Headlines

‘ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ’ ಎಂದು ರಿಷಬ್​ಗೆ ಅಭಯ ನೀಡಿದ ದೈವ

‘ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ’ ಎಂದು ರಿಷಬ್​ಗೆ ಅಭಯ ನೀಡಿದ ದೈವ


ರಿಷಬ್ ಶೆಟ್ಟಿ ಅವರು ‘ಕಾಂತಾರ: ಅಧ್ಯಾಯ 1’ ಚಿತ್ರದ ಮೂಲಕ ದೈವದ ಆಚರಣೆಯನ್ನು ಪ್ರಪಂಚಕ್ಕೆ ತೋರಿಸಿದ್ದಾರೆ. ದೈವದ ಆಚರಣೆ ಬಗ್ಗೆ ಅವರ ಅಪಾರ ನಂಬಿಕೆ. ಈಗ ಅವರು ಪಂಜುರ್ಲಿಗೆ ಹರಕೆ ಕೋಲ ನೀಡಿದ್ದಾರೆ. ಈ ವೇಳೆ ಅವರಿಗೆ ದೈವದ ಅಭಯ ಸಿಕ್ಕಿದೆ.

ದೈವವು ರಿಷಬ್ ಶೆಟ್ಟಿಯನ್ನು ಅಪ್ಪಿ ಆಲಂಗಿಸಿದೆ. ‘ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ’ ಎಂದು ದೈವ ಅಭಯ ನೀಡಿದ್ದು, ರಿಷಬ್ ಖುಷಿಯಾಗಿದ್ದಾರೆ. ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿ ಪಂಜುರ್ಲಿ ಮಮಕಾರ ತೋರಿದೆ. ಮಂಗಳೂರು ಬಾರೆಬೈಲ್ ವಾರಾಯಿ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮ ನಡೆದಿದೆ. ಈ ಸಂದರ್ಭದಲ್ಲಿ ನಿರ್ಮಾಪಕ ವಿಜಯ್ ಕಿರಂಗದೂರು, ನಿರ್ದೇಶಕ ಸಂತೋಷ್ ಆನಂದ ರಾಮ್ ಸೇರಿದಂತೆ ಚಿತ್ರರಂಗದ ಭಾಗಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *