ಶಿವಮೊಗ್ಗ, ಡಿಸೆಂಬರ್ 04: ಧರ್ಮಸ್ಥಳ ‘ಬುರುಡೆ’ ಪ್ರಕರಣದ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೋರ್ಟ್ ಜಾಮೀನು ನೀಡಿ ವಾರ ಕಳೆದರೂ ಬಿಡುಗಡೆ ಭಾಗ್ಯಮಾತ್ರ ಸಿಕ್ಕಿಲ್ಲ. ನವೆಂಬರ್ 26 ರಂದು ಚಿನ್ನಯ್ಯಗೆ ನ್ಯಾಯಾಲಯದಿಂದ ಜಾಮೀನು ಮಂಜೂರು ಆಗಿದೆ. ಇಬ್ಬರು ಜಾಮೀನುದಾರರು, 1 ಲಕ್ಷ ಭದ್ರತೆ ಬಾಂಡ್ ನೀಡಲು ಕೋರ್ಟ್ ಆದೇಶ ನೀಡಿದೆ. ಆದರೆ, ಯಾರೂ ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡಿದ ಹಿನ್ನೆಲೆ ಇನ್ನೂ ಶಿವಮೊಗ್ಗದ ಜೈಲಿನಲ್ಲಿಯೇ ಚಿನ್ನಯ್ಯ ಇದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಆರೋಪಿಸಿದ್ದಾರೆ ಚಿನ್ನಯ್ಯ ಹೇಳಿದ ಸ್ಥಳಗಳಲ್ಲೆಲ್ಲಾ ಅಗೆದು ಪರೀಕ್ಷಿಸಲಾಗಿದೆ. ಆದರೆ ಯಾವುದೇ ಮಹತ್ವದ ಸುಳಿವು ಅಥವಾ ಆರೋಪಕ್ಕೆ ಪೂರಕವಾದ ಅಂಶಗಳು ಇರಲಿಲ್ಲ. ಈ ಆತನೇ ಪ್ರಕರಣದಲ್ಲಿ ಆರೋಪಿಯಾಗಿದ್ದ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.