ಉದ್ಯಮಿ ಕಿಡ್ನ್ಯಾಪ್: 1 ಕೋಟಿ ರೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪಿಗಳ ಕೈಗೆ ಸಿಕ್ಕಿದ್ದು ಚಿಪ್ಪು

ಉದ್ಯಮಿ ಕಿಡ್ನ್ಯಾಪ್: 1 ಕೋಟಿ ರೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪಿಗಳ ಕೈಗೆ ಸಿಕ್ಕಿದ್ದು ಚಿಪ್ಪು


ಮೈಸೂರು, ಡಿಸೆಂಬರ್ 08: ಹಣದಾಸೆಗೆ ಉದ್ಯಮವನ್ನು ಕಿಡ್ನ್ಯಾಪ್ (ಅಪಹರಣ)ನಾಲ್ವರು ಆರೋಪಿಗಳನ್ನು ವಿಜಯನಗರ ಠಾಣೆ ಪೊಲೀಸರು (ಪೊಲೀಸ್) ಬಂಧಿಸಿದ್ದಾರೆ. ಸಂತೋಷ್, ಅಭಿಷೇಕ್, ಪ್ರಜ್ವಲ್, ದರ್ಶನ್ ಬಂಧಿತರು. ಎರಡು ದಿನದ ಹಿಂದೆ ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ಲೋಕೇಶ್ ಅಪಹರಣ ಮಾಡಿ ಬಳಿಕ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ವಿಜಯನಗರ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ ನಡೆಸುವ ಮೂಲಕ ಅಪಹರಣವಾಗುವಂತೆ ರಿಯಲ್ ಎಸ್ಟೇಟ್ ಉದ್ಯಮವನ್ನು ರಕ್ಷಿಸಿದ್ದಾರೆ. ಜೊತೆಗೆ ಒಂದು ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ಹಲವಾರು ರೂ ಮೌಲ್ಯದ ಹಸುಗಳ ಕಳ್ಳತನ: ಒಂದು ಹಸಿವಿನ ಕತ್ತು ಕೊಯ್ದ ಕೀಚಕರು

ಲೋಕೇಶ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಹಣಕಾಸು ವಹಿವಾಟು ಜೋರಾಗಿತ್ತು. ಲೋಕೇಶ್ ವ್ಯವಹಾರವನ್ನು ಹತ್ತಿರದಿಂದ ಗಮನಿಸಿದ್ದ ಸಂತೋಷ್ ಎಂಬಾತ ಮೊದಲು ಅವನನ್ನು ಪರಿಚಯ ಮಾಡಿಕೊಳ್ಳುತ್ತಾನೆ. ನಂತರ ಲೋಕೇಶ್ ಚಲನವಲನವನ್ನು ಸೂಕ್ಷ್ಮವಾಗಿ ಗಮನಿಸಿ, ನಂತರ ಅಪಹರಣಕ್ಕೆ ಸಂಚು ರೂಪಿಸುತ್ತಾನೆ. ಸಂತೋಷ್ ತನ್ನ ಜೊತೆಗೆ ಸ್ನೇಹಿತರಾದ ಅಭಿಷೇಕ್, ಪ್ರಜ್ವಲ್, ದರ್ಶನ್ ಹಾಗೂ ಪ್ರೀತಂ ಸೇರಿಸಿಕೊಂಡು ಲೋಕೇಶ್ ಅಪಹರಣಕ್ಕೆ ಸ್ಕೆಚ್ ಹಾಕುತ್ತಾರೆ.

ಕಣ್ಣಿಗೆ ಕಾರದಪುಡಿ ಎರಚಿ ಕಿಡ್ನ್ಯಾಪ್

ಡಿಸೆಂಬರ್ 6 ರಂದು ಶನಿವಾರ ರಾತ್ರಿ 8.15 ಗಂಟೆ ಸಮಯ. ವಿಜಯನಗರ 3ನೇ ಪುಡಿ ಹೆರಿಟೇಜ್ ಕ್ಲಬ್ ನಿಂದ ಮನೆಗೆ ತೆರಳಲು ಹೊರಗೆ ಬಂದ ಲೋಕೇಶ್ ಮೇಲೆ ಅಟ್ಯಾಕ್ ಮಾಡಿದ ಇವರು ಕಣ್ಣಿಗೆ ಖಾರದ ಎರಚಿ ಬಲವಂತವಾಗಿ ಟಾಟಾ ಸುಮೋ ವಾಹನದಲ್ಲಿ ಎತ್ತಿ ಹಾಕಿಕೊಂಡು ಅಪಹರಣ ಮಾಡುತ್ತಾರೆ. ಲೋಕೇಶ್ ನನ್ನನ್ನು ಒತ್ತೆಯಾಳು ಆಗಿರಿಸಿಕೊಂಡ ಆರೋಪಿಗಳು ಆರಂಭದಲ್ಲಿ ಒಂದು ಕೋಟಿ ರೂ. ಗೆ ಬೇಡಿಕೆ ಇಟ್ಟಿದ್ದರು. ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಈ ಬಗ್ಗೆ ಕಿಡ್ನ್ಯಾಪ್ ಲೋಕದ ಪತ್ನಿ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಕೆ.ಆರ್ ನಗರದ ಹಂಪಾಪುರ ಬಳಿ ವಶಕ್ಕೆ ಪಡೆದು ಲೋಕೇಶ್ ರವರ ರಕ್ಷಣೆ ಮಾಡಿದ್ದಾರೆ.

ಈ ಪ್ರಕರಣದ ಕಿಂಗ್ ಪಿನ್ ಸಂತೋಷ್, ಮೂಲತಃ ಮಂಡ್ಯ ಜಿಲ್ಲೆ ಕೆ.ಆರ್.ಎಸ್ ರಸ್ತೆಯ ಪಂಪ್ ಹೊಸಳ್ಳಿ ಗ್ರಾಮದವನು. ಈತನಿಗೆ ನಾಲ್ಕು ತಿಂಗಳಿನಿಂದ ಲೋಕೇಶ್ ಪರಿಚಯವಿತ್ತು. ಅಷ್ಟೇ ಅಲ್ಲದೆ ಲೋಕೇಶ್ ಫೈನಾನ್ಸ್, ರಿಯಲ್ ಎಸ್ಟೇಟ್ ನಲ್ಲಿ ಹಣ ಮಾಡಿಕೊಂಡಿರುವ ವಿಚಾರ ಗೊತ್ತಿತ್ತು. ತನ್ನ ಇತರ ಸೇರ್ಪಡೆಗೆ ಸೇರಿ ಲೋಕೇಶ್ ರನ್ನ ಅಪಹರಣ ಮಾಡಿದ್ದ.

ಇದನ್ನೂ ಓದಿ: ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ, 5 ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗಿದೆ. 30 ಲಕ್ಷ ರೂ. ಹಣ ಕೊಡುವುದಾಗಿ ಆರೋಪಿ ಪ್ರೀತಂ ಎಂಬಾತನನ್ನು ಕರೆಸಿದ್ದಾರೆ. ಕಡೆ ಕೆಆರ್ ನಗರ ಮತ್ತೊಂದು ಹಂಪಾಪುರ ಬಳಿ ಲೋಕೇಶ್ ಇರಿಸಿಕೊಂಡಿದ್ದನ್ನ ಟವರ್ ಲೊಕೇಷನ್ ಮೂಲಕ ಪತ್ತೆ ಹಚ್ಚಿದ್ದಾರೆ. ತಕ್ಷಣ ಸಿನಿಮಾ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಗಾರೆ ಕೆಲಸ, ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿಗಳು ಸುಲಭವಾಗಿ ಹಣ ಮಾಡುವ ದಾರಿ ಅಂತಾ ಕಿಡ್ನ್ಯಾಪ್ ಮಾಡಿ ಜೈಲು ಸೇರಿದ್ದಾರೆ. ಒಟ್ಟಿನಲ್ಲಿ ಜೊತೆಗಿದ್ದವರೇ ಹಣದ ಆಸೆಗಾಗಿ ಈ ರೀತಿ ಮಾಡಿರುವುದು ನಿಜಕ್ಕೂ ದುರಂತವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *