ಹೊಸೂರು, ಡಿ,5: ರಾಜ್ಯದ ಗಡಿಭಾಗ ತಮಿಳುನಾಡಿನ ಹೊಸೂರು ಸಮೀಪದ ಶಾನಮಾವು ಎಂಬಲ್ಲಿ ಕಾಡಾನೆಗಳ ಹಿಂಡು ಹೋಗುವ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುಮಾರು 40ಕ್ಕೂ ಹೆಚ್ಚು ಕಾಡಾನೆಗಳು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾಡಿನ ಸಮೀಪ ಇರುವ ಗ್ರಾಮಗಳಿಗೆ ನುಗ್ಗಿ ಬೆಳೆಗಳಿಗೆ ಹಾನಿ ಮಾಡಿದೆ. ರೈತರು ಬೆಳೆದ ರಾಗಿ, ಭತ್ತ, ಟೊಮೆಟೊ, ಬೀನ್ಸ್, ಎಲೆಕೋಸು ಸೇರಿದಂತೆ ಹಲವು ಬೆಳೆಗಳಿಗೆ ಹಾನಿಯಾಗಿದೆ. ಇದೀಗ ಆನೆಗಳನ್ನು ಓಡಿಸಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದೆ. ಪಟಾಕಿ ಸಿಡಿಸಿ ಕಾಡನ್ನು ಡೆಂಕಣಿಕೋಟೆ ಅರಣ್ಯಕ್ಕೆ ಓಡಿಸಿದ್ದಾರೆ. ಈ ಬಗ್ಗೆ ಒಂದು ವಿಡಿಯೋ ಇಲ್ಲಿದೆ ನೋಡಿ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ