ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಟಿ20 ಸಿರೀಸ್ ಆರಂಭ. ಡಿಸೆಂಬರ್ 9 ರಿಂದ ಪ್ರಾರಂಭವಾಗಿರುವ ಈ ಸರಣಿಗಾಗಿ 15 ಸದಸ್ಯರ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಇಬ್ಬರು ಯುವ ಆಟಗಾರರು ಸ್ಥಾನ ಪಡೆದಿಲ್ಲ ಎಂಬುದು ವಿಶೇಷ.
ಅಂದರೆ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಆಟಗಾರರನ್ನು ತಂಡದಿಂದ ಕೈ ಬಿಡಲಾಗಿದೆ. ಜೊತೆಗೆ ಏಷ್ಯಾಕಪ್ ಬಳಿಕ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಈ ಸರಣಿಗೆ ಆಯ್ಕೆಯಾಗಿದ್ದಾರೆ. ಇತ್ತ ಹಾರ್ದಿಕ್ ಪಾಂಡ್ಯ ಎಂಟ್ರಿಯಿಂದ ಅತ್ತ ಭಾರತ ತಂಡದಿಂದ ಹೊರಬಿದ್ದ ಆಟಗಾರರು ಯಾರೆಂದರೆ….
ನಿತೀಶ್ ಕುಮಾರ್ ರೆಡ್ಡಿ: ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಟೀಮ್ ಇಂಡಿಯಾ ಪರ ಈವರೆಗೆ 4 ಟಿ20 ಪಂದ್ಯಗಳನ್ನಾಡಿದ್ದಾರೆ. ವಿಶೇಷವಾಗಿ ಕಳೆದ ತಿಂಗಳು ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಭಾಗವಹಿಸಿದ್ದರು. ಆದರೆ ಇದೀಗ ಹಾರ್ದಿಕ್ ಪಾಂಡ್ಯ ಅವರ ಕಂಬ್ಯಾಕ್ ಬೆನ್ನಲ್ಲೇ ನಿತೀಶ್ ಕುಮಾರ್ ರೆಡ್ಡಿ ತಂಡದಿಂದ ಹೊರಬಿದ್ದಿದ್ದಾರೆ.
ರಿಂಕು ಸಿಂಗ್: ಭಾರತದ ಪರ 35 ಟಿ20 ಪಂದ್ಯಗಳನ್ನಾಡಿರುವ ರಿಂಕು ಸಿಂಗ್ ಅವರನ್ನು ಸಹ ಸೌತ್ ಆಫ್ರಿಕಾ ಸರಣಿಯಿಂದ ಕೈ ಬಿಡಲಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡಿದ್ದ ರಿಂಕು ಅವರನ್ನು ಈ ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂಬುದು ವಿಶೇಷ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಟೀಮ್ ಇಂಡಿಯಾ ಈ ಕೆಳಗಿನಂತಿದೆ…
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ)*, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಚಕ್ರಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಕುಲದೀಪ್ ಯಾದವ್.




