ಆನೇಕಲ್, ಡಿಸೆಂಬರ್ 05: ವಿವಿಧ ಸಿಟಿ ಫ್ಲೈ ಮೇಲಿನ ಸರಣಿ ಅಪಘಾತ ನಡೆದಿದ್ದು, ಘಟನೆಯ ದೃಶ್ಯ ಹಿಂಬದಿ ಇದ್ದ ಕಾರೊಂದರ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೆಎಸ್ ಆರ್ ಟಿಸಿ ಬಸ್ ಚಾಲಕನ ಯಡವಟ್ಟಿನಿಂದ ಅಪಘಾತ ಸಂಭವಿಸಿದ್ದು, ಏಕಾಏಕಿ ಬ್ರೇಕ್ ಹಾಕಿದ್ದೇ ಅಪಘಾತಕ್ಕೆ ಕಾರಣ. ಬಸ್‌ಗೆ ಹಿಂಬದಿಯಿಂದ ಕಾರು ಹತ್ತಿಕ್ಕಿದರೆ, ಕಾರಿಗೆ ಡಿಕ್ಕಿಯಾಗಿ ಬೈಕ್ ಸವಾರರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.