Headlines

ಸಚಿವ ಸತೀಶ್​ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗೋದು ಖಚಿತವೇ? ತೀವ್ರ ಕುತೂಹಲ ಹುಟ್ಟು ಹಾಕಿದ ನಡೆ

ಸಚಿವ ಸತೀಶ್​ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗೋದು ಖಚಿತವೇ? ತೀವ್ರ ಕುತೂಹಲ ಹುಟ್ಟು ಹಾಕಿದ ನಡೆ


ಬೆಂಗಳೂರು, ಡಿಸೆಂಬರ್ 5: ಕರ್ನಾಟಕ ಕಾಂಗ್ರೆಸ್ (ಕಾಂಗ್ರೆಸ್) ರಾಜಕೀಯ ಮೇಲಾಟದಲ್ಲಿ ರೋಚಕ ತಿರುವು ಸಿಗುವ ಸಾಧ್ಯತೆ ಗೋಚರಿಸುತ್ತದೆ. ನಾಯಕತ್ವ ಬದಲಾವಣೆ ಚರ್ಚೆ ಒಂದೆಡೆಯಾದರೆ, ಕೆಪಿಸಿಸಿ ಅಧ್ಯಕ್ಷ ಪಟ್ಟವೂ ಬದಲಾವಣೆಯಾ ಎಂಬ ಚರ್ಚೆ ಟೆರಮರೆಯಲ್ಲಿ ನಡೆಯುತ್ತಿದೆ. ಕೆಪಿಸಿಸಿ ಸಾರಥಿ ರೇಸ್‌ನಲ್ಲಿ ಸಚಿವ ಸತೀಶ್ ಜಾರಕಿಹೊಳಿ (ಸತೀಶ್ ಜಾರಕಿಹೊಳಿ) ಇದ್ದಾರೆ. ಹೀಗಾಗಿ ಅಧ್ಯಕ್ಷ ಪಟ್ಟಕ್ಕಾಗಿ ಬೇಕಾದ ಎಲ್ಲಾ ತಯಾರಿಯನ್ನು ಅವರು ಮಾಡುತ್ತಿದ್ದಾರೆಯೇ? ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗುವುದು ಖಚಿತವಾಗಿದೆ ಎಂಬ ಅನುಮಾನಗಳಿಗೆ ಪುಷ್ಟಿ ನೀಡುವಂತಹ ಬೆಳವಣಿಗೆಗಳು ನಡೆದಿವೆ.

ಸತೀಶ್ ನೇತೃತ್ವದಲ್ಲಿ ‘ಕೈ’ ಹಿಡಿದ ಮಾಲೂರು ಸಂಸ್ಥೆ!

ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಲ್ಲ. ಕೋಲಾರ ಉಸ್ತುವಾರಿಯೂ ಅಲ್ಲ. ಆದರೂ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕೋಲಾರದ ಮಾಲೂರು ತಾಲೂಕು ಕಾಂಗ್ರೆಸ್ ಸೇರ್ಪಡೆಯಾಗಿದೆ. ಗುರುವಾರಷ್ಟೇ ಮಾಲೂರು ಮುಖಂಡ ಎನ್.ವೆಂಕಟರಾಮ್ ಎಂಬುವವರು ಸತೀಶ್ ಅವರ ಬೆಂಗಳೂರಿನ ಗೃಹ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಈ ಬಗ್ಗೆ ಕಾಣಿಸಿಕೊಂಡಿರುವ ಸತೀಶ್ ಜಾರಕಿಹೊಳಿ, ನಮ್ಮ ಜೊತೆ ಇದ್ದವರೇ ಅವರು ವಾಪಸ್ ಬಂದಿದ್ದಾರೆ.

ಸತೀಶ್ ಜಾರಕಿಹೊಳಿ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್

ಕುರ್ಚಿ ಕಾಳಗದ ಮಧ್ಯೆ ಸತೀಶ್ ಜಾರಕಿಹೊಳಿಯನ್ನು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಆ ಭೇಟಿ ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಟಿಸಿತ್ತು. ಸತೀಶ್ ಬಳಿ ಕೊಟ್ಟ ಮಾತಿನ ಬಗ್ಗೆ ಡಿಕೆಶಿ ಪ್ರಸ್ತಾಪಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಎಲ್ಲವೂ ಕೂಲ್ ಕೂಲ್ ಆಗಿರುವಾಗಲೇ ಮತ್ತೊಮ್ಮೆ ಸಚಿವ ಸತೀಶ್ ಜಾರಕಿಹೊಳಿಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ಮಾಡಿದ್ದಾರೆ. ಖಾಸಗಿ ಸ್ಥಳದಲ್ಲಿ ಭೇಟಿಯಾಗಿ ಚರ್ಚೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಏನಾದರೂ ಚರ್ಚೆ ಐತೇ ಎಂಬ ಪ್ರಶ್ನೆಗೆ ಸತೀಶ್ ಬೇರೆಯೇ ರೀತಿಯಲ್ಲಿ ಉತ್ತರಿಸಿದ್ದಾರೆ. ಮದುವೆಯಲ್ಲಿ ಇಬ್ಬರು ಭೇಟಿಯಾಗಿದ್ದೆವು ಅಷ್ಟೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಈ ನಡುವೆ ಶುಕ್ರವಾರ ಬೆಳಗ್ಗೆ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಸುಮಾರು 1 ಗಂಟೆ ಚರ್ಚೆ. ಡಿಕೆ ಸುರೇಶ್ ಸಹ ಸಹೋದರ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿದೆ.

ಡಿಕೆಶಿ ಬರುವ ಮೊದಲೇ ಸಿಎಂರಿಂದ KIADB ಕಟ್ಟಡ ಉದ್ಘಾಟನೆ

ಬೆಂಗಳೂರಿನ ಫ್ರೀಡಂಪಾರ್ಕ್ ಬಳಿ ಇರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಚೇರಿಯನ್ನು ಸಿಎಂ ಸಿದ್ದರಾಮಯ್ಯ ಮಾಡಿದರು. ಆದರೆ, ಡಿಕೆ ಶಿವಕುಮಾರ್ ಬರುವ ಮುನ್ನವೇ ಕಟ್ಟಡ ಉದ್ಘಾಟಿಸಿದ ಸಿಎಂ ಮಂಡ್ಯಕ್ಕೆ ತೆರಳಿದ್ದಾರೆ. ಉದ್ಘಾಟನೆ ಕಾರ್ಯಕ್ರಮಕ್ಕೆ ಬರುತ್ತಿದೆಯೇ ಸಿಎಂ ಎಂದು ಎಂಬಿ ಪಾಟೀಲ್ ಬಳಿ ಡಿಸಿಎಂ ಕೇಳಿದ್ದಾರೆ. ಮಂಡ್ಯಕ್ಕೆ ಹೋಗಬೇಕಿತ್ತು ಎಂದು ಎಂ.ಬಿ ಪಾಟೀಲ್ ಉತ್ತರಿಸಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಈ ಎಲ್ಲ ಬೆಳವಣಿಗೆಗಳು ಸದ್ಯ ರಾಜ್ಯ ರಾಜಕೀಯ ವಲಯದಲ್ಲಿ, ಕಾಂಗ್ರೆಸ್ ಆಂತರಿಕ ವಲಯದಲ್ಲಿ ಗುಸುಗುಸು ಹರಡಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *