Headlines

Lok Sabha Zero Hour: ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ | Increase Honorarium Of Anganwadi And Asha Workers Mp Dr K Sudhakar Gvd

Lok Sabha Zero Hour: ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ | Increase Honorarium Of Anganwadi And Asha Workers Mp Dr K Sudhakar Gvd



Lok Sabha Zero Hour: ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ | Increase Honorarium Of Anganwadi And Asha Workers Mp Dr K Sudhakar Gvd

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯ ಗೌರವಧನ ಹೆಚ್ಚಳ ಮತ್ತು ಸಾಮಾಜಿಕ ಭದ್ರತೆ ವಿಷಯ ಕುರಿತು ಸಂಸದ ಡಾ.ಕೆ.ಸುಧಾಕರ್‌ ಅವರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.

ಚಿಕ್ಕಬಳ್ಳಾಪುರ (ಡಿ.05): ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯ ಗೌರವಧನ ಹೆಚ್ಚಳ ಮತ್ತು ಸಾಮಾಜಿಕ ಭದ್ರತೆ ವಿಷಯ ಕುರಿತು ಸಂಸದ ಡಾ.ಕೆ.ಸುಧಾಕರ್‌ ಅವರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿ ಧರಣಿ ನಡೆಸುತ್ತಿರುವ ಸಮಯದಲ್ಲೇ ಸುಧಾಕರ್‌ ಅವರು ಗುರುವಾರ ಲೋಕಸಭೆಯ ಕಲಾಪದ ಶೂನ್ಯವೇಳೆಯಲ್ಲಿ ಈ ಸಮಸ್ಯೆಯನ್ನು ಪ್ರಸ್ತಾಪಿಸಿದರು.

ಬಹುತೇಕ ಸಿಬ್ಬಂದಿ ಬಡವರು: ಅಂಗನವಾಡಿ ಕಾರ್ಯಕರ್ತರು ಹಾಗೂ ಬಿಸಿಯೂಟ ಸಿಬ್ಬಂದಿಯಲ್ಲಿ ಬಹುತೇಕರು ಬಡ ಕುಟುಂಬದ ಮಹಿಳೆಯರೇ ಆಗಿದ್ದಾರೆ. ಶಾಲಾ ಮಕ್ಕಳಿಗೆ ಬಿಸಿಯೂಟ ಪೂರೈಕೆ, ಅಪೌಷ್ಟಿಕತೆ ನಿವಾರಣೆ, ಗರ್ಭಿಣಿಯರು ಹಾಗೂ ತಾಯಂದಿರಿಗೆ ಸರ್ಕಾರಿ ಯೋಜನೆಗಳ ನೆರವು ಸೇರಿದಂತೆ ಹಲವಾರು ವಿಧದಲ್ಲಿ ಇವರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. ಅಪೌಷ್ಟಿಕತೆ ವಿರುದ್ಧ ಹೋರಾಡುತ್ತಿರುವ ಈ ಮಹಿಳೆಯರು ಅತಿ ಕಡಿಮೆ ಗೌರವಧನ ಪಡೆಯುತ್ತಿದ್ದು, ಆರ್ಥಿಕವಾಗಿ ತೀರಾ ದುರ್ಬಲರಾಗಿದ್ದಾರೆ ಎಂಬುದು ಬೇಸರದ ಸಂಗತಿ. ಆದ್ದರಿಂದ ಹೋರಾಟ ಮಾಡುತ್ತಿರುವ ಮಹಿಳೆಯರ ಅಹವಾಲುಗಳನ್ನು ಕೇಂದ್ರ ಸರ್ಕಾರ ಆಲಿಸಬೇಕು ಎಂದು ಮನವಿ ಮಾಡಿದರು.

ಗೌರವಧನ ಪರಿಷ್ಕರಣೆ

ಬೆಲೆ ಏರಿಕೆಯನ್ನು ಗಮನದಲ್ಲಿರಿಸಿಕೊಂಡು ಗೌರವಧನ ಪರಿಷ್ಕರಣೆ, ಪಿಂಚಣಿ, ವಿಮೆ ಸೇರಿದಂತೆ ಸಾಮಾಜಿಕ ಭದ್ರತೆ ಕಲ್ಪಿಸುವುದು, ಕಾರ್ಯಕರ್ತೆಯರ ಕೆಲಸವನ್ನು ‘ಅಗತ್ಯ ಸೇವೆಗಳುʼ ಎಂದು ಅಧಿಕೃತವಾಗಿ ಗುರುತಿಸುವುದು. ದೇಶಾದ್ಯಂತ ಕಾರ್ಯಕರ್ತೆಯರಿಗೆ ಏಕರೂಪದ ಸೌಲಭ್ಯಗಳನ್ನು ನೀಡಲು ರಾಜ್ಯ ಸರ್ಕಾರಗಳೊಂದಿಗೆ ಮಾತುಕತೆ ನಡೆಸಬೇಕೆಂದು ಅವರು ಮನವಿ ಮಾಡಿದರು.

ದೇಶದ ಅಪೌಷ್ಟಿಕತೆ ನಿವಾರಣೆ ಕಾರ್ಯಕ್ರಮಕ್ಕಾಗಿ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಗೆ ಸೂಕ್ತವಾದ ಗೌರವ ನೀಡುವುದು ಅವಶ್ಯಕವಾಗಿದೆ. ನಮ್ಮ ಮಕ್ಕಳು ಹಾಗೂ ತಾಯಂದಿರ ಆರೋಗ್ಯ ಕಾಪಾಡುವ ಈ ಸಿಬ್ಬಂದಿಗೆ ಭದ್ರತೆ, ಘನತೆ ಹಾಗೂ ಗೌರವ ನೀಡುವುದು ಅಗತ್ಯ ಎಂದು ಸಂಸದ ಡಾ। ಕೆ.ಸುಧಾಕರ್‌ ಒತ್ತಿ ಹೇಳಿದರು.



Source link

Leave a Reply

Your email address will not be published. Required fields are marked *