Headlines

PM Modi in Udupi: ಉಡುಪಿಯಲ್ಲಿ ಮೋದಿ ರೋಡ್ ಶೋ, ಪ್ರಧಾನಿಯ ಅದ್ಭುತ ಭಾವಚಿತ್ರ ರಚಿಸಿ ತಂದ ವಿದ್ಯಾರ್ಥಿ

PM Modi in Udupi: ಉಡುಪಿಯಲ್ಲಿ ಮೋದಿ ರೋಡ್ ಶೋ, ಪ್ರಧಾನಿಯ ಅದ್ಭುತ ಭಾವಚಿತ್ರ ರಚಿಸಿ ತಂದ ವಿದ್ಯಾರ್ಥಿ


ಉಡುಪಿ, ನವೆಂಬರ್ 28: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಪಿಯಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ಈ ಸಂದರ್ಭದಲ್ಲಿ, ಎಸ್.ಆರ್. ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಹೆಬ್ರಿಯ ವಿದ್ಯಾರ್ಥಿ ಪರೀಕ್ಷಿತ್ ಆಚಾರ್ ವಿಶೇಷ ರೀತಿಯಲ್ಲಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಪರೀಕ್ಷಿತ್ ಅವರು ತಮ್ಮ ಕೈಯಾರೆ ಪ್ರಧಾನಿ ಮೋದಿ ಮತ್ತು ಅವರ ತಾಯಿಯವರ ಸುಂದರ ಭಾವಚಿತ್ರವನ್ನು ರಚಿಸಿದ್ದಾರೆ. ಚಿತ್ರಕಲೆಯಲ್ಲಿ ವಿಶೇಷ ಆಸಕ್ತಿ ಹೊಂದಿರುವ ಪರೀಕ್ಷಿತ್, ಈ ಪೇಂಟಿಂಗ್ ಅನ್ನು ಪೂರ್ಣಗೊಳಿಸಲು ಸುಮಾರು ಎಂಟು ಗಂಟೆಗಳ ಕಾಲ ತೆಗೆದುಕೊಂಡಿದ್ದಾರೆ. ಅಕ್ರಿಲಿಕ್ ಪೇಂಟ್ ಮತ್ತು ಕ್ಯಾನ್ವಾಸ್ ಬೋರ್ಡ್ ಬಳಸಿ ಇದನ್ನು ತಯಾರಿಸಲಾಗಿದೆ. ಮೋದಿ ರೋಡ್ಶೋ ಸಾಗುವ ದಾರಿಯಲ್ಲಿ ಈ ಭಾವಚಿತ್ರವನ್ನು ಪ್ರದರ್ಶಿಸಲು ಪರೀಕ್ಷಿತ್ ಸಿದ್ಧರಾಗಿದ್ದಾರೆ. ಪ್ರಧಾನಿ ಈ ಕಲಾಕೃತಿಯನ್ನು ನೋಡಿ, ಅದನ್ನು ಸ್ವೀಕರಿಸಬಹುದು ಎಂಬ ನಿರೀಕ್ಷೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *