Headlines

ಮಂಗಳೂರಿನಲ್ಲಿ ವೇಣುಗೋಪಾಲ್ ಎದುರು ಡಿಕೆ ಡಿಕೆ ಘೋಷಣೆ: ಡಿಕೆಶಿ ಆಪ್ತನಿಗೆ ಹೈಕಮಾಂಡ್ ಬಿಗ್ ಶಾಕ್

ಮಂಗಳೂರಿನಲ್ಲಿ ವೇಣುಗೋಪಾಲ್ ಎದುರು ಡಿಕೆ ಡಿಕೆ ಘೋಷಣೆ: ಡಿಕೆಶಿ ಆಪ್ತನಿಗೆ ಹೈಕಮಾಂಡ್ ಬಿಗ್ ಶಾಕ್


ಸಿದ್ದರಾಮಯ್ಯ, ವೇಣುಗೋಪಾಲ್, ಡಿಕೆಶಿ

ಬೆಂಗಳೂರು/ಮಂಗಳೂರು, (ಡಿಸೆಂಬರ್ 04): ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ (ಸಿದ್ದರಾಮಯ್ಯ) ಹಾಗೂ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ನಡುವಿನ ಸಿಎಂ ಕುರ್ಚಿ ಕದನ ಶಾಂತವಾಗಿತ್ತು. ಆದರೆ, ಮಂಗಳೂರಿನಲ್ಲಿ (ಮಂಗಳೂರು) ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (ಕೆ.ಸಿ. ವೇಣುಗೋಪಾಲ್)ಮುಂದೆ ಡಿಕೆ ಡಿಕೆ ಎಂದು ಘೋಷಣೆ ಕೂಗಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಯತ್ನ ನಡೆದಿತ್ತು. ಆ ಪ್ರಸಂಗಕ್ಕೆ ಸಾಕ್ಷಿಯಾಗಿದ್ದ ಡಿಕೆ ಶಿವಕುಮಾರ್ ಆಪ್ತ, ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಿಥುನ್ ರೈಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ. ಪಕ್ಷದ ಶಿಸ್ತು ಉಲ್ಲಂಘನೆ ಬಗ್ಗೆ ಕಾರಣ ಕೇಳಿ ಮಿಥು ರೈಗೆ ಐಸಿಸಿ ಕಾರ್ಯದರ್ಶಿ ರೋಜಿ ಜಾನ್ ಅವರು ಶೋಕಾಸ್ ನೋಟಿಸ್ ನೀಡಿದ್ದಾರೆ.

ನಾರಾಯಣ ಗುರು ಹಾಗೂ ಮಹಾತ್ಮ ಗಾಂಧಿ ನಡುವಿನ ಸಂವಾದದ ಶತಮಾನೋತ್ಸವವನ್ನು ಮಂಗಳೂರಿನಲ್ಲಿ ಪ್ರಾರಂಭ, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೆ.ಸಿ.ವೇಣುಗೋಪಾಲ್ ಕೇರಳದಿಂದ ಮಂಗಳೂರಿಗೆ ಆಗಮಿಸಿದ್ದರು. ವೇಣುಗೋಪಾಲ್ ಮಂಗಳೂರು ವಿಮಾನ ನಿಲ್ದಾಣದಿಂದ ಆಚೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ ಹಾಗೂ ವಿದ್ಯುತ್ರು ಡಿಕೆಶಿ ಪರವಾಗಿ ಘೋಷಣೆ ಕೂಗಿದರು. ಡಿಕೆ ಡಿಕೆ ಎಂದು ಘೋಷಣೆ ಕೂಗಿದ್ದಲ್ಲದೇ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಬೇಕೆಂದು ಆಗ್ರಹಿಸಿದ್ದರು. ಡಿಕೆಶಿ ನಡುವಿನ ಕುರ್ಚಿ ಕದನ ಶಾಂತವಾಗಿರುವಾಗಲೇ ಈ ರೀತಿ ಸಿಎಂ ಘೋಷಣೆ ಕೂಗಿರುವುದು ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗಿ ಕಾರಣ ಕೇಳಿ ಮಿಥುನ್ ರೈಗೆ ಐಸಿಸಿ ಕಾರ್ಯದರ್ಶಿ ರೋಜಿ ಜಾನ್ ಅವರು ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ಇದನ್ನೂ ನೋಡಿ: ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕವೂ ಬಾಣ ಬಡಿದಾಟಕ್ಕೆ ಬ್ರೇಕ್: ವೇಣುಗೋಪಾಲ್ ಎದುರೇ ಡಿ.ಕೆ. ಶಿವಕುಮಾರ್ -ಸಿದ್ದರಾಮಯ್ಯ ಬೆಂಬಲಿಗರಿಂದ ಘೋಷಣೆ

ಸಮರ್ಥಿಸಿಕೊಂಡಿದ್ದ ಡಿಕೆಶಿ

ಇನ್ನು ಮಂಗಳೂರಿನಲ್ಲಿ ಸಿಎಂ ಹಾಗೂ ವೇಣುಗೋಪಾಲ್ ಎದುರು ಡಿಕೆ ಡಿಕೆ ಅಂತ ಘೋಷಣೆ ಕೂಗಿರೋ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಅಭಿಮಾನಿಗಳು ಘೋಷಣೆ ಕೂಗಿರಬಹುದು. ರಾಜಕೀಯದಲ್ಲಿ ಎಲ್ಲಾ ತರಹದ ಜೈಕಾರ, ಧಿಕ್ಕಾರ ಇರುತ್ತೆ. ಡಿಕೆ ಡಿಕೆ ಘೋಷಣೆಯನ್ನ ಕಳೆದ 10 ವರ್ಷದಿಂದ ಕೂಗ್ತಾರೆ. ಕೆಲವರು ಮೋದಿ ಅಂತಾರೆ, ಕೆಲವರು ಡಿಕೆ ಎನ್ನುತ್ತಾರೆ, ಕೆಲವರು ರಾಹುಲ್ ಅಂತಾರೆ, ಇನ್ನು ಕೆಲವರು ಸಿದ್ದು ಎನ್ನುತ್ತಾರೆ. ಅದನ್ನು ತಪ್ಪೇನು ಎಂದು ಸಮರ್ಥಿಸಿಕೊಂಡಿದ್ದರು.

ಕರ್ನಾಟಕದಲ್ಲಿ ನವೆಂಬರ್ 20 ರಿಂದ ಸಿಎಂ ಕುರ್ಚಿಗಾಗಿ ಫೈಟ್ ಶುರುವಾಗಿತ್ತು. ಡಿಸಿಎಂ ಡಿಕೆಶಿ ಅವರಿಗೆ ಸಿಎಂ ಸ್ಥಾನ ನೀಡದ ಬೆಂಬಲಿಗ ಶಾಸಕರು, ಸಚಿವರು ದೆಹಲಿ ಯಾತ್ರೆ ನಡೆಸಿದ್ದರು. ಹೀಗೆ ಎರಡು ಮೂರು ತಂಡಗಳು ದೆಹಲಿಗೆ ಹೋಗಿ ಬಂದಿವೆ. ಮಾಧ್ಯಮದಲ್ಲಿ ಸಿಎಂ ಸ್ಥಾನ ಯಾರ ಪಾಲಾಗುತ್ತೆ ಎಂಬ ಬಗ್ಗೆ ದೊಡ್ಡ ಚರ್ಚೆಯಾಯಿತು. ಇದಾದ ಬಳಿಕ ಕಾಂಗ್ರೆಸ್ ಹೈಕಮ್ಯಾಂಡ್ ಮಧ್ಯಪ್ರವೇಶಿಸಿ, ಬ್ರೇಕ್ ಫಾಸ್ಟ್ ಮೀಟಿಂಗ್ ಆರೇಂಜ್ ಮಾಡಿತ್ತು. ಹೀಗಾಗಿ ಈಗ ತಾತ್ಕಾಲಿಕವಾಗಿ ಸಿಎಂ ಕುರ್ಚಿ ಫೈಟ್‌ಗೆ ಬ್ರೇಕ್ ಬಿದ್ದಿತ್ತು.

ಕುರ್ಚಿ ಫೈಟ್ ಶುರುವಾದ ಬಳಿಕ ಇದೇ ಮೊದಲ ಭಾರಿಗೆ ಸಿಎಂ ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದರು. ಈ ವೇಳೆ ಐಸಿಸಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದರು.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *