ನಟ ರಣವೀರ್ ಸಿಂಗ್ (ರಣವೀರ್ ಸಿಂಗ್) ಅವರು ಹಲವು ಕಾರಣಗಳಿಂದ ಸುದ್ದಿಯಾಗುತ್ತಿದ್ದಾರೆ. ಇತ್ತೀಚೆಗೆ ಅವರು ಗೋವಾ ಸಿನಿಮಾೋತ್ಸವದ ವೇದಿಕೆಯಲ್ಲಿ ಮಾತನಾಡುವಾಗ ದೈವಕ್ಕೆ ಅವಮಾನ ಮಾಡಿದರು. ದೈವ ಎನ್ನುವ ಬದಲು ದೆವ್ವ ಎಂದರು. ರಿಷಬ್ ಶೆಟ್ಟಿ ನಟನೆಯನ್ನು ವಿಚಿತ್ರವಾಗಿ ಅನುಕರಿಸಿ ತೋರಿಸಿದರು. ಇದರಿಂದ ಸೋಶಿಯಲ್ ಮೀಡಿಯಾದಲ್ಲಿ ಅವರು ಟೀಕೆ ಎದುರಿಸುವಂತಾಯಿತು. ಜೊತೆಗೆ, ಈಗ ರಣವೀರ್ ಸಿಂಗ್ ನಟನೆಯ ಹೊಸ ಸಿನಿಮಾ ‘ಧುರಂಧರ’ (ಧುರಂಧರ) ವಿವಾದಕ್ಕೆ ಸಿಲುಕಿದೆ. ಬಿಡುಗಡೆಗೆ ದಿನಗಣನೆ ಶುರುವಾಗಿರುವಾಗ ಸೆನ್ಸಾರ್ ಸಮಸ್ಯೆ ಎದುರಾಗಿದೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಸಂಘರ್ಷದ ಕುರಿತು ‘ಧುರಂಧರ’ ಸಿನಿಮಾ ಸಿದ್ಧವಾಗಿದೆ. ನೈಜ ಘಟನೆಗಳನ್ನು ಆಧರಿಸಿ ಸಿನಿಮಾ ನಿರ್ಮಾಣ ಆಗಿದೆ. ಹುತಾತ್ಮ ಮೇಜರ್ ಮೋಹಿತ್ ಶರ್ಮಾ ಅವರ ಜೀವನವನ್ನು ಆಧರಿಸಿ ಸಿನಿಮಾ ಮಾಡಲಾಗಿದೆ ಎಂಬ ಮಾಹಿತಿ ಇದೆ. ಆ ಕಾರಣಕ್ಕಾಗಿ ಮೋಹಿತ್ ಶರ್ಮಾ ಕುಟುಂಬದವರು ಕೋರ್ಟ್ ಮೆಟ್ಟಿಲು ಏರಿದ್ದಾರೆ.
‘ಧುರಂಧರ’ ಸಿನಿಮಾವನ್ನು ಮಾಡುವುದಕ್ಕೆ ಮೇಜರ್ ಮೋಹಿತ್ ಶರ್ಮಾ ಅವರ ಕುಟುಂಬದವರಿಗೆ ಅವಕಾಶವಿಲ್ಲ. ಅವರ ಸಿನಿಮಾದ ತಪ್ಪು ಮಾಹಿತಿ ಹರಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಕುಟುಂಬದವರು ಚಿತ್ರತಂಡದ ವಿರುದ್ಧ ಆಕ್ಷೇಪ ಎತ್ತಿದ್ದಾರೆ. ದೆಹಲಿ ಹೈಕೋರ್ಟ್‌ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಸಲಾಗಿದೆ.
ಮೇಜರ್ ಮೋಹಿತ್ ಶರ್ಮಾ ಅವರ ಕುಟುಂಬದವರು ಎತ್ತಿರುವ ಆಕ್ಷೇಪಗಳನ್ನು ಪರಿಶೀಲಿಸುವಂತೆ ಸೆನ್ಸಾರ್ ಮಂಡಳಿಗೆ ದೆಹಲಿ ಸೂಚಿಸಿದೆ. ಡಿಸೆಂಬರ್ 5ರಂದು ‘ಧುರಂಧರ’ ಸಿನಿಮಾ ಬಿಡುಗಡೆ ಆಗಬೇಕಿದೆ. ಒಂದು ವೇಳೆ ವಿವಾದ ಹೆಚ್ಚಾದರೆ ಸಿನಿಮಾದ ಬಿಡುಗಡೆಗೆ ತೊಂದರೆ ಆಗುವ ಸಾಧ್ಯತೆ ಇರುತ್ತದೆ. ಡಿಸೆಂಬರ್ 5 ರೊಳಗೆ ಎಲ್ಲ ವಿಘ್ನಗಳನ್ನು ಪರಿಹರಿಸಬೇಕಾಗಿದೆ.
ಇದನ್ನೂ ಓದಿ: ದೈವ ಅವಮಾನಿಸಿದ ರಣವೀರ್ ಸಿಂಗ್‌ಗೆ ಕೌಂಟರ್ ಕೊಟ್ಟ ಅಮೇಜಾನ್ ಪ್ರೈಮ್ ವಿಡಿಯೋ
‘ಉರಿ: ದ ಸರ್ಜಿಕಲ್ ಸ್ಟ್ರೈಕ್’ ಸಿನಿಮಾ ಖ್ಯಾತಿಯ ನಿರ್ದೇಶಕ ಆದಿತ್ಯ ಧಾರ್ ಅವರು ‘ಧುರಂಧರ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಅಂದಾಜು 200 ಕೋಟಿ ರೂಪಾಯಿ ಬಜೆಟ್ ನಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. ರಣವೀರ್ ಸಿಂಗ್ ಜೊತೆ ಸಂಜಯ್ ದತ್, ಅಕ್ಷಯ್ ಖನ್ನಾ, ಆರ್. ಮಾಧವನ್, ಅರ್ಜುನ್ ರಾಮ್, ಸಾರಾ ಅರ್ಜುನ್ ಮುಂತಾದವರು ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.