ಬೆಂಗಳೂರು, ಡಿಸೆಂಬರ್ 1: ಕರ್ನಾಟಕ ಕಾಂಗ್ರೆಸ್ (ಕಾಂಗ್ರೆಸ್) ಅಧಿಕಾರ ಹಂಚಿಕೆ ತಿಕ್ಕಾಟ ತೀವ್ರಗೊಂಡ ಬೆನ್ನಲ್ಲೇ ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಸಭೆ ನಡೆಯಿತು. ಆ ಹಾಗೂ ಸಿಎಂ ಡಿಸಿಎಂ ಡಿಕೆ ಶಿವಕುಮಾರ್ ಒಗ್ಗಟ್ಟಿನ ಸಂದೇಶ ರವಾನಿಸಿ, ಏನೇ ಆದರೂ ಹೈಕಮಾಂಡ್ ಹೇಳಿದಂತೆ ನಡೆಯುತ್ತೇವೆ ಎಂದಿದ್ದರು. ಆ ಸಿದ್ದರಾಮಯ್ಯ ಅವರು, ಡಿಕೆಶಿ ಕೂಡ ಮನೆಗೆ ಆಹ್ವಾನಿಸಿದ್ದಾರೆ. ಹೋಗುತ್ತೇನೆ. ಇದೀಗ ಅದಕ್ಕೂ ಮುಹೂರ್ತ ಫಿಕ್ಸ್ ಆಗಿದೆ. ಮಂಗಳವಾರ ಬೆಳಗ್ಗೆ 9.30ಕ್ಕೆ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ಖಾಸಗಿ ನಿವಾಸದಲ್ಲಿ ಸಿದ್ದರಾಮಯ್ಯ ‘ಬ್ರೇಕ್‌ಫಾಸ್ಟ್ ಮೀಟಿಂಗ್’ಗೆ ಹಾಜರಾಗಲಿದ್ದಾರೆ.
ಏತನ್ಮಧ್ಯೆ, ಅಧಿಕಾರ ಹಂಚಿಕೆ ತಿಕ್ಕಾಟದ ಅಂತಿಮ ನಿರ್ಧಾರ ಈಗ ಹೈಕಮಾಂಡ್ ಅಂಗಳ ತಲುಪಿದೆ. ದೆಹಲಿಯಲ್ಲಿ ಸೋನಿಯಾ ಗಾಂಧಿ ನಿವಾಸದಲ್ಲಿ ಭಾನುವಾರ ಮಹತ್ವದ ಸಭೆ ನಡೆದಿದ್ದು, ಪರಿಹಾರ ಸೂಚಿಸುವಂತೆ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಕಟಿಸಿದರು.
ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ಹೆಜ್ಜೆ
ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು ತುಸು ಮಟ್ಟಿಗೆ ಶಮನಗೊಂಡ ಬೆನ್ನಲ್ಲೇ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದಾರೆ. ಖರ್ಗೆ ಕರ್ನಾಟಕದವರೇ ಆಗಿಲ್ಲ ಅಥವಾ ಏಕಪಕ್ಷೀಯ ಪಕ್ಷಪಾತ ನಿರ್ಧಾರವಾಗಿ ಹೋಗದಂತೆ ನೋಡಿಕೊಳ್ಳಲು ಎಲ್ಲ ಉನ್ನತ ಮಟ್ಟದ ನಾಯಕರ ಜೊತೆ ಕರೆದು ಚರ್ಚಿಸಲು ಮುಂದಾಗಿದ್ದಾರೆ.
ಈ, ಖರ್ಗೆ ಅವರು ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ, ವೇಣುಗೋಪಾಲ್ ಹಾಗೂ ಐಸಿಸಿಯ ಇತರ ಹಿರಿಯ ನಾಯಕರು ಹಾಗೂ ಗಾಂಧಿ ಕುಟುಂಬದವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಪಕ್ಷದ ಒಳ ಕಲಹ ತೀವ್ರಗೊಳ್ಳದಂತೆ ಪಾರದರ್ಶಕವಾಗಿ ಎಲ್ಲ ನಾಯಕರಿಂದ ‘ಮುಕ್ತ ಅಭಿಪ್ರಾಯ ಸಂಗ್ರಹ’ ನಡೆಸುವ ಕಾರ್ಯ ಪ್ರಗತಿಯಲ್ಲಿದೆ.
ಇದನ್ನೂ ಓದಿ: ಗೊಂದಲವನ್ನು ತಿಳಿಗೊಳಿಸಲು ಕರೆದ ಪತ್ರಿಕಾಗೋಷ್ಠಿಯಲ್ಲೇ ಹಲವು ಅನುಮಾನಗಳನ್ನು ಉಳಿಸಿ ಹೋದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್!
ಮತ್ತೊಂದೆಡೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಡುವಿನ ಈ ಸತತ ಭೇಟಿಗಳು ಶಿಷ್ಟಾಚಾರವಷ್ಟೆಯಾ ಅಥವಾ ಇದರ ಒಳಮರ್ಮ ಬೇರೆಯೇ ಇದೆಯಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಮೂಡಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ