ಮಡಿಕೇರಿ, ಡಿಸೆಂಬರ್ 4: ದಿತ್ವಾ ಚಂಡಮಾರುತದ ಪರಿಣಾಮ ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಬುಧವಾರ ರಾತ್ರಿ 9 ಗಂಟೆಯಿಂದಲೇ ಜಿಲ್ಲೆಯ ಹಲವು ಕಡೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಅಕಾಲಿಕ ಮಳೆಯಿಂದ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕೊಯ್ಲಿಗೆ ಬಂದಿದ್ದ ಭತ್ತ ಮತ್ತು ಕಾಫಿ ಬೆಳೆ ಹಾನಿಯಾಗುವ ಆತಂಕ ಎದುರಾಗಿದೆ. ಜೊತೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ರಸ್ತೆಗಳ ಮೇಲೂ ಮಳೆಯ ಪರಿಣಾಮ ಸ್ಪಷ್ಟವಾಗಿ ಗೋಚರಿಸಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ