ಇಂಡಿಗೋ ವಿಮಾನ ರದ್ದತಿ ಹಿನ್ನಲೆ ಪಿಜಿ ನೀಟ್ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ
ಬೆಂಗಳೂರು, ಡಿಸೆಂಬರ್ 07: ಕಳೆದ 5 ದಿನಗಳಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಂಚಾರ ನಡೆಸಬೇಕಿದ್ದ ಇಂಡಿಗೋ ವಿಮಾನಗಳು (ಇಂಡಿಗೋ ವಿಮಾನಗಳು) ಹಾರಾಟದಲ್ಲಿ ವ್ಯತ್ಯಯ ಉಂಟಾಗಿದ್ದು, ಇಂದು ಅದೇ ದುಸ್ಥಿತಿ ಮುಂದುವರೆದಿದೆ. ಈ ಹಿನ್ನಲೆ ಪ್ರಯಾಣಿಕರು ನಾನಾ ವಿಧದಲ್ಲಿ ಪರದಾಡುತ್ತಿದ್ದಾರೆ. ವಿಮಾನ ರದ್ದಾದ ಕಾರಣ ವಧು-ವರರು ಆನ್‌ಲೈನ್‌ನಲ್ಲಿ ಆರತಕ್ಷತೆ ಮಾಡಿಕೊಂಡಿದ್ದರು. ಇಷ್ಟೇ ಕೆಲವು ಖಾಸಗಿ ಬಸ್ ಕಂಪನಿಗಳು ಬೆಂಗಳೂರು-ಮುಂಬೈ ಮಾರ್ಗದ ಟಿಕೆಟ್ ದರವನ್ನು 10,000 ರೂ. ವರೆಗೆ ಹೆಚ್ಚಿಸಿದ್ದವು. ಈ ಎಲ್ಲಾ ಅನಾನುಕೂಲತೆಗಳ ನಡುವೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪಿಜಿ ನೀಟ್ನ ಪ್ರವೇಶ ಪ್ರಕ್ರಿಯೆಯನ್ನು ಮುಂದೂಡಲಾಗಿದೆ.
ಪ್ರವೇಶಾತಿಗೆ ಡಿ.8ರವರೆಗೆ ಗಡುವು
ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆ ವಿದ್ಯಾರ್ಥಿಗಳು ಪ್ರವೇಶವನ್ನು ಮುಂದೂಡಲು KEA ಗೆ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳಿಗೆ ಮನವಿ ಪರಿಗಣಿಸಿರುವ ಪ್ರಾಧಿಕಾರ ದಾಖಲಾತಿಗೆ ಡಿಸೆಂಬರ್ 8 ರವರೆಗೆ ಅವಕಾಶ ನೀಡಲಾಗಿದೆ. ಈ ಮೊದಲು ಡಿ.5ರಂದು ಶುಲ್ಕಪಾವತಿ ಮಾಡಿ ಡಿ.6ಕ್ಕೆ ವರದಿಯಾಗಬೇಕೆಂದು ಸೂಚಿಸಲಾಗಿದೆ. ಇದೀಗ ಡಿಸೆಂಬರ್ 8ರ ಮಧ್ಯಾಹ್ನ 12.30ರೊಳಗೆ ಶುಲ್ಕ ಪಾವತಿಗೆ ಅವಕಾಶ ನೀಡಿದ್ದು, ಮಧ್ಯಾಹ್ನ 2.30ರೊಳಗೆ ದಾಖಲೆ ಪತ್ರ ಸಲ್ಲಿಕೆ ಮಾಡಲು ಡೆಡ್‌ಲೈನ್ ನಿಗದಿಪಡಿಸಲಾಗಿದೆ.
ಇದನ್ನೂ ಓದಿ ಮುಂದುವರಿದ ವಿಮಾನಗಳ ಹಾರಾಟ ವ್ಯತ್ಯಯ: KIAB ಯಿಂದ 61 ಇಂಡಿಗೋ ವಿಮಾನಗಳು ರದ್ದು
ವಿದೇಶಿಯರಿಗೂ ತಟ್ಟಿದ ಪ್ಲೈಟ್ ಕ್ಯಾನ್ಸಲ್ ಬಿಸಿ
ಕೇವಲ ಭಾರತೀಯರಿಗೆ ವಿದೇಶಿ ಪ್ರಯಾಣಿಕರಿಗೂ ವಿಮಾನ ರದ್ದತಿ ಬಿಸಿ ತಾಕಿದ್ದು, ಜರ್ಮನಿಯ ಪ್ರಜೆಗಳಿಬ್ಬರಿಗೆ ಸಂಕಷ್ಟ ಎದುರಾಗಿದೆ. ಜೋದಪುರ್ಗೆ ತೆರಳುವ ಸಲುವಾಗಿ ಜರ್ಮನಿಯಿಂದ ಬೆಂಗಳೂರಿಗೆ ಇಬ್ಬರು ವಿದೇಶಿ ಪ್ರಯಾಣಿಕರು ಆಗಮಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ವಿಮಾನ ರದ್ದಾದ ಕಾರಣ ಏರ್ಪೋಟ್ನ ಇಂಡಿಗೋ ಕೌಂಟರ್ ಬಳಿ ಮತ್ತೊಂದು ಪ್ಲೈಟ್ ಟಿಕೆಟ್ ಬುಕ್ ಮಾಡಲು ಪರದಾಡುತ್ತಿದೆ.
ಇದನ್ನೂ ಓದಿ ಇಂಡಿಗೋ ವಿಮಾನ ರದ್ದು ಪ್ರಭಾವ, ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ವಸೂಲಿ: ಬೆಂಗಳೂರು ಮುಂಬೈ ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ!
ಇಂಡಿಗೋ ಸಿಇಓಗೆ ಡಿಜಿಸಿಎ ನೋಟಿಸ್
ದೇಶಾದ್ಯಂತ ಇಂಡಿಗೋ ವಿಮಾನ ಅವ್ಯವಸ್ಥೆ ಹಿನ್ನೆಲೆ ಇಂಡಿಗೋ ಸಿಇಓ ಪೀಟರ್ ಎಲ್ಬರ್ಸ್ಗೆ ಡಿಜಿಸಿಎ (ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್) ನೋಟಿಸ್ ನೀಡಿದ್ದು, 24 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚಿಸಲಾಗಿದೆ. ಇಂಡಿಗೋ ವಿಮಾನಗಳ ವಿಳಂಬ ಮತ್ತು ರದ್ದತಿ ಸೇರಿದಂತೆ ವಿಮಾನಗಳ ಕಾರ್ಯಾಚರಣೆಯ ಸಂಪೂರ್ಣ ವೈಫಲ್ಯ ಕುರಿತು ನೋಟಿಸ್ ನೀಡಲಾಯಿತು, ಉತ್ತರ ನೀಡದಿದ್ದರೆ ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಡಿಜಿಸಿಎ ಎಚ್ಚರಿಕೆ ನೀಡಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.