ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಮತ್ತು ತೆಲುಗು ಚಿತ್ರರಂಗದ ಸ್ಟಾರ್ ನಟ ಪವನ್ ಕಲ್ಯಾಣ್ (ಪವನ್ ಕಲ್ಯಾಣ್) ಅವರಿಗೆ ತೆಲಂಗಾಣ ರಾಜ್ಯದ ಕೆಲ ಮಂತ್ರಿಗಳು, ರಾಜಕೀಯ ಸಂಸ್ಥೆಯ ಎಚ್ಚರಿಕೆ ನೀಡಲಾಗಿದೆ. ಪವನ್ ಕಲ್ಯಾಣ್ ಅವರು, ತೆಲಂಗಾಣ ಜನತೆಯ ಕ್ಷಮೆ ಕೇಳದೇ ಹೋದರು, ಪವನ್ ಕಲ್ಯಾಣ್ ಸಿನಿಮಾಗಳನ್ನು ತೆಲಂಗಾಣದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ತೆಲಂಗಾಣದಾದ್ಯಂತ ಪ್ರತಿಭಟನೆ ಮಾಡುವುದಾಗಿ ಹೇಳಿದ್ದಾರೆ. ಅಷ್ಟಕ್ಕೂ ಪವನ್ ಕಲ್ಯಾಣ್ ಹೇಳಿದ್ದೇನು?
ಆಂಧ್ರ ಡಿಸಿಎಂ ಆಗಿರುವ ಜೊತೆಗೆ ಆಂಧ್ರ ಪ್ರದೇಶದ ಅರಣ್ಯ ಸಚಿವ, ಗ್ರಾಮೀಣಾಭಿವೃದ್ಧಿ ಸಚಿವರೂ ಆಗಿರುವ ಪವನ್ ಕಲ್ಯಾಣ್ ಇತ್ತೀಚೆಗಷ್ಟೇ ಆಂಧ್ರ ಪ್ರದೇಶದ ಕೋನಸಿಮ ಜಿಲ್ಲೆಗೆ ಭೇಟಿ ನೀಡಿದ್ದರು. ಇದೊಂದು ಸರ್ಕಾರಿ ಭೇಟಿ. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಪವನ್ ಕಲ್ಯಾಣ್, ಕೋನಸೀಮ ಜಿಲ್ಲೆಯಲ್ಲಿ ಬೆಳೆ ನಷ್ಟವಾಗಲು, ಹಸಿರು ನಷ್ಟವಾಗಲು ತೆಲಂಗಾಣ ಜನರ ದೃಷ್ಟಿ ಕೆಟ್ಟ ಕಾರಣ ಎಂದಿದ್ದರು. ಪವನ್ ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
‘ಕೋನಸೀಮ ಹಚ್ಚ ಹಸಿರಿನ ಬೀಡಾಗಿತ್ತು. ಇಲ್ಲಿ ತೆಂಗಿನ ಕೃಷಿ ಅದ್ಭುತವಾಗಿತ್ತು. ತೆಂಗು ಬೆಳೆದುಕೊಂಡು ನೆಮ್ಮದಿಯಿಂದ ಇಬ್ಬರು ಇಲ್ಲಿಯ ಜನ. ಎರಡು ರಾಜ್ಯಗಳು ಬೇರೆ ಆಗಲು ಸಹ ಹಚ್ಚ ಹಸಿರು, ಸಮೃದ್ಧ ಕೃಷಿಯೇ ಕಾರಣವಾಯ್ತು. ಅದರಂತೆ ಇಲ್ಲಿನ ತೆಂಗು ಬೆಳೆ ತೆಲಂಗಾಣ ಜನ, ನಾಯಕರ ಕಣ್ಣು ಕುಕ್ಕಿತು. ಅವರ ಕೆಟ್ಟ ದೃಷ್ಟಿ ಬಿದ್ದು ತೆಂಗು ಕೃಷಿ ಎಂಬುದೇ ಇಲ್ಲ. ಎಲ್ಲಾ ಹಸಿರು ಸಹ ಮಾಯ ಆಗಿಬಿಟ್ಟಿದೆ’ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.
ಇದನ್ನೂ ಓದಿ:ಅರ್ಧಕ್ಕೆ ನಿಂತು ಹೋಯ್ತು ಪವನ್ ಕಲ್ಯಾಣ್ ನಟನೆಯ ಸಿನಿಮಾ
ಪವನ್ ಹೇಳಿಕೆಗೆ ತೆಲಂಗಾಣದ ಎಲ್ಲ ರಾಜಕೀಯ ಪಕ್ಷಗಳ ವಿರುದ್ಧ ವಿರೋಧ ವ್ಯಕ್ತಪಡಿಸಿದ್ದಾರೆ. ಆಡಿತಾರೂ ಕಾಂಗ್ರೆಸ್, ವಿಪಕ್ಷವಾದ ಬಿಆರ್ ಎಸ್ ಈ ಕೆಲವು ರಾಜಕೀಯ ಪಕ್ಷಗಳು ಪವನ್ ಕಲ್ಯಾಣ್ ಹೇಳಿಕೆಯನ್ನು ಖಂಡಿಸಿದ್ದು, ಕ್ಷಮೆಗೆ ಕಂಡುಬಂದಿವೆ. ಇದರ ಜೊತೆಗೆ ಹಾಲಿ ಸಿನಿಮಾಟೋಗ್ರಫಿ ಸಚಿವ ಕೋಮಟಿ ರೆಡ್ಡಿ ಮಾತನಾಡಿ, ‘ಪವನ್ ಕಲ್ಯಾಣ್ ಅವರ ತೆಲಂಗಾಣ ಜನರ ಬಳಿ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಅವರ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ’ ಎಂದು ಹೇಳಿದರು.
‘ಪವನ್ ಕಲ್ಯಾಣ್, ಅಜ್ಞಾನದ ಮಾತುಗಳನ್ನಾಡಿದ್ದಾರೆ. ಅವರಿಗೆ ರಾಜಕೀಯ ಪ್ರಬುದ್ಧತೆ ಇಲ್ಲ’ ಎಂದಿರುವ ಸಚಿವ ಕೋಮಟಿ ರೆಡ್ಡಿ, ‘ಪವನ್ ಅವರ ಸಹೋದರ ಚಿರಂಜೀವಿವಾದ ವ್ಯಕ್ತಿ, ಅವರಾದರೂ ಸಹೋದರನಿಗೆ ಬುದ್ಧಿ ಹೇಳಬೇಕು’. ಕಾಂಗ್ರೆಸ್ ಮುಖಂಡರು ಮಾತನಾಡಿ, ‘ತೆಲಂಗಾಣ ಜನರೇ ಪವನ್ ಕಲ್ಯಾಣ್ ಸಿನಿಮಾಗಳನ್ನು ಹೆಚ್ಚು ನೋಡುತ್ತಿದ್ದಾರೆ, ಆದರೆ ಈಗ ಅದೇ ಅಹಂಕಾರದಿಂದ ತೆಲಂಗಾಣ ಜನರ ವಿರುದ್ಧ ಪವನ್ ಮಾತನಾಡಿದ್ದಾರೆ. ಅಸಲಿಗೆ ಅವರು ಹಾಗೂ ಅವರ ಕುಟುಂಬ ವಾಸಿಸುತ್ತಿರುವುದೇ ತೆಲಂಗಾಣಕ್ಕೆ ಸೇರಿದ ಹೈದರಾಬಾದ್ನಲ್ಲಿ. ಅವರು ಕೂಡಲೇ ಕ್ಷಮೆ ಕೇಳಬೇಕು, ಇಲ್ಲವಾದರೆ ತಮ್ಮ ಕುಟುಂಬ ಸಮೇತ ತೆಲಂಗಾಣ ಬಿಟ್ಟು ಹೊರಡಬೇಕು’.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ