ಚಿಕ್ಕಮಗಳೂರು, ಡಿಸೆಂಬರ್ 2: ಚಿಕ್ಕಮಗಳೂರಿನ ಕಳಸ ತಾಲೂಕಿನ ಗಂಗಾಮೂಲ ಪ್ರದೇಶದಲ್ಲಿರುವ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆ ಸಂಚಾರ ಕಾಣಿಸಿಕೊಂಡಿದೆ. ರಸ್ತೆಯ ಪಕ್ಕದ ದೈತ್ಯ ಒಂಟಿ ಸಲಗ ಅಡ್ಡಾಡುತ್ತಿದ್ದಾಗ, ಕಾರ್ಕಳ–ಶೃಂಗೇರಿ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಮುಂಜಾಗ್ರತಾ ಕ್ರಮವಾಗಿ ಕುರಿಂಜಾಲು ಮತ್ತು ಗಂಗಡಿಕಲ್ಲು ಚಾರಣಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕ ನಿಷೇಧ ಹೇರಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ