Headlines

ಪರಪ್ಪನ ಅಗ್ರಹಾರ ಜೈಲು ಜಾಲಾಡಿದ ಹೊಸ ಅಧೀಕ್ಷಕ, 33 ಮೊಬೈಲ್, 22 ಸಿಮ್​ ಸೇರಿದಂತೆ ಇತರೆ ವಸ್ತುಗಳು ಪತ್ತೆ

ಪರಪ್ಪನ ಅಗ್ರಹಾರ ಜೈಲು ಜಾಲಾಡಿದ ಹೊಸ ಅಧೀಕ್ಷಕ, 33 ಮೊಬೈಲ್, 22 ಸಿಮ್​ ಸೇರಿದಂತೆ ಇತರೆ ವಸ್ತುಗಳು ಪತ್ತೆ


ಬೆಂಗಳೂರು, (ನವೆಂಬರ್ 28): ಪರಪ್ಪನ ಅಗ್ರಹಾರ ಜೈಲು (ಪರಪ್ಪನ ಅಗ್ರಹಾರ ಜೈಲು) ಐಷಾರಾಮಿ ಸೌಲಭ್ಯಗಳ ತಾಣವಾಗಿದೆ. ಇಲ್ಲಿನ ಹೈಫೈ ಲೈಫ್ನ ವಿಡಿಯೋಗಳು ದಿನಕ್ಕೊಂದರಂತೆ ರಿವೀಲ್ ಆಗುತ್ತಿವೆ. ಅಷ್ಟೇ ಅಲ್ಲದೆ ಜೈಲಿನ ಮೂವರು ಅಧಿಕಾರಿಗಳು ತಲೆದಂಡವಾಗಿದೆ. ಇದರ ಬೆನ್ನಲ್ಲೇ ಇದೀಗ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ಮುಖ್ಯ ಅಧೀಕ್ಷರಾಗಿ ಅಂಶುಕುಮಾರ್ ಅವರನ್ನು ನೇಮಿಸಲಾಗಿದೆ. ಅಧಿಕಾರ ಸ್ವೀಕರಿಸುವಂತೆಯೇ ಅಂಶುಕುಮಾರ್ ಅವರು ಇಡೀ ಜೈಲನ್ನೇ ಜಾಲಾಡಿದ್ದಾರೆ. ಈ ವೇಳೆ 33 ಮೊಬೈಲ್, 22 ಸಿಮ್ ಕಾರ್ಡ್, 5 ಚಾರ್ಜರ್ ಸೇರಿದಂತೆ ಇತರೆ ವಸ್ತುಗಳು.

ಕೈದಿಗಳ ಬಳಿ ಮೊಬೈಲ್, ಸಿಮ್ ಕಾರ್ಡ್ ಪತ್ತೆ

ಹೊಸದಾಗಿ ಮುಖ್ಯ ಅಧೀಕ್ಷಕರಾಗಿ ನೇಮಕವಾಗಿರುವ ಅಂಶುಕುಮಾರ್ ಅವರು ಇಂದು (ನವೆಂಬರ್ 28) ಜೈಲಿನಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 33 ಮೊಬೈಲ್, 22 ಸಿಮ್ ಕಾರ್ಡ್, 5 ಚಾರ್ಜರ್, 4 ಇಯರ್ ಬಡ್ಸ್, 49 ಸಾವಿರ ರೂ. ನಗದು, ಒಂದು ಇಯರ್ ಫೋನ್ ಹಾಗೂ 3 ಚಾಕು ತರಹದ ವಸ್ತುಗಳು ಇವೆ. ಈ ವಸ್ತುಗಳನ್ನು ಬಳಸುತ್ತಿರುವವರು ಯಾರು? ಜೈಲಿಗೆ ಇವುಗಳನ್ನು ತಂದು ಕೊಟ್ಟವರು ಯಾರು? ಎಂಬ ಪ್ರಶ್ನೆಗಳು ಉದ್ಭವಿಸಿದ್ದು, ಕೈದಿಗಳಿಗೆ ಬಳಸಲು ಅವಕಾಶ ಮಾಡಿಕೊಟ್ಟವರ ಮೇಲೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ತಡೆಗೆ ದಿಟ್ಟ ನಿರ್ಧಾರ; ಚೀಫ್ ಸೂಪರಿಂಟೆಂಡೆಂಟ್ ಹುದ್ದೆಗೆ ಐಪಿಎಸ್ ಅಧಿಕಾರಿ

ಜೈಲಿನ ಕೆಲ ಬ್ಯಾರಕ್‌ಗಳಲ್ಲಿ ತಪಾಸಣೆ ವೇಳೆ ಕೈದಿಗಳ ಬಳಿಯಿದ್ದ ಮೊಬೈಲ್ ಫೋನ್, ನಗದು, ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ. ಗುರುವಾರ ರಾತ್ರಿ 8:30 ರಿಂದ 09:30 ಹಾಗೂ 11:05 ರಿಂದ 12:30ರ ವರೆಗೆ ಎರಡು ಬಾರಿ ತಪಾಸಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2021ರಿಂದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಬಂಧನದಲ್ಲಿರುವ ಐಸಿಸ್ ಸಂಘಟನೆಯ ಉಗ್ರ ಜುಹಾಬ್ ಶಕೀಲ್ ಮನ್ನಾ, 2009ರಿಂದ ಬಂಧಿಯಾಗಿರುವ ಸೀರಿಯಲ್ ಕಿಲ್ಲರ್ ಉಮೇಶ್ ರೆಡ್ಡಿ, ಚಿನ್ನಾಭರಣ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಇದೇ ವರ್ಷ ಬಂಧನಕ್ಕೆ ಒಳಗಾಗಿರುವ ಆರೋಪಿ ತರುಣ್ ರಾಜ್ ಜೈಲಿನೊಳಗೆ ಮೊಬೈಲ್ ನಲ್ಲಿ ಬಳಸುತ್ತಿರುವ ವಿಡಿಯೋಗಳು ಇತ್ತೀಚೆಗೆ ವೈರಲ್ ಆಗಿವೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಲ್ಲ, ಮದ್ಯದ ಫ್ಯಾಕ್ಟರಿ!: ತನಿಖೆ ವೇಳೆ ಶಾಕಿಂಗ್ ಮಾಹಿತಿ ಬಹಿರಂಗ

ಕೈದಿಗಳು ಮದ್ಯ ತಯಾರಿಸುತ್ತಿರುವ ವಿಡಿಯೋ ಸಹ ಬಯಲಿಗೆ ಬಂದಿದೆ. ಇದು ತೀವ್ರ ಸ್ವರೂಪ ಪಡೆದುಕೊಳ್ಳುವುದರಿಂದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದು ಕಾರಾಗೃಹ ಇಲಾಖೆ ಎಡಿಜಿಪಿ ಬಿ. ದಯಾನಂದ್ ಅನುಪಸ್ಥಿತಿಯಲ್ಲಿಯೇ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.

ವೈರಲ್ ಆಗಿರುವ ಫೋಟೋ, ವಿಡಿಯೋಗಳನ್ನೇ ತೋರಿಸಿ ಜೈಲು ಅಧಿಕಾರಿಗಳು ತರಾಟೆಗೆ ತೆಗೆದುಕೊಂಡಿದ್ದರು. ಅಷ್ಟೇ ಅಲ್ಲ ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರನ್ನ ಸಸ್ಪೆಂಡ್ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *