ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು, ಡಿಸೆಂಬರ್ 2: ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಕರ್ನಾಟಕ ಕಾಂಗ್ರೆಸ್ನ ಜೋಡೆತ್ತುಗಳು ಎಂದೆಂದಿಗೂ ಫೇಮಸ್. ಆದರೆ ಅಧಿಕಾರ ಹಂಚಿಕೆ ವಿಚಾರ ಇಬ್ಬರ ನಡುವಿನ ಅಂತಃಕಹಲದ ಬೇಗುದಿಯನ್ನು ಹಾದಿರಂಪ ಬೀದಿ ರಂಪ ಮಾಡಿದೆ. ಇನ್ನೂ ಕೈ ಮನೆಯ ಕುದಿ ಒಳಗೊಳಗೆ ಕೊತ ಕುದಿಯುತ್ತಿದೆ. ಹೀಗಿರುವಾಗಲೇ ಶನಿವಾರ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಸೂಚನೆ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದರು. ಇಡ್ಲಿ ವಡೆ, ಕೇಸರಿ ಬಾತ್, ಉಪ್ಪಿಟ್ಟು ಸವಿದು ಒಟ್ಟಿಗೆ ಫೋಟೋಗೆ ಫೋಸ್ ಕೊಟ್ಟಿದ್ದರು. ತಿಂಡಿ ಬಳಿಕ ಸುಮಾರು 45 ನಿಮಿಷಗಳ ಕಾಲ ಚರ್ಚಿಸಿ ಹೊರಗೆ ಬಂದವರೇ, ನಮ್ಮಲ್ಲಿ ಗೊಂದಲ ಇಲ್ಲ ಎಂದು ಒಗ್ಗಟ್ಟು ಪ್ರದರ್ಶನ ಮಾಡಲಾಗಿತ್ತು. ಇದೀಗ ಡಿಕೆ ಶಿವಕುಮಾರ್ ಹೇಳಿದಂತೆಯೇ, ಇಂದು ಅವರ ನಿವಾಸದಲ್ಲಿ ಸಿಎಂಗಾಗಿ ಬೆಳಗ್ಗೆ 9:30ಕ್ಕೆ ಬ್ರೇಕ್ ಫಾಸ್ಟ್ ನಡೆಯುತ್ತಿದೆ. ಸಿದ್ದರಾಮಯ್ಯಗೆ ಇಷ್ಟವಾದ ನಾಟಿ ಕೋಳಿ ರೆಸಿಪಿಯನ್ನೇ ರೆಡಿ ಮಾಡಿಸುತ್ತಿದೆ.
ಡಿಕೆ ಶಿವಕುಮಾರ್ ಹೇಳಿದ್ದೇನು?
ನಾನು ಮತ್ತು ಮುಖ್ಯಮಂತ್ರಿಗಳು ಒಟ್ಟಾಗಿ, ಒಂದು ತಂಡವಾಗಿ ಕೆಲಸ ಮಾಡುತ್ತಾರೆ. ಅದನ್ನು ಮುಂದುವರಿಸುತ್ತೇವೆ. ಕರ್ನಾಟಕಕ್ಕೆ ನಾವು ನೀಡುವ ಭರವಸೆಗಳನ್ನು ನೀಡುವ ಯೋಜನೆ, ನಮ್ಮ ಸಾಮೂಹಿಕ ಪ್ರಯತ್ನಗಳ ಬಲ ಹೆಚ್ಚಿಸುವ ಕುರಿತು ಚರ್ಚಿಸಲು ಮಾನ್ಯ ಮುಖ್ಯಮಂತ್ರಿಗಳನ್ನು ಉಪಹಾರಕ್ಕೆ ಆಹ್ವಾನಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಸೋಮವಾರ ತಿಳಿಸಿದರು.
ಸಿಎಂ ಹಾಗೂ ಡಿಸಿಎಂ ನಡುವಣ ಈ ಸಭೆಗಳು ಗೊಂದಲದ ಗೂಡಾಗಿ ಹರಿಯುತ್ತಿರುವುದರ ಮುನ್ಸೂಚನೆ ಎಂದು ಕಾಂಗ್ರೆಸ್ ಪಡೆ ನಂಬಿದೆ. ಹೀಗಾಗಿ ಮಾಜಿ ಸಂಸದ ಡಿಕೆ ಸುರೇಶ್, ಎಲ್ಲ ಸಸೂತ್ರವಾಗಿ ನಡೀತಿದೆ. ಬ್ರೇಕ್‌ಫಾಸ್ಟ್ ಆಗ್ತಿದೆ. ಮತ್ತೊಂದೆಡೆ ಸಚಿವ ದಿನೇಶ್ ಗುಂಡೂರಾವ್, ಇದು ರಾಜಕೀಯಕ್ಕೆ ಮಾತ್ರ ಸೀಮಿತವಾಗಿಲ್ಲ.
ಪ್ರತಿಪಕ್ಷಗಳ ಟೀಕೆಗೆ ಅಸ್ತ್ರವಾದ ಬ್ರೇಕ್ಫಾಸ್ಟ್ ಸಭೆಗಳು
ಕಾಂಗ್ರೆಸ್ ನಾಯಕರ ಈ ಬ್ರೇಕ್ ಫಾಸ್ಟ್ ಮೀಟಿಂಗ್ ವಿಪಕ್ಷಗಳಿಗೆ ಅಸ್ತ್ರವಾಗಿ ಸಿಕ್ಕಿದೆ. ಮಾಜಿ ಸಚಿವ ಶ್ರೀರಾಮುಲು, ಕೈ ದಿಗ್ಗಜರ ನಡುವಿನ ಸಂಧಾನವನ್ನು ರಷ್ಯಾ-ಉಕ್ರೇನ್ ಕದನ ವಿರಾಮಕ್ಕೆ ಹೋಲಿಸಿದ್ದಾರೆ. ಯಾರು? ಯಾವಾಗ ಬಾಂಬ್ ಹಾಕ್ತಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ರಂದು ಪ್ರಕಟಿಸಲಾಗಿದೆ – 6:38 am, ಮಂಗಳವಾರ, 2 ಡಿಸೆಂಬರ್ 25