ಉಡುಪಿ, ನವೆಂಬರ್ 28: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನ ಮಂತ್ರಿ ಮೋದಿ ನರೇಂದ್ರ ಭಾಗವಹಿಸಿದ್ದಾರೆ. ಈ ವೇಳೆ ಪರ್ಯಾಯ ಮಠಾಧೀಶರಾದ ಪುತ್ತಿಗೆ ಮಠದ ಶ್ರೀಗಳು ಸಂಸ್ಕೃತದಲ್ಲಿ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ. ಅಯೋಧ್ಯೆ ರಾಮಮಂದಿರ ಕಾರ್ಯದ ಬಗ್ಗೆ ಉಲ್ಲೇಖಿಸಿದ, ಧರ್ಮ ರಕ್ಷಣೆಗೆ ನರೇಂದ್ರ ಮೋದಿಯವರ ಕೊಡುಗೆ ಅಪಾರ ಎಂದು ಶ್ಲಾಘಿಸಿದ್ದಾರೆ. ಜೊತೆಗೆ, ಪ್ರಧಾನಿ ಮೋದಿಗೆ ‘ಭಾರತ ಭಾಗ್ಯವಿದಾತ’ ಬಿರುದು ಸಮರ್ಪಣೆ ಮಾಡಿದ್ದಾರೆ. ರಾಷ್ಟ್ರ ರಕ್ಷಾ ಕವಚ, ಶ್ರೀಕೃಷ್ಣನ ಫೋಟೋ ನೀಡಿ ಪ್ರಧಾನಿಯನ್ನ ಸನ್ಮಾನಿಸಿದ್ದಾರೆ.
ಪ್ರಧಾನಿ ಮೋದಿಯವರ ಜೊತೆಗೆ ವೇದಿಕೆಯಲ್ಲಿ ರಾಜ್ಯಪಾಲ ಗೆಹ್ಲೋಟ್, ಸುಗುಣೇಂದ್ರ ತೀರ್ಥ ಶ್ರೀಗಳು, ಸುಶಿರೀಂದ್ರ ತೀರ್ಥ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಭೈರತಿ ಸುರೇಶ್, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ವೈ.ರಾಘವೇಂದ್ರ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಸುರೇಶ್ ಹೆಗ್ಗಡೆ, ಬಿ.ವೈ.ವಿಜಯೇಂದ್ರ, ಶಾಸಕರಾದ ವಿ.ಸುನೀಲ್ ಕುಮಾರ್, ಕುಮಾರ್.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.