ಬೆಂಗಳೂರು, ಡಿಸೆಂಬರ್ 4: ಸ್ಟ್ರೋಕ್ ಆಗಿ ವ್ಹೀಲ್ ಸಾಗಿಸುತ್ತಿದ್ದ ಮಹಿಳೆಯನ್ನು ಕ್ರೂರವಾಗಿ ಕೊಲೆ ಮಾಡಿದ ವ್ಯಕ್ತಿ ನಂತರ ತಾವೂ ಆತ್ಮಹತ್ಯೆಗೆ ಶರಣಾದ ದಾರುಣ ಬೆಂಗಳೂರು ಘಟನೆ (ಬೆಂಗಳೂರು) ದಕ್ಷಿಣ ಕ್ಷೇತ್ರದ ಸುಬ್ರಮಣ್ಯಪುರದ ಚಿಕ್ಕಗೌಡನ ಪಾಳ್ಯದಲ್ಲಿ ನಡೆದಿದೆ. ಬಿಎಂಟಿಸಿಯ ಚಾಲಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ವೆಂಕಟೇಶನ್ (65), ಮಂಗಳವಾರ ರಾತ್ರಿ ಪತ್ನಿ ಬೇಬಿ (65) ಅವರನ್ನು ಕೊಂದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೇಬಿ ಅವರಿಗೆ ಕೆಲವು ತಿಂಗಳ ಹಿಂದೆ ಸ್ಟ್ರೋಕ್ ಆಗಿದೆ. ನಂತರ ಅವರು ವ್ಹೀಲ್ ಚೇರ್ ನಲ್ಲೇ ಜೀವನ ಸಾಗಿಸುತ್ತಿದ್ದರು. ದಂಪತಿಗಳಿಗೆ ಇಬ್ಬರು ಮಕ್ಕಳಿದ್ದು, ಮಕ್ಕಳು ಕೆಲಸದ ನಿಮಿತ್ತ ಮನೆಯ ಹೊರಗೆ ಇದ್ದಾಗ ಘಟನೆ ನಡೆದಿದೆ.
ಮಕ್ಕಳು ಕೆಲಸಕ್ಕೆ ಹೋದಾಗ ದಂಪತಿಗಳು ಸಣ್ಣಪುಟ್ಟ ವಿಚಾರಕ್ಕೂ ಜಗಳವಾಡುತ್ತಿದ್ದರು ಎಂದು ಕುಟುಂಬಸ್ಥರು. ನವೆಂಬರ್ 2 ಮಂಗಳವಾರವೂ ವೃದ್ಧ ದಂಪತಿಯ ನಡುವೆ ಜಗಳವಾಗಿದೆ. ಇದು ವಿಕೋಪಕ್ಕೆ ತಿರುಗಿದ್ದು, ಕೋಪೋದ್ರಿಕ್ತರಾದ ವೆಂಕಟೇಶನ್ ಬಟ್ಟೆ ಒಣಗಿಸುವ ವೈರ್‌ನಿಂದ ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಬಳಿಕ ಅದೇ ವೈರ್ ಬಳಸಿ ತಾನೂ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಡ್ರಗ್ ಮಾಫಿಯಾ ವಿರುದ್ಧ ಬೆಂಗಳೂರು ಪೊಲೀಸರ ಸತತ ದಾಳಿ: 11ನೇ ತಿಂಗಳು 146 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ
ಮಧ್ಯಾಹ್ನ ಸೊಸೆ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಮೃತದೇಹಗಳು ಕಾಣಿಸಿವೆ. ತಕ್ಷಣ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ.
ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ