ಬೆಂಗಳೂರು, (ಡಿಸೆಂಬರ್ 04): ರಾಜ್ಯದ ಎಲ್ಲಾ ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ, ಒಟ್ಟಾರೆ ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರವಾಗಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದು, ವಿಪಕ್ಷ ಬಿಜೆಪಿ ಈ ಹೇಳಿಕೆಯನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಮುಡಾ ಹಗರಣದಲ್ಲಿ ಸಾಕ್ಷಿ ಸಿಎಂ ಸಿದ್ದರಾಮಯ್ಯನವರಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ಹೇಳಿಕೆಯನ್ನು ಮುಂದಿಟ್ಟು ವಾಗ್ದಾಳಿ. ಇನ್ನು ಸುದ್ದಿಗೋಷ್ಠಿಯಲ್ಲಿ ಆರ್ ಅಶೋಕ್ ಅವರು, ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ ಲ್ಯಾಪ್ಟಾಲ್ನಲ್ಲಿ ತೋರಿಸಿದರು.