ಬೆಳಗಾವಿ, ಡಿಸೆಂಬರ್ 08: 10 ದಿನಗಳ ಕಾಲ ನಡೆಯಲಿರುವ ಚಳಿಗಾಲದ ಅಧಿವೇಶನ ಇಂದಿನಿಂದ ಬೆಳಗಾವಿಯಲ್ಲಿ ಆರಂಭವಾಗಿದೆ. ದೆಹಲಿ ಬ್ಲ್ಯಾ ಬೆನ್ನಲ್ಲೇ ಗುಪ್ತಚರ ಇಲಾಖೆ ನೀಡಿರುವ ಎಚ್ಚರಿಕೆ ಹಿನ್ನಲೆ ಸಿದ್ದರಾಮಯ್ಯ ತಂಗಿರುವ ಸರ್ಕಾರಿ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜಾಮರ್ ವಾಹನ ಮತ್ತು 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 80ಕ್ಕೂ ಹೆಚ್ಚು ಸಂಘಟನೆಗಳು ವಿವಿಧ ಬೇಡಿಕೆಗಳಿಗಾಗಿ ಪ್ರತಿಭಟನೆಗೆ ಕರೆ ನೀಡಲಾಯಿತು, ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.