ಹಾವೇರಿ, ಡಿಸೆಂಬರ್ 2: ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವಂತೆ ನಡೆಯುತ್ತಿದ್ದ ಹೋರಾಟ ಇದೀಗ ಮಗ್ಗಲು ಬದಲಿಸಿದೆ. ರೈತರ ಪ್ರತಿಭಟನೆ (ರೈತರ ಪ್ರತಿಭಟನೆ) ತೀವ್ರಗೊಳ್ಳುತ್ತಿರುವುದರ ಮಧ್ಯೆಯೇ ಸರ್ಕಾರ ಒಬ್ಬ ರೈತನಿಂದ 5 ಕ್ವಿಂಟಲ್ ಮೆಕ್ಕೆಜೋಳ ಖರೀದಿಗೆ ಆದೇಶಿಸಿತ್ತು. ಆದರೆ ಇದೂ ಸಹ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಹಾವೇರಿಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಹಾವೇರಿ ಜಿಲ್ಲೆಯಲ್ಲಿ 12 ಸಾವಿರ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆಯಲಾಗಿದೆ. ಪ್ರತಿ ರೈತನಿಂದ 5 ಕ್ವಿಂಟಲ್ ಮೆಕ್ಕೆಜೋಳ ಖರೀದಿಗೆ ಸೂಚಿಸಲಾಗಿದೆ. ಹಾಗಾದರೆ ಉಳಿದ ಮೆಕ್ಕೆಜೋಳವನ್ನು ಏನು ಮಾಡುವುದು ಎಂದು ರೈತರು ಪ್ರಶ್ನಿಸಿದ್ದಾರೆ. ಜೊತೆಗೆ, ಸರ್ಕಾರದ ಪ್ರತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಅಧಿವೇಶನಕ್ಕೆ ಹೋಗುವ ವೇಳೆ ಹೆದ್ದಾರಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದೆ.
ಕೊಪ್ಪಳ, ವಿಜಯನಗರದಲ್ಲೂ ಪ್ರತಿಭಟನೆ
ಈವರೆಗೂ ಮೆಕ್ಕೆಜೋಳ ಖರೀದಿ ಕೇಂದ್ರದ ಹಿನ್ನೆಲೆ ಕೊಪ್ಪಳ ಮತ್ತು ವಿಜಯನಗರದಲ್ಲಿ ಬಿಜೆಪಿಯಿಂದಲೂ ಪ್ರತಿಭಟನೆ ನಡೆಸಲಾಯಿತು. ಕೊಪ್ಪಳದ ಅಶೋಕ ವೃತ್ತದಲ್ಲಿ ಎತ್ತಿನಬಂಡಿಗಳನ್ನು ತಂದು, ಮೆಕ್ಕೆಜೋಳ ರಸ್ತೆಗೆ ಸುರಿದು ಪ್ರತಿಭಟನೆ ನಡೆಸಲಾಯಿತು. ವಿಜಯ ನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಮಾಜಿ ಸಚಿವ ಕರುಣಾಕರ ರೆಡ್ಡಿ ನೇತ್ರತ್ವದಲ್ಲಿ ಹೋರಾಟ.
ಗದಗದಲ್ಲಿ ಖರೀದಿ ಕೇಂದ್ರ ಓಪನ್: ರೈತರ ಸಂಭ್ರಮ
ಮೆಕ್ಕೆಜೋಳ ಖರೀದಿ ಕೇಂದ್ರಕ್ಕಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ 17ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದ ಗವಿಮಠದ ಕುಮಾರ ಮಹಾರಾಜ್ ಸ್ವಾಮೀಜಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಕೊನೆಗೂ ರೈತರ ಹೋರಾಟಕ್ಕೆ ಗದಗ ಮಣಿದಿದ್ದು ಖರೀದಿ ಕೇಂದ್ರ ಆರಂಭವಾಗಿದೆ. ಸೋಮವಾರ ರಾತ್ರಿ 10ಗಂಟೆ ವೇಳೆಗೆ ಡಿಸಿ ಸಿ.ಎನ್ ಶ್ರೀಧರ್ ರೈತರ ಹೋರಾಟದ ವೇದಿಕೆಗೆ ಆಗಮಿಸಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡುವಂತೆ ರೈತರು ಸಂಭ್ರಮಾಚರಣೆ ನಡೆಸಿದರು.
ಮೆಕ್ಕೆಜೋಳ ಖರೀದಿ ಸಂಬಂಧ ಸಿಎಂ ಮತ್ತೊಮ್ಮೆ ಸಭೆ
ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದೆಯೇ ಸಿಎಂ ಸಿದ್ದರಾಮಯ್ಯ, ಪಶು ಮತ್ತು ಕುಕ್ಕುಟ ಉತ್ಪಾದಕರೊಂದಿಗೆ ಸೋಮವಾರ ಸಭೆ. ಪಶು ಮತ್ತು ಕುಕ್ಕುಟ ಆಹಾರ ಉತ್ಪಾದನಾ ವಲಯದ ಇಂಡೆಂಟ್ ನೀಡಿ 5ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ತಕ್ಷಣ ಪ್ರಾರಂಭಿಸಲು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಮೆಕ್ಕೆಜೋಳಕ್ಕೆ ಬೆಂಬಲ ಬೆಲೆಗೆ ರೈತರ ಕಿಚ್ಚು: ಸಿಡಿದೆದ್ದ ಅನ್ನದಾತರು, ರಾಜ್ಯಾದ್ಯಂತ ಪ್ರತಿಭಟನೆಯ ಸುಳಿವು
ಬೆಳಗಾವಿ ಅಧಿವೇಶನದ ವೇಳೆ ಭಾರಿ ಪ್ರತಿಭಟನೆಯ ಎಚ್ಚರಿಕೆ
ಮೆಕ್ಕೆಜೋಳ ಖರೀದಿ ಕೇಂದ್ರಗಳನೋ ಓಪನ್ ಆಗುತ್ತಿದೆ. ಆದರೆ, ಒಬ್ಬ ರೈತನಿಂದ 5 ಕ್ವಿಂಟಲ್ ಮಾತ್ರ ಖರೀದಿಗೆ ಸರ್ಕಾರ ಆದೇಶಿಸಿದೆ. ಇದು ರೈತರನ್ನು ಬಂಧಿಸಿದ್ದು, ಆದೇಶ ಹಿಂಪಡೆಯದಿದ್ದರೆ ಬೆಳಗಾವಿ ಅಧಿವೇಶನದ ವೇಳೆ ಭಾರಿ ಪ್ರತಿಭಟನೆಗೆ ಎಚ್ಚರಿಕೆ ನೀಡಲಾಗಿದೆ.
ವರದಿ: ಅಣ್ಣಪ್ಪ ಬಾರ್ಕಿ, ಟಿವಿ9, ಹಾವೇರಿ
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ