Headlines

ಪ್ರಜ್ವಲ್ ಅತ್ಯಾಚಾರ ಕೇಸಿಗೆ ಹೊಸ ತಿರುವು ಕೊಟ್ಟ ವಕೀಲ: ಕೋರ್ಟಿನಲ್ಲಿ ವಾದ ಪ್ರತಿವಾದ ಹೇಗಿತ್ತು?

ಪ್ರಜ್ವಲ್ ಅತ್ಯಾಚಾರ ಕೇಸಿಗೆ ಹೊಸ ತಿರುವು ಕೊಟ್ಟ ವಕೀಲ: ಕೋರ್ಟಿನಲ್ಲಿ ವಾದ ಪ್ರತಿವಾದ ಹೇಗಿತ್ತು?


ಬೆಂಗಳೂರು, (ಡಿಸೆಂಬರ್ 01): ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (ಪ್ರಜ್ವಲ್ ರೇವಣ್ಣ) ಜೀವಿತಾವಧಿ ಶಿಕ್ಷೆಗೆ ಗುರಿಯಾಗಿದೆ. ಆದರೆ, ಇದೀಗ ಈ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಉಚ್ಚರಿಸಲಾಗಿದೆ (ಕರ್ನಾಟಕ ಹೈಕೋರ್ಟ್) ಅರ್ಜಿ ಸಲ್ಲಿಸಿದ್ದು, ಇಂದು (ಡಿಸೆಂಬರ್ 01) ನ್ಯಾಯಮೂರ್ತಿಗಳಾದ ಕೆ.ಎಸ್‌. ಮುದಗಲ್‌ ಮತ್ತು ಟಿ. ವೆಂಕಟೇಶ್‌ ನಾಯಕ್‌ ಪೀಠದ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ಪ್ರಬಲ ವಾದ ಮಂಡಿಸಿದ್ದು, ಸಂತ್ರಸ್ತೆಯ ಮೌನ, ​​ಸಾಕ್ಷ್ಯಗಳ ಮೇಲಿನ ಸಂಶಯಗಳನ್ನು ಮುಂದಿಟ್ಟು ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಮನವಿ ಮಾಡಿದರು.

ಪ್ರಜ್ವಲ್ ಪರ ವಕೀಲರ ವಾದ ಹೇಗಿತ್ತು?

ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ಪ್ರಬಲ ವಾದ ಮಂಡಿಸಿದ್ದು, ಪ್ರಜ್ವಲ್ 2024 ಏಪ್ರಿಲ್ 24 ರಂದು ದೇಶ ತೊರೆಯುವಾಗ ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಆಯಪಲ್ ಮೊಬೈಲ್ ವಶಕ್ಕೆ ನೀಡಿಲ್ಲವೆಂದು ಪ್ರಾಸಿಕ್ಯೂಷನ್ ಆರೋಪಿಸಿದೆ. ಆಯಪಲ್ ಮೊಬೈಲ್ ನೀಡುವಂತೆ ಸೆ.91ರ ಅಡಿ ನೋಟಿಸ್ ನೀಡಿಲ್ಲ. ಐಎಂಐಐ ನಂಬರ್ ಮೊಬೈಲ್ ಕಂಪನಿಯಿಂದ ಮಾಹಿತಿ ಪಡೆಯಲು ಯತ್ನಿಸಿಲ್ಲ. ಸಂತ್ರಸ್ತೆ ದೂರು ದಾಖಲಿಸದೇ 3 ವರ್ಷ ಮೌನವಾಗಿ ಇದ್ದೇಕೆ? ಒಮ್ಮೆಗೇ ನಾಲ್ಕು ಪ್ರತ್ಯೇಕ ಕ್ರಿಮಿನಲ್ ಕೇಸ್‌ಗಳು ಹೇಗೆ ದಾಖಲಾದವು? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಜೀವಿತಾವಧಿ ಶಿಕ್ಷೆ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರಜ್ವಲ್, ಸರ್ಕಾರಕ್ಕೆ ಮಹತ್ವದ ಸೂಚನೆ

ಎಫ್‌ಎಸ್‌ಎಲ್ ಸಾಕ್ಷಿ ಬಗ್ಗೆ ಸಂಶಯ

ಇನ್ನು ಇದೇ ವೇಳೆ ಎಫ್‌ಎಸ್‌ಎಲ್ ಸಾಕ್ಷಿ ಬಗ್ಗೆ ಸಂಶಯ ವ್ಯಕ್ತಪಡಿಸಿದ ವಕೀಲ ಸಿದ್ಧಾರ್ಥ್ ಲೂಥ್ರಾ , ರಾಜಕೀಯ ದುರುದ್ದೇಶದಿಂದ ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂತ್ರಸ್ತೆಯನ್ನು ಸರ್ಕಾರ ಬಳಸಿ ಕೇಸ್ ದಾಖಲಿಸಿದೆ. 2019, 2021ರಲ್ಲಿ ಅತ್ಯಾಚಾರಕ್ಕೆ ಒಳಗಾದರೂ 2023ರಲ್ಲಿ ಸಂತ್ರಸ್ತೆ ಬಂದಿದ್ದೇಕೆ? ಫಾರ್ಮ್‌ಹೌಸ್‌ಗೆ ಬಂದರೂ ಆಕೆಯ ಬಟ್ಟೆಗಳನ್ನು ಹಿಂಪಡೆಯಲಿಲ್ಲವೇ? ಪೊಲೀಸರ ಬಟ್ಟೆಯನ್ನು ವಶಕ್ಕೆ ಪಡೆದಿರುವುದೇ ಸಂಶಯಾಸ್ಪದವಾಗಿದೆ. ಡಿಎನ್‌ಎ ಪರೀಕ್ಷೆ ಮಾಡಿದ ವ್ಯಕ್ತಿಯೇ ಆಯ್ಕೆಯಾಗಿದ್ದಾರೆ. ಹೀಗಾಗಿ FSL ಸಾಕ್ಷಿ ಒಪ್ಪತಕ್ಕದ್ದಲ್ಲವೆಂದು ಪ್ರಬಲ ವಾದ ಮಂಡಿಸಿದರು.

ಹೀಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಹಾಕಿದ ಪ್ರಜ್ವಲ್ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ನಾಡಿದ್ದು ಅಂದರೆ ಬುಧವಾರಕ್ಕೆ ಮುಂದೂಡಿದ್ದು, ಅದು ಹೇಗೆಲ್ಲ ಪ್ರತಿವಾದವು ನಡೆಯುತ್ತೆ? ಇದಕ್ಕೆ ಕೋರ್ಟ್ ಏನು ಹೇಳುತ್ತೆ ಅಂತ ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 4:58 pm, ಸೋಮ, 1 ಡಿಸೆಂಬರ್ 25



Source link

Leave a Reply

Your email address will not be published. Required fields are marked *