗಿದೆ. ಅಂದರೆ ಒಂದು ಲಕ್ಷಕ್ಕೂ ಹೆಚ್ಚು ಜನ ಭಕ್ತರು ಇಂದು ಕೃಷ್ಣಮಠದ ಕಾರ್ಯಕ್ರಮದಲ್ಲಿ ಭಗವದ್ಗೀತೆ ಪಠಿಸಲಿದ್ದಾರೆ. ಇದೇ ಐತಿಹಾಸಿಕ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಸಾಕ್ಷಿ ಆಗಲಿದ್ದಾರೆ. ಮೋದಿಯೇ ಭಗವದ್ಗೀತೆ 15 ನೇ ಅಧ್ಯಾಯದ ಶ್ಲೋಕಗಳನ್ನು ಪಠಿಸಲಿದ್ದಾರೆ. ಗೀತೆಯಲ್ಲಿ ಹೆಚ್ಚಿನ ಮಹತ್ವ ಹೊಂದಿರುವ 15 ನೇ ಅಧ್ಯಾಯದ ಕೊನೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ..

ಪ್ರಧಾನಿ ಮೋದಿ ಕಾರ್ಯಕ್ರಮದ

  • ಬೆಳಗ್ಗೆ 11:05ಕ್ಕೆ ಪ್ರಧಾನಿ ಮೋದಿ ಮಂಗಳೂರಿಗೆ ಆಗಮನ
  • ಬೆಳಗ್ಗೆ 11:15ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ
  • ಬೆಳಗ್ಗೆ 11:30ಕ್ಕೆ ಉಡುಪಿಯ ಹೆಲಿಪ್ಯಾಡ್‌ಗೆ ಪ್ರಧಾನಿ ಆಗಮನ
  • ಬೆಳಗ್ಗೆ 11:40 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ರೋಡ್ ಶೋ (ಬನ್ನಂಜೆ ವೃತ್ತದಿಂದ ಕಲ್ಸಂಕ ಜಂಕ್ಷನ್ ವರೆಗೆ)
  • ಮಧ್ಯಾಹ್ನ 12:00 ಗಂಟೆಗೆ ಶ್ರೀ ಕೃಷ್ಣ ಮಠಕ್ಕೆ , ಸ್ವರ್ಣ ಲೇಪಿತ ತೀರ್ಥ ಮಂಟಪ ಮೋದಿ ಭೇಟಿ ಉದ್ಘಾಟನೆ
  • ಮಧ್ಯಾಹ್ನ 1ಗಂಟೆಗೆ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ
  • ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿಯವರ ಭಾಷಣ

ಸ್ವರ್ಣ ಲೇಪಿತ ತೀರ್ಥ ಮಂಟಪವನ್ನು ಮೋದಿ ಉದ್ಘಾಟಿಸಲಿದ್ದಾರೆ. ಪುತ್ತಿಗೆ ಸ್ವಾಮೀಜಿಯವರ ಸನ್ಯಾಸ ಜೀವನದ 50ನೇ ವರ್ಷದ ಹಿಂದಿನ ಹಿನ್ನೆಲೆ 2 ಕೋಟಿ ರೂ. ವೆಚ್ಚದಲ್ಲಿ ತೀರ್ಥ ಮಂಟಪಕ್ಕೆ ಸ್ವರ್ಣ ಲೇಪನ ಮಾಡಲಾಗುವುದು, ಇದು ಇವತ್ತು ಉದ್ಘಾಟನೆಯಾಗಲಿದೆ. ನಂತರ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದರ್ಶನ ಮಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಲಕ್ಷಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

ಪ್ರಧಾನಿ ಮೋದಿಯನ್ನ ಸ್ವಾಗತಿಸಲು ಉಡುಪಿ ಸಜ್ಜಾಗಿ ನಿಂತಿದ್ದು, ಪ್ರಧಾನಿ ಮೋದಿ ಕೂಡ ಈ ಬಗ್ಗೆ ಕನ್ನಡದಲ್ಲೇ ಎಕ್ಸ್’ ಸಂದೇಶ ಪ್ರಕಟಿಸಿ ಸಂತಸ ಹಂಚಿಕೊಂಡಿದ್ದಾರೆ.

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷವಾದ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ನರೇಂದ್ರ ಮೋದಿ ಉಲ್ಲೇಖಿಸಿದ್ದಾರೆ.

ಪ್ರಧಾನಿ ಭೇಟಿ ಉಡುಪಿ ನಗರದಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ, ಡ್ರೋನ್ ಹಾರಾಟವನ್ನು ನಿಷೇಧಿಸಲಾಗಿದೆ. ಮಠದ ಆಸುಪಾಸಿನ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಬಂದೋಬಸ್ತ್‌ಗೆ 3000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬಂದೋಬಸ್ತ್‌ಗೆ 3000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. 10 ಮಂದಿ ಎಸ್ ಪಿ, 27 ಡಿವೈಎಸ್ ಪಿಗಳು, 49 ಇನ್ಸ್ ಪೆಕ್ಟರ್ ಗಳು, 127 ಪಿಎಸ್ ಐ, 232 ಎಎಸ್ ಐ, 1608 ಪಿಸಿಗಳು, 39 ಮಹಿಳಾ ಸಿಬ್ಬಂದಿ, 6 ಕೆಎಸ್ ಆರ್ ಪಿ ತುಕಡಿ, 6 ಕ್ಯೂಆರ್ ಟಿ ತಂಡಗಳ ಭದ್ರತೆ ನಿಯೋಜನೆ ಮಾಡಲಾಗಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಮಾರ್ಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರೋಡ್ ಶೋ ಮಾರ್ಗದ ಸಂಪೂರ್ಣ ಪೊಲೀಸರಿಂದ ನಿರಂತರ ತಪಾಸಣೆ ನಡೆಸಲಾಗಿದೆ. ನಗರದ ಎಲ್ಲಾ ಕಡೆ ಬಾಂಬ್ ಸ್ಕ್ವಾಡ್‌ಗಳಿಂದ ತಪಾಸಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಉಡುಪಿಗೆ ಪ್ರಧಾನಿ ಮೋದಿ ಭೇಟಿ: ಏನೆಲ್ಲಾ ಕಾರ್ಯಕ್ರಮ ನಡೆದಿದೆ ಗೊತ್ತಾ?

ಇದಷ್ಟೇ ಅಲ್ಲದೆ, ಬೆಳಗ್ಗೆ 8 ರಿಂದ ಮಧ್ಯಾಹ್ನ 3ರವರೆಗೆ ಶ್ರೀ ಕೃಷ್ಣ ಮಠಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *