ಬೆಂಗಳೂರು, ಡಿಸೆಂಬರ್ 03: ನಿರ್ಮಾಣ ಕಟ್ಟಡದಲ್ಲೇ ಟೆಕ್ಕಿ (ಟೆಕ್ಕಿ) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (ಆತ್ಮಹತ್ಯೆ) ಶರಣಾಗಿರುವಂತಹ ವೈಟ್ಫೀಲ್ಡ್ ಪೊಲೀಸ್ ಠಾಣಾ ಘಟನೆ ನಡೆದಿದೆ. ಡೆತ್‌ನೋಟ್ ಬರೆದಿಟ್ಟು ಮುರುಳಿ ಗೋವಿಂದರಾಜು ಆತ್ಮಹತ್ಯೆಗೆ ಶರಣಾದ ಟೆಕ್ಕಿ. ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
ನಡೆದದ್ದೇನು?
ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಮುರುಳಿ, ಶಶಿ ನಂಬಿಯಾರ್ ಮತ್ತು ಉಷಾ ನಂಬಿಯಾರ್ ಎಂಬುವವರಿಂದ 2018ರಲ್ಲಿ ನಿವೇಶನ ಖರೀದಿಸಿದ್ದರು. ಆದರೆ ಕಟ್ಟಡ ನಿರ್ಮಾಣ ಮಾಡಲು ಬಿಡದೆ ತೊಂದರೆ ನೀಡುವಂತೆ. ಜೊತೆಗೆ 20 ಲಕ್ಷ ರೂ ಕೊಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಮದ್ವೆಯಾಗುವ ಕನಸು ಹೊತ್ತು ಮನಸ್ಸು ಕೊಟ್ಟವಳು ದುರಂತ ಸಾವು: ನಟಿ ಆಶಿಕಾ ರಂಗನಾಥ್ ಸಂಬಂಧಿ ಸಾವಿನ ರಹಸ್ಯ ಬಯಲು
ಕಾನೂನು ಬಾಹಿರವಾಗಿ ಕಟ್ಟಡ ನಿರ್ಮಾಣವಾಗುತ್ತಿದ್ದು ಉಷಾ ನಂಬಿಯಾರ್ ದೂರು ಹಿನ್ನಲೆ ಗ್ರೇಟರ್ ಬೆಂಗಳೂರು ಅಥಾರಿಟಿಯಿಂದ ಮುರುಳಿ ನೋಟಿಸ್ ಬಂದಿತ್ತು. ಇದರಿಂದ ಬೇಸತ್ತ ಮುರಳಿ ಮನನೊಂದು ನಿರ್ಮಾಣ ಕಟ್ಟಡದ ಕಟ್ಟಡದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಬ್ಬರ ಬಂಧನ
ಇನ್ನು ಸಾವಿಗೂ ಮುನ್ನ ಮುರಳಿ ಡೆತ್ ನೋಟ್ ಬರೆದಿಟ್ಟಿದ್ದು, ತನಗೆ ಜಿಬಿಎಯಿಂದ ನೋಟಿಸ್ ಕೊಡಿಸಲು ಪಕ್ಕದ ಮನೆಯ ಉಷಾ ನಂಬಿಯಾರ್ ಕಾರಣವಾಗಿದ್ದಾರೆಂದು ಆರೋಪಿಸಿ ಅವರ ಹೆಸರು ಉಲ್ಲೇಖಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಶಶಿ ಮತ್ತು ಉಷಾ ನಂಬಿಯಾರ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜು ರಸ್ತೆ ಬಳಿ ಇಂದು ಬೆಳಗಿನ ಜಾವ ನಡೆದಿದೆ. ಅಶೋಕನಗರ ನಿವಾಸಿ ಈಶ್ವರ್ (30) ಮೃತ ವ್ಯಕ್ತಿ. ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪ್ರೀತಿಸಿದವರಿಂದಲೇ ಕಿರುಕುಳ: ಆತ್ಮಹತ್ಯೆ ಮಾಡಿಕೊಂಡ ಸ್ಯಾಂಡಲ್ವುಡ್ ನಟಿಯ ಸಂಬಂಧ
ಮೃತ ಈಶ್ವರ್ ಸರ್ಕಾರಿ ಆಯುರ್ವೇದ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ಮದ್ಯವ್ಯಸನಿಯಾಗಿತ್ತು. ಸದ್ಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.