ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ (ಸಂಗ್ರಹ ಚಿತ್ರ)
ನವೆಂಬರ್ 1: ಕರ್ನಾಟಕ ಕಾಂಗ್ರೆಸ್ (ಕಾಂಗ್ರೆಸ್) ಅಧಿಕಾರ ಹಂಚಿಕೆ ಚರ್ಚೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಅಧಿವೇಶನ ಮುಗಿದ ಬಳಿಕ ಮತ್ತೆ ಕುರ್ಚಿ ಕಿಚ್ಚು ಭುಗಿಲೇಳುವ ಸಾಧ್ಯತೆ ಇದೆ. ಅಷ್ಟರಲ್ಲಿ ಕಿತ್ತಾಟಕ್ಕೆ ಮದ್ದರೆಯಲು ಹೈಕಮಾಂಡ್ ಯೋಜನೆ ಹಾಕಿಕೊಳ್ಳುತ್ತಿದೆ. ಸದ್ಯಕ್ಕೆ ಬೀಸುವ ದೊಣ್ಣೆಯಿಂದ ಹೈಕಮಾಂಡ್ ಪಾರಾಗಿದ್ದರೆ, ಇದೇ ವಾರದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಕರೆಸಿ ಮಾತಾಡುವ ಸಾಧ್ಯತೆ ಇದೆ. ಈಮಧ್ಯೆ ದೆಹಲಿಯಲ್ಲಿ ಸೋನಿಯಾ ಗಾಂಧಿ ನಿವಾಸದಲ್ಲಿ ಭಾನುವಾರ ಮಹತ್ವದ ಸಭೆ ನಡೆದಿದೆ. ಕಾಂಗ್ರೆಸ್ ಸಂಸದೀಯ ಸಭೆ ಬಳಿಕ ಸೋನಿಯಾ ಜೊತೆ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ವಿದ್ಯಾಮಾನಗಳ ಬಗ್ಗೆ ಚರ್ಚಿಸಿದ್ದಾರೆ. ಸೋನಿಯಾಗೆ ವರದಿ ನೀಡಿರುವ ಗೊಂದಲ ಮಲ್ಲಿಕಾರ್ಜುನ ಖರ್ಗೆ, ತೆರೆಗೆ ಬರುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರವಾಗಿ ಎರಡ್ಮೂರು ನಿಮಿಷಗಳಲ್ಲಿ ಕಾಲ ಖೇರ್ಗೆ ಹಾಗೂ ಸೋನಿಯಾ ಚರ್ಚಿಸಿದ್ದಾರೆ. ಸೋನಿಯಾಗೆ ವರದಿ ನೀಡಿರುವ ಮಲ್ಲಿಕಾರ್ಜುನ ಖರ್ಗೆ, ಸದ್ಯ ಗೊಂದಲಕ್ಕೆ ತೆರೆ ಎಳೆಯುವಂತೆ ಮನವಿ ಮಾಡಿದ್ದಾರೆ.
ನನ್ನ -ಸಿಎಂ ನಡುವೆ ಭಿನ್ನಾಭಿಪ್ರಾಯವಿಲ್ಲ: ಡಿಕೆ ಶಿವಕುಮಾರ್ ಪುನರುಚ್ಚಾರ
ಏತನ್ಮಧ್ಯೆ, ಬ್ರೇಕ್ ಫಾಸ್ಟ್ ಮೀಟಿಂಗ್ ಕುರಿತು ಮತ್ತೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಹಾಗೂ ತಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಪುನರುಚ್ಚರಿಸಿದ್ದಾರೆ. ನಾನು ಯಾವತ್ತೂ ಗುಂಪುಗಾರಿಕೆ ಮಾಡಲ್ಲ. ಏಳೆಂಟು ಶಾಸಕರನ್ನ ದೆಹಲಿಗೆ ಕರೆದುಕೊಂಡು ಹೋಗುವುದು ದೊಡ್ಡ ಕೆಲಸವಲ್ಲ. ನಾನು ಪಕ್ಷದ ಅಧ್ಯಕ್ಷ. 140 ಶಾಸಕರನ್ನು ಕರೆದುಕೊಂಡು ಹೋಗುತ್ತೇನೆ. ಇನ್ನು ದೆಹಲಿಗೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಅದು ನಮ್ಮ ದೇವಸ್ಥಾನ ಎಂದರು.
ದೆಹಲಿ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್ ಇನ್ನೂ ಗುಟ್ಟು ಉಳಿಸಿಕೊಂಡಿದ್ದಾರೆ, ಅತ್ತ ಡಿಕೆಶಿ ಪರ ಮತ್ತು ಸಿಎಂ ಪರ ಘೋಷಣೆಗಳು, ಪೂಜೆಗಳು ಜೋರಾಗಿವೆ. ಕುರುಬ ಸಮುದಾಯ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದು, ಕಲಬುರಗಿಯಲ್ಲಿ ಸುದ್ದಿಗೋಷ್ಠಿ. ಸಿದ್ದರಾಮಯ್ಯ ಬದಲಿಸಿದ್ರೆ ಹುಷಾರ್ ಎಂಬ ಎಚ್ಚರಿಕೆ ಕೊಟ್ಟಿದ್ದಾರೆ.
ಮತ್ತೊಂದೆಡೆ, ಡಿಕೆಶಿ ಸಿಎಂ ಆಗಲೆಂದು ಮೈಸೂರಿನಲ್ಲಿ ಮುಸ್ಲಿಮರು ಸಾಮೂಹಿಕವಾಗಿ ಪ್ರಾರ್ಥನೆ ಮಾಡಿದ್ದಾರೆ. ಹಜರತ್ ಸೈಯದ್ ಗುಮನ್ ಶಾ ಖಾದ್ರಿ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಡಿಕೆಶಿ ಪರ ನಿಂತಿದ್ದಾರೆ.
ಇದನ್ನೂ ಓದಿ: ಗೊಂದಲವನ್ನು ತಿಳಿಗೊಳಿಸಲು ಕರೆದ ಪತ್ರಿಕಾಗೋಷ್ಠಿಯಲ್ಲೇ ಹಲವು ಅನುಮಾನಗಳನ್ನು ಉಳಿಸಿ ಹೋದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್!
ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಬೆನ್ನಲ್ಲೇ ಅನೇಕ ಬೆಳವಣಿಗೆಗಳು ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಡೆಯುತ್ತಲೇ ಇವೆ. ಏಕಾಏಕಿ ಬಿರುಗಾಳಿಯಂತೆ ಬೀಸಿದ್ದ ಬದಲಾವಣೆಯ ಚರ್ಚೆ ಕೊಂಚ ತಣ್ಣಗಾದಂತೆ ಕಾಣಿಸುತ್ತಿದೆ. ಆದರೆ ಅದ್ಯಾವಾಗ ಚಂಡಮಾರುತ ಬಂದಪ್ಪಳಿಸುತ್ತದೆ ಎಂದು ಕೇಳಲು ಸಾಧ್ಯವಿಲ್ಲ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ