ಚಿಕ್ಕಬಳ್ಳಾಪುರ: ಸಾಲಭಾದೆಯಿಂದ ಬೇಸತ್ತು ವಿಷ ಸೇವಿಸಿದ ವೃದ್ಧ ದಂಪತಿ
ಚಿಕ್ಕಬಳ್ಳಾಪುರ, ಡಿಸೆಂಬರ್ 1: ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಿಕ್ಕಬಳ್ಳಾಪುರ (ಚಿಕ್ಕಬಳ್ಳಾಪುರ) ಜಿಲ್ಲೆಯ ಗುಡಿಬಂಡೆ ತಾಲೂಕಿನ ಪೋಲಂಪಲ್ಲಿ ಗ್ರಾಮದಲ್ಲಿ ನಡೆದಿದೆ. ಜಂಗಾಲಹಳ್ಳಿ ಗ್ರಾಮದವರಾದ ಅಶ್ವತ್ಥಪ್ಪ (70) ಮತ್ತು ಹನುಮಕ್ಕ (65) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಸಾಲ ಬಾಧೆಯಿಂದ ಬೇಸತ್ತ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಗುಡಿಬಂಡೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮೂಲತಃ ಜಂಗಾಲಹಳ್ಳಿ ಗ್ರಾಮದವರಾದ ಅಶ್ವತ್ಥಪ್ಪ (70) ಮತ್ತು ಹನುಮಕ್ಕ (65) ಕೆಲ ವರ್ಷಗಳಿಂದ ಪೋಲಂಪಲ್ಲಿ ಗ್ರಾಮದಲ್ಲಿ ವಾಸವಾಗಿದ್ದರು. ಕುಟುಂಬದ ಆರ್ಥಿಕ ಪರಿಸ್ಥಿತಿ ಹದಗೆಟ್ಟು, ಸಾಲಬಾಧೆ ಹೆಚ್ಚಿದ್ದು, ಅದರಿಂದ ಬೇಸತ್ತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಮುಂಜಾನೆ ಮನೆಯಲ್ಲಿ ಮೂರ್ಛೆ ಹೋದ ಸ್ಥಿತಿಯಲ್ಲಿದ್ದರು, ತಕ್ಷಣ ಗುಡಿಬಂಡೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮುಂದಿನ ತನಿಖೆ ಮುಂದುವರೆದಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣವನ್ನು ಪತ್ತೆಹಚ್ಚಲು ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ.
ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ
ಬೆಂಗಳೂರು ಸಮೀಪದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದಗುಡ್ಡದಹಳ್ಳಿಯಲ್ಲಿ 31 ವರ್ಷದ ಸೌಭಾಗ್ಯ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರದ ನಿವಾಸಿಯಾದ ಸೌಭಾಗ್ಯ, ಕಳೆದ ಎರಡೂವರೆ ವರ್ಷಗಳಿಂದ ಇಬ್ಬರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಒಂದು ವರ್ಷದ ಹಿಂದೆ ಪತಿ ನಿಧನರಾದ ನಂತರ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆಂದು ಕುಟುಂಬದವರು ಹೇಳಿದ್ದಾರೆ.
ಸೌಭಾಗ್ಯ ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ಮನೆ ಮತ್ತು ದೇವಸ್ಥಾನ ಬೇರೆ ಬೇರೆ ಕಡೆ ಹೋಗುವುದಾಗಿ ನೆರೆಹೊರೆಯವರು ಹೇಳಿದ್ದು, ಇತ್ತೀಚಿನ ದಿನಗಳಲ್ಲಿ ಅನಾರೋಗ್ಯ ಹೆಚ್ಚಾದ ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.