ಬೆಂಗಳೂರು, ನ.29: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕರ್ನಾಟಕದ ಜೈಲು ಭದ್ರತಾ ಲೋಪಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಭಯೋತ್ಪಾದಕರ ಕೈಗೆ ಮೊಬೈಲ್ ಫೋನ್ಗಳು ಹೇಗೆ ಸಿಗುತ್ತವೆ ಮತ್ತು ಜೈಲುಗಳಲ್ಲಿ ಡಿಸ್ಟಿಲರಿಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂದು ಕೇಳಿದ್ದಾರೆ. ಸೆಲೆಬ್ರಿಟಿಗಳ ಚಿಕ್ಕಪುಟ್ಟ ತಪ್ಪುಗಳಿಗೆ ಸುಪ್ರೀಂ ಕೋರ್ಟ್ ಮಟ್ಟಕ್ಕೆ ಹೋಗಿ ಜಾಮೀನು ರದ್ದುಗೊಳಿಸುವ ಸರ್ಕಾರವು, ದೇಶದ್ರೋಹಿಗಳ ವಿಷಯದಲ್ಲಿ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ. ಜೈಲಿನಲ್ಲಿ ಈ ಅಕ್ರಮಗಳ ಬಗ್ಗೆ ತನಿಖೆ ನಡೆಸುವ ಬದಲು, ಮಾಹಿತಿ ಸೋರಿಕೆ ಮಾಡಿದವರನ್ನು ಗುರುತಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಟೀಕಿಸಿದ್ದಾರೆ. ಅಷ್ಟೇ ಅಲ್ಲದೆ, ರಾಜ್ಯದಲ್ಲಿ ಪೊಲೀಸರೇ ದರೋಡೆಕೋರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದರ ಜತೆಗ ಬೆಂಗಳೂರಿನಲ್ಲಿ ನಡೆದ 7 ಕೋಟಿ ರೂಪಾಯಿ ದರೋಡೆ ಪ್ರಕರಣವನ್ನು ಉಲ್ಲೇಖಿಸಲಾಗಿದೆ. ಈ ಎಲ್ಲಾ ವಿಚಾರಗಳನ್ನು ವಿರೋಧ ಪಕ್ಷದ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಆರ್. ಅಶೋಕ್.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ