ಬೆಂಗಳೂರು, ಡಿಸೆಂಬರ್ 08: ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೊರಿಕೆಯಾಗಿ (ಗ್ಯಾಸ್ ಗೀಸರ್ ಸೋರಿಕೆ) ತಾಯಿ ಮತ್ತು ಮಗ ಸಾವನ್ನಪ್ಪಿರುವಂತಹ (ಸಾವು) ಘಟನೆ ನಗರದ ಪಂಚಶೀಲನಗರದಲ್ಲಿ ನಡೆದಿದೆ. ಚಾಂದಿನಿ(26) ಮತ್ತು ಕಿರಣ್(4) ಮೃತ ದುರ್ದೈವಿಗಳು. ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಯುವಕ ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ ನಗರದ ಎಂಜಿ ರಸ್ತೆಯಲ್ಲಿ ಬೈಕ್ ಸವಾರನಿಗೆ ಖಾಸಗಿ ಬಸ್ ಡಿಕ್ಕಿ ಹೊಡದ ಪರಿಣಾಮ 2 ವರ್ಷದ ಮುಸ್ತಾಪ್ ಸ್ಥಳದಲ್ಲಿ2 ಘಟನೆ ನಡೆದಿದೆ. ಮೃತ ಯುವಕ ಚಿಕ್ಕಬಳ್ಳಾಪುರ ನಗರದ ದರ್ಗಾಮೊಹಲ್ಲ ನಿವಾಸಿ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಉದ್ಯಮಿ ಕಿಡ್ನ್ಯಾಪ್: 1 ಕೋಟಿ ರೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪಿಗಳ ಕೈಗೆ ಸಿಕ್ಕಿದ್ದು ಚಿಪ್ಪು
ಚಿಕ್ಕಬಳ್ಳಾಪುರದಿಂದ ಗೌರಿಬಿದನೂರಿನತ್ತ ಹೊರಟಿದ್ದ ಎಸ್.ಎಲ್.ವಿ ಖಾಸಗಿ ಬಸ್, ಪಕ್ಕದಲ್ಲಿದ್ದ ಬೈಕ್ ಸವಾರನ ಮೇಲೆ ಹರಿದ ಪರಿಣಾಮ ಯುವಕ ಸ್ಥಳದಲ್ಲಿ ಕಾಣಿಸಿಕೊಂಡಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೂರು ದಾಖಲು ಮಾಡಿಕೊಂಡು ಖಾಸಗಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ.
ಎರಡು ಬೈಕ್ಗಳ ನಡುವೆ ಡಿಕ್ಕಿ: ಬೈಕ್ ಸವಾರ
ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿಯಲ್ಲಿ ನಡೆದಿದೆ. ಗೊಲ್ಲಹಳ್ಳಿಯ ಮನೋಹರ್(27) ಮೃತ ಬೈಕ್ ಸವಾರ. ಮತ್ತೋರ್ವ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಗಾರಪೇಟೆ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ಗೆ ಗುದ್ದಿದ ಕಾರು
ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ಗೆ ಕಾರು ಗುದ್ದಿದ್ದ ಘಟನೆ ಬೆಂಗಳೂರಿನ ಬಸವನಗುಡಿಯ ವಾಸವಿ ಶಾಲೆ ಬಳಿ ನಡೆದಿದೆ. ಕಾರು ಜಖಂ ಆಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ 2 ಬೈಕ್ ಮತ್ತು 1 ಕಾರಿಗೂ ಹಾನಿಯಾಗಿದೆ. ಬಸವನಗುಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೋಹರಂ ಮುಗಿದ್ರೂ ಗಲಾಟೆ ಮುಗಿದಿಲ್ಲ: ಅಂತಿಮವಾಗಿ ಮೌಲ್ವಿ ಕೊಲೆಯಲ್ಲಿ ಅಂತ್ಯ
ಛತ್ತೀಸ್ಗಢ ನೋಂದಣಿಯ ಬೆಂಜ್ ಕಾರು ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ಕಾಂಪೌಂಡ್ಗೆ ಡಿಕ್ಕಿ ಹೊಡೆದಿದೆ. ಬೆಂಗಳೂರು ನೇತಾಜಿ ನಗರದ ನಿವಾಸಿ ಪ್ರಣಯ್ ಜೈನ್ ಮದ್ಯಸೇವಿಸಿ ಕಾರು ಚಲಾಯಿಸುತ್ತಿದ್ದರು. ಬಸವನಗುಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿಯನ್ನ ಠಾಣೆಗೆ ಕರೆತಂದು ನ್ಯಾಯಾಲಯ ವಿಚಾರಣೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.