ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ತಡೆಗೆ ದಿಟ್ಟ ನಿರ್ಧಾರ; ಚೀಫ್ ಸೂಪರಿಂಟೆಂಡೆಂಟ್ ಹುದ್ದೆಗೆ IPS ಅಧಿಕಾರಿ

ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ತಡೆಗೆ ದಿಟ್ಟ ನಿರ್ಧಾರ; ಚೀಫ್ ಸೂಪರಿಂಟೆಂಡೆಂಟ್ ಹುದ್ದೆಗೆ IPS ಅಧಿಕಾರಿ


ಪರಪ್ಪನ ಅಗ್ರಹಾರ ಜೈಲಿನ ಚೀಫ್ ಸೂಪರಿಂಟೆಂಡೆಂಟ್ ಆಗಿ IPS ಅಧಿಕಾರಿ ನೇಮಕ

ಬೆಂಗಳೂರು, ನವೆಂಬರ್ 28: ಪರಪ್ಪನ ಅಗ್ರಹಾರದಲ್ಲಿ (ಪರಪ್ಪನ ಅಗ್ರಹಾರ) ಕೈದಿಗಳ ಐಷಾರಾಮಿ ಜೀವನದ ವೀಡಿಯೋಗಳು ವೈರಲ್ ಆಗಿ ಸಾಕಷ್ಟು ಚರ್ಚೆಗೆ ಗುರಿಯಾಗಿದ್ದವು. ಈ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ನಡೆಸುತ್ತಿರುವುದರ ಜೊತೆಗೆ ಜೈಲಿನಲ್ಲಿ ಅಕ್ರಮಗಳಿಗೆ ಬ್ರೇಕ್ ಹಾಕಲು ಸರ್ಕಾರ ಯೋಚಿಸಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಸೆಂಟರ್ ಜೈಲು ಚೀಫ್ ಸೂಪರಿಂಟೆಂಡೆಂಟ್ ಹುದ್ದೆಗೆ ಐಪಿಎಸ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕರ್ಮಕಾಂಡ ತಡೆಗೆ ದಿಟ್ಟ ಕ್ರಮ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸರಣಿ ಕೊಲೆ ಪಾತಕಿ ಉಮೇಶ್ ರೆಡ್ಡಿ, ಐಎಸ್‌ಎಸ್ ಸಂಘಟನೆಯ ಉಗ್ರ ಜುಹಾದ್, ದುಬೈನಿಂದ ಚಿನ್ನ ಕಳ್ಳಸಾಗಣೆ ಆರೋಪಿ ತರುಣ್ ರಾಜ್ ಜೈಲಿನ ಬ್ಯಾರಕ್‌ನಲ್ಲಿ ಮೊಬೈಲ್ ಹಿಡಿದು ಮಾತನಾಡುತ್ತಿದ್ದ, ಟಿ.ವಿ.ವೀಕ್ಷಕರಿಗೆ ಸಿಕ್ಕಿ ಹಾಕಿಕೊಂಡೇ ಹರಿದಾಡುತ್ತಿದ್ದ. ಮಾಂಸ, ಮದ್ಯ ಸೇವಿಸಿ ಜೈಲಿನಲ್ಲಿ ವಿಚಾರಣಾಧೀನ ಕೈದಿಗಳು ನೃತ್ಯ ಮಾಡುತ್ತಿರುವ ವಿಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಪ್ರಕರಣದ ಬಗ್ಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ನೇತೃತ್ವದ ಉನ್ನತ ಮಟ್ಟದ ಸಮಿತಿ ತನಿಖೆ ನಡೆಸುತ್ತಿದೆ. ಈ ನಡುವೆ ಪರಪ್ಪನ ಅಗ್ರಹಾರ ಜೈಲಿನ ಅಕ್ರಮಗಳನ್ನು ತಡೆಯಲು ಮುಂದಾಗಿರುವ ಸರ್ಕಾರ, ಇತಿಹಾಸದಲ್ಲೇ ಮೊದಲ ಬಾರಿಗೆ ಸೆಂಟರ್ ಜೈಲು ಚೀಫ್ ಸೂಪರಿಂಟೆಂಟ್ ಹುದ್ದೆಗೆ ಐಪಿಎಸ್ ಅಧಿಕಾರಿಗಳನ್ನೇ ನೇಮಿಸಲು ನಿರ್ಧರಿಸಲಾಗಿದೆ. ಇದರ ಜೊತೆ ಇನ್ನೂ ಹತ್ತು ಹಲವು ಸುಧಾರಣಾ ಕ್ರಮಗಳ ಬಗ್ಗೆ ಗೃಹ ಇಲಾಖೆ ಹಿರಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಮತ್ತೆ ಅಕ್ರಮ ನಡೆದರೆ ಹಿರಿಯ ಅಧಿಕಾರಿಗಳೇ ಹೊಣೆ

ಚೀಫ್ ಸೂಪರಿಂಟೆಂಡೆಂಟ್ ಹುದ್ದೆಗೆ ಐಪಿಎಸ್ ಅಧಿಕಾರಿ ನಿಯೋಜನೆಯ ಜೊತೆಗೆ ದಿನಕ್ಕ ರೌಂಡ್ಸ್ ಕೈಗೊಳ್ಳುವ ಬದಲು ಇನ್ನು ಮುಂದೆ ಪ್ರತಿದಿನ ಮೂರು ಬಾರಿ ಜೈಲಿನ ಸಿಬ್ಬಂದಿ ಪರಿಶೀಲನೆ ನಡೆಸಬೇಕು. ಪ್ರತಿ ಬ್ಯಾರಕ್‌ನಲ್ಲಿ ಹೆಚ್ಚೆಚ್ಚು ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಿದ್ದು, ಯಾವುದಾದರೂ ಜಾಮರ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಬ್ಯಾರಕ್ ಸುತ್ತ-ಮುತ್ತ ಸಿಗ್ನಲ್ ಮುಕ್ತ ವಲಯಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕೈದಿಗಳ ಮೇಲೆ ಸಿಬ್ಬಂದಿ ಹೆಚ್ಚಿನ ನಿಗಾ ವಹಿಸಲಿದ್ದಾರೆ, ಅಕ್ರಮ ನಡೆದರೆ ಹಿರಿಯ ಅಧಿಕಾರಿಗಳೇ ನೇರ ಹೊಣೆಯಾಗಲಿದ್ದಾರೆ.

ಇದನ್ನೂ ಓದಿ ಪರಪ್ಪನ ಅಗ್ರಹಾರ ಜೈಲಲ್ಲ, ಮದ್ಯದ ಫ್ಯಾಕ್ಟರಿ!: ತನಿಖೆ ವೇಳೆ ಶಾಕಿಂಗ್ ಮಾಹಿತಿ ಬಹಿರಂಗ

ಜೈಲಿನೊಳಗಿನ ಸಿಬ್ಬಂದಿಗೆ ಬಾಡಿವೋರ್ನ್ ಕ್ಯಾಮರಾ ಕಡ್ಡಾಯವಾಗಿದೆ. ಜೊತೆಗೆ ವಿಚಾರಣಾಧೀನ ಮತ್ತು ಸಜಾಬಂಧಿ ಕೈದಿಗಳು ಒಂದೇ ಬ್ಯಾರಕ್‌ನಲ್ಲಿ ಕಂಡುಬಂದಿವೆ. ಅಕ್ರಮ ನಡೆದರೆ ಹಿರಿಯ ಅಧಿಕಾರಿಗಳ ನೇರ ಹೊಣೆ ಅಥವಾ ಎರಡು ಬಾರಿ ಹಿರಿಯ ಅಧಿಕಾರಿಗಳು ಕಾರಾಗೃಹಕ್ಕೆ ಭೇಟಿ ನೀಡಬೇಕು. ಪ್ರಧಾನ ಕಚೇರಿಗೆ ಸಿಸಿಟಿವಿ ದೃಶ್ಯ ಮತ್ತು ಮಾಹಿತಿ ಲಭ್ಯವಾಗುವಂತೆ ಕ್ರಮಕೈಗೊಳ್ಳಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *