CM Siddaramaiahನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ | R Ashok Slams Cm Siddaramaiah Stop Being Shameless Resign Over Corruption Sat

CM Siddaramaiahನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ | R Ashok Slams Cm Siddaramaiah Stop Being Shameless Resign Over Corruption Sat



CM Siddaramaiahನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ | R Ashok Slams Cm Siddaramaiah Stop Being Shameless Resign Over Corruption Sat

ವಾಲ್ಮೀಕಿ ನಿಗಮದ 87 ಕೋಟಿ ಹಗರಣ, ಸ್ವಪಕ್ಷದ ಶಾಸಕರ ಭ್ರಷ್ಟಾಚಾರದ ಆರೋಪ, ಹಾಗೂ 40% ಕಮಿಷನ್ ಸುಳ್ಳು ವರದಿ ನಡುವೆಯೂ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಿರುವ ಸಿದ್ದರಾಮಯ್ಯನವರ ನಡೆ ಲಜ್ಜೆಗೇಡಿತನ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.

ಬೆಂಗಳೂರು (ಡಿ.05): ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾದರೂ ಪರವಾಗಿಲ್ಲ, ಜೀವನದಲ್ಲಿ, ಅದರಲ್ಲೂ ಸಾರ್ವಜನಿಕ ಜೀವನದಲ್ಲಿರುವವರು ಲಜ್ಜೆಗೇಡಿಗಳಾಗಬಾರದು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬುದನ್ನು ಸ್ವತಃ ಅಂದಿನ ಸಚಿವರೇ ಒಪ್ಪಿಕೊಂಡರೂ, ಭ್ರಷ್ಟಾಚಾರ ನಡೆದಿದೆ ಎನ್ನುವುದನ್ನ ಸದನದಲ್ಲಿ ತಾವೇ ಗಂಟಾಘೋಷವಾಗಿ ಒಪ್ಪಿಕೊಂಡ ಮೇಲೂ ನಿರ್ಲಜ್ಜವಾಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಿರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು? ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟರ್)ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕೆಗಳ ಬಾಣಗಳನ್ನು ಬಿಟ್ಟಿದ್ದಾರೆ. ‘ಸಿದ್ದರಾಮಯ್ಯನವರೇ ಸ್ವತಃ ನಿಮ್ಮ ಆರ್ಥಿಕ ಸಲಹೆಗಾರರು, ಹಿರಿಯ ಕಾಂಗ್ರೆಸ್ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಎಂದು ಸರ್ಟಿಫಿಕೇಟ್ ಕೊಟ್ಟ ಮೇಲೂ ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡು ಕೂತುಕೊಳ್ಳುವ ಲಜ್ಜೆಗೇಡಿತನಕ್ಕೆ ಏನನ್ನಬೇಕು?

ಅದು ಹೋಗಲಿ ಬಿಡಿ. ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ‘ಮನಿ ಫಾರ್ ಮನೆ’ ಭ್ರಷ್ಟಾಚಾರವನ್ನು ಬಯಲಿಗೆಳೆದು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇಷ್ಟಾದರೂ ಅವರ ಮೇಲೆ ಕ್ರಮ ಕೈಗೊಂಡಿಲ್ಲ. ಸ್ವಪಕ್ಷದ ಹಿರಿಯ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡಿದರೂ, ವಸತಿ ಸಚಿವರ ಮೇಲೆ ಕ್ರಮವೂ ಕೈಗೊಳ್ಳದೆ, ತನಿಖೆಯೂ ನಡೆಸದೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಿರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು?

ತಾವೇ ನೇಮಕ ಮಾಡಿದ್ದ ತನಿಖಾ ಆಯೋಗ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ತಾವು ಮಾಡಿದ್ದ 40% ಕಮಿಷನ್ ಆರೋಪ ಹಸಿ ಸುಳ್ಳು ಎಂದು ವರದಿ ನೀಡಿದ ಮೇಲೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಿರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು? ಇನ್ನು ಕಳೆದ ಬಾರಿ ಅಧಿಕಾರದಲ್ಲಿದ್ದ ನಮ್ಮ ಸರ್ಕಾರದ ವಿರುದ್ಧ ಶೇಕಡಾ 40% ಕಮಿಷನ್ ಎಂದು ಹಸಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿ, ಮತದಾರರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು? ಕಳೆದ 2.5 ವರ್ಷಗಳಲ್ಲಿ ನಿಮ್ಮ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಕಮಿಷನ್ ದಾಹಕ್ಕೆ ಬಲಿಯಾದ ಅಧಿಕಾರಿಗಳು, ಗುತ್ತಿಗೆದಾರರ ಪ್ರಕರಣಗಳನ್ನು ಪಟ್ಟಿ ಮಾಡುತ್ತಾ ಹೋದರೆ ಜಾಗವೇ ಸಾಕಾಗುವುದಿಲ್ಲ ಎಂದು ಕಿಡಿಕಾಡಿದ್ದಾರೆ.

ಸರ್ಕಾರದ ಕಮಿಷನ್ ದಾಹಕ್ಕೆ ಬಲಿಯಾದ ಸರ್ಕಾರಿ ಅಧಿಕಾರಿಗಳು:

  • ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ.
  • ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ.
  • ವರ್ಗಾವಣೆ ದಂಧೆಯ ಒತ್ತಡ, ಕಿರುಕುಳ ತಾಳಲಾರದೆ ಯಾದಗಿರಿ ಪಿಎಸ್ ಐ ಪರಶುರಾಮ್ ಹೃದಯಾಘಾತದಿಂದ ಸಾವು.
  • ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್‌ ಗ್ರಾಮದ ನಿವಾಸಿ ಸಿವಿಲ್‌ ಎಂಜಿನಿಯರ್‌ ಸಚಿನ್‌ ಮಾನಪ್ಪ ಪಾಂಚಾಳ್‌ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ.

ಕಳೆದ 30 ತಿಂಗಳುಗಳಲ್ಲಿ ನಿಮ್ಮ ಸರ್ಕಾರ ಭ್ರಷ್ಟಾಚಾರದ ಎಲ್ಲ ದಾಖಲೆಗಳನ್ನೂ ಮುರಿದಿದೆ. ನಿಮ್ಮ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳುತ್ತಾ ಹೋದರೆ ಅದಕ್ಕೆ ಅಂತ್ಯವೇ ಇಲ್ಲ, ದಿನದ 24 ಗಂಟೆಗಳು ಸಾಕಾಗುವುದಿಲ್ಲ. ಮತಿಗೇಡಿಗಳಾದರೂ ಪರವಾಗಿಲ್ಲ ಸಿದ್ದರಾಮಯ್ಯನವರೇ, ಜೀವನದಲ್ಲಿ, ಅದರಲ್ಲೂ ಸಾರ್ವಜನಿಕ ಜೀವನದಲ್ಲಿರುವವರು ಅಧಿಕಾರಕ್ಕಾಗಿ, ಕುರ್ಚಿಗಾಗಿ ಲಜ್ಜೆಗೇಡಿಗಳಾಗಬಾರದು.

ತಾತ್ಕಾಲಿಕ ತಣ್ಣಗಾದ ಕುರ್ಚಿ ಫೈಟ್:

ಇನ್ನು ರಾಜ್ಯ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕುರಿತು ಒಪ್ಪಂದವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿಯನ್ನು ಬಿಟ್ಟು ಕೊಡಲಿದ್ದಾರೆ ಎಂಬ ಮಾಹಿತಿ ಭಾರೀ ಸದ್ದು ಮಾಡಿತ್ತಿ. ಈ ಹಿನ್ನೆಲೆಯಲ್ಲಿ ದೆಹಲಿ ಓಡಾಟವೆಲ್ಲಾ ಆಗಿದ್ದು, ಕೊನೆಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಮೂಲಕ ತಾತ್ಕಾಲಿಕವಾಗಿ ತಣ್ಣಗಾಗಿದೆ. ಆದರೆ, ಈ ಬಗ್ಗೆ ಕೆಲವು ಸಚಿವರು, ಶಾಸಕರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರು ಮಾತ್ರ ಮಾತನಾಡುವುದನ್ನು ಬಿಟ್ಟಿಲ್ಲ.



Source link

Leave a Reply

Your email address will not be published. Required fields are marked *