ಬೆಂಗಳೂರು, ನವೆಂಬರ್ 29: ಶ್ರೀಲಂಕಾಗೆ ಅಪ್ಪಳಿಸುವ ದಿತ್ವಾ ಚಂಡಮಾರುತ (ದಿತ್ವಾ ಚಂಡಮಾರುತ) ಭಾರತದ ಮುಖ ಮಾಡಿದೆ. ಹೀಗಾಗಿ, ಭಾರತದ ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆ ಹಳದಿ ಎಚ್ಚರಿಕೆ, ಇನ್ನು ಕೆಲವೆಡೆ ಆರೆಂಜ್ ಎಚ್ಚರಿಕೆ ನೀಡಲಾಗಿದೆ. ಚಂಡಮಾರುತದ ಸಂಪೂರ್ಣ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಚಳಿ ಹಾಗೂ ಮೋಡ ಕವಿದ ವಾತಾವರಣವಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಿತ್ವಾ ಸೈಕ್ಲೋನ್ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನವೆಂಬರ್ 30 ರಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ 7 ಇದೇ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.
ಇದನ್ನೂ ಓದಿ: ಸೈಕ್ಲೋನ್ ದಿತ್ವಾ: ತಮಿಳುನಾಡು ಸಮೀಪಿಸಿದ ದಿತ್ವಾ ಚಂಡಮಾರುತ; ವಿಮಾನಗಳು ಕ್ಯಾನ್ಸಲ್, ಶಾಲೆಗಳು ಬಂದ್, ನಾಳೆ ಭೂಕುಸಿತ ಸಾಧ್ಯತೆ
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳು #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. ಮೂಲ: ಐಎಂಡಿ ಬೆಂಗಳೂರು. #KSNDMC #ಎಚ್ಚರಿಕೆವಹಿಸಿ
ಮುಂದಿನ 5 ದಿನಗಳು #ಮಳೆ #ಮುನ್ಸೂಚನೆ ಗಾಗಿ ನಕ್ಷೆಗಳು #ಕರ್ನಾಟಕ ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ ರಾಜ್ಯ. ಮೂಲ: IMD ಬೆಂಗಳೂರು@ಕರ್ನಾಟಕ ವಾರ್ತೆ #ಕರ್ನಾಟಕ ಮಳೆ pic.twitter.com/kSDanfxUXt— ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿಗಾ ಕೇಂದ್ರ (@ಕರ್ನಾಟಕ ಎಸ್ಎನ್ಡಿಎಂಸಿ) ನವೆಂಬರ್ 29, 2025
ಕರ್ನಾಟಕದ ಉತ್ತರ ಒಳನಾಡಿನ ರಾಜ್ಯಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಕವಿದ ವಾತಾವರಣ ಇರಲಿದೆ, ಹಗುರವಾದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ವಿಪರೀತ ಮಂಜು ಬೀಳುವ ಸಾಧ್ಯತೆ ಇದೆ. ನಾಳೆ (ನ.30) ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಕೊಡಗು ಸೇರಿ 12 ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಉಂಟಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಶ್ರೀಲಂಕಾದಲ್ಲಿ ದಿತ್ವಾ ಚಂಡಮಾರುತದಿಂದ 123 ಜನ ಸಾವು; ತುರ್ತು ಪರಿಸ್ಥಿತಿ ಘೋಷಣೆ
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಉಂಟಾಗುವ ಸಾಧ್ಯತೆಯಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 8:27 pm, ಶನಿ, 29 ನವೆಂಬರ್ 25