ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ
ಬೆಂಗಳೂರು, ಡಿಸೆಂಬರ್ 05: ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ಪರಿಷ್ಕರಣೆ ಮಾಡುವುದರಿಂದ ರಾಜ್ಯಗಳಿಗೆ ನಷ್ಟ ಎಂದು ಕರ್ನಾಟಕ ಸೇರಿದಂತೆ 8 ರಾಜ್ಯ ಸರ್ಕಾರಗಳು ಕಳವಳ ವ್ಯಕ್ತಪಡಿಸಿವೆ. ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ (ಸಿದ್ದರಾಮಯ್ಯ)ಜಿಎಸ್‌ಟಿ ಪರಿಷ್ಕರಣೆಯಿಂದಾಗಿ ರಾಜ್ಯಕ್ಕೆ 18,500 ಕೋಟಿ ರೂ, ನಷ್ಟ ಸಂಭವಿಸಿದೆ ಎಂದು ಹೇಳಿದ್ದಾರೆ. ಈ ಮೂಲಕ ಜಿಎಸ್ಟಿ ಇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ, ಅಧಿಕೃತವಾಗಿ ಪ್ರಧಾನಿ ನರೇಂದ್ರ ಮೋದಿಗೆ (ನರೇಂದ್ರ ಮೋದಿ) ಪತ್ರ ಬರೆದಿದ್ದು, ಸೆಸ್‌ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ ಹಂಚಿಕೊಳ್ಳುವಂತೆ ಮನವಿ ಮಾಡಲಾಗಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.