ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ


ಬೆಂಗಳೂರು, ಡಿಸೆಂಬರ್ 5: ಇಂಡಿಗೋ ವಿಮಾನಗಳ ಹಾರಾಟದಲ್ಲಿನ ವ್ಯತ್ಯಯದಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣದಲ್ಲಿ ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ವಿಮಾನ ನಿಲ್ದಾಣದ ವಿಮಾನ ನಿಲ್ದಾಣದ ಒಳಭಾಗದಲ್ಲಿ ಪ್ರಯಾಣಿಕರು ಪರದಾಡುತ್ತಿದ್ದಾರೆ, ಹೊರಭಾಗದಲ್ಲಿ ಬೆಂಗಳೂರಿನ ವಿವಿಧೆಡೆ ಸಂಚರಿಸುವ ಬಸ್ಸುಗಳು ಪ್ರಯಾಣಿಕರಿಲ್ಲದೆ ಖಾಲಿ ಖಾಲಿಯಾಗಿವೆ. ವಿಮಾನ ನಿಲ್ದಾಣದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾಮಾನ್ಯವಾಗಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಇರುತ್ತಾರೆ. ಆದರೆ, ಕಳೆದ ಮೂರು ದಿನಗಳಿಂದ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಬಿಎಂಟಿಸಿ ಮತ್ತು ಕೆಎಸ್ಆರ್ ಟಿಸಿ ಫ್ಲೈಬಸ್ ಆದಾಯ ಸಂಗ್ರಹದಲ್ಲಿ ಭಾರಿ ಕುಸಿತವಾಗಿದೆ.

ವಿಮಾನ ನಿಲ್ದಾಣಕ್ಕೆ ಆಗಮಿಸುವ ಇಂಡಿಗೋ ವಿಮಾನಗಳ ರದ್ದತಿಯೇ ಈ ಪರಿಸ್ಥಿತಿಗೆ ಪ್ರಮುಖ ಕಾರಣವಾಗಿದೆ. ಬೇರೆ ರಾಜ್ಯಗಳಿಂದ ಬರುವ ಹೆಚ್ಚಿನ ವಿಮಾನಗಳು ಇಂಡಿಗೋ ಆಗಿವೆ. ಸಹಾಯಕ ಆಗಮನ ಗೇಟ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ತೀರ ವಿರಳವಾಗಿದೆ, ಬಸ್ ನಿಲ್ದಾಣಗಳು ಬಣಗುಡುತ್ತಿವೆ. ಸಾಮಾನ್ಯವಾಗಿ 30-40 ಪ್ರಯಾಣಿಕರಿಂದ ತುಂಬುವ ಬಸ್‌ಗಳಲ್ಲಿ ಈಗ 10 ಪ್ರಯಾಣಿಕರು ಇರುವುದಿಲ್ಲ ಎಂದು ಚಾಲಕರು ಹೇಳಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *