Headlines

ಕಾಂಗ್ರೆಸ್‌ ಮುಖಂಡನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌: ಕೊಲೆಯಾದವನ ವಿರುದ್ಧವೇ ದಾಖಲಾಯ್ತು ಎಫ್‌ಐಆರ್‌!

ಕಾಂಗ್ರೆಸ್‌ ಮುಖಂಡನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌: ಕೊಲೆಯಾದವನ ವಿರುದ್ಧವೇ ದಾಖಲಾಯ್ತು ಎಫ್‌ಐಆರ್‌!


ಡಿಸೆಂಬರ್ 5 ರ ರಾತ್ರಿ ಹತ್ಯೆಯಾದ ಗಣೇಶ್ ಗೌಡ

ಚಿಕ್ಕಮಗಳೂರು, ಡಿಸೆಂಬರ್ 9: ಡಿಸೆಂಬರ್ 5 ರ ರಾತ್ರಿ ಚಿಕ್ಕಮಗಳೂರು (ಚಿಕ್ಕಮಗಳೂರು) ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನೆತ್ತರು ಹರಿದಿತ್ತು. ದತ್ತಜಯಂತಿಗೆ ಅಳವಡಿಸಿದ್ದ ಬ್ಯಾನರ್ ತೆರವು ವೇಳೆ ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಹಾಗೂ ಬಜರಂಗದಳ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಇದೇ ಗಲಾಟೆಯಲ್ಲಿ ಗಣೇಶ್‌ಗೌಡನನ್ನು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದರು. ಈ ಪ್ರಕರಣ ಸಂಬಂಧ ಬಜರಂಗದಳದ ಕಾರ್ಯಕರ್ತ ಸಂಜಯ್, ನಾಗಭೂಷಣ್ ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿದೆ. ಅಷ್ಟೇ ಅಲ್ಲ ಇಬ್ಬರನ್ನು ಬಂಧಿಸಲಾಗಿದೆ. ಆದರೆ ಇದೀಗ ಆರೋಪಿಗಳು ಮೃತ ಗಣೇಶ್ಗೌಡನ ಮೇಲೆಯೇ ಪ್ರತ್ಯಾರೋಪ ಮಾಡಿದ್ದಾರೆ.

8 ಜನರೊಂದಿಗೆ ಬಂದು ಹಲ್ಲೆ ಮಾಡಿದ್ದ ಗಣೇಶ್: ಬಜರಂಗದಳ ಕಾರ್ಯಕರ್ತರ ಆರೋಪ

ಡಿಸೆಂಬರ್ 5 ರಂದು ರಾತ್ರಿ ಸಖರಾಯಪಟ್ಟಣದ ಮಠದ ಗುತ್ತಿ ರಸ್ತೆಯಲ್ಲಿ ಬಜರಂಗದಳ ಕಾರ್ಯಕರ್ತರು ಹಾಗೂ ಗಣೇಶ್ ಗೌಡ ಟೀಂ ನಡುವೆ ಗ್ಯಾಂಗ್‌ವಾರ್ ಎಂಬ ಆರೋಪ ಕೇಳಿ ಬಂದಿದೆ. ಬ್ಯಾನರ್, ಫ್ಲೆಕ್ಸ್ ತೆರೆಯುವಾಗ, ”ಇವರದ್ದು ಜಾಸ್ತಿಯಾಯ್ತು” ಎಂದು ಗಣೇಶ್ ಗೌಡ ಗಲಾಟೆ ಮಾಡಿದ್ದರು.

ಬಜರಂಗದಳ ಕಾರ್ಯಕರ್ತರ ಆರೋಪ ಏನು?

ಟ್ರಾಕ್ಟರ್‌ನಲ್ಲಿ ಬಂದ ನಾನು ಗಲಾಟೆ ವಿಷಯವಾಗಿ ಗಣೇಶ್‌ಗೆ ಪ್ರಶ್ನೆ ಮಾಡಿದ್ದೆ ಎಂದು ಸಂಜಯ್ ಹೇಳಿದ್ದಾನೆ. ಇದರಿಂದ ಗಣೇಶ್ ಮತ್ತು ನಮ್ಮ ನಡುವೆ ಜಗಳವಾಯಿತು . ಬಳಿಕ ನಮ್ಮನ್ನು ಕೊಲೆ ಮಾಡುವ ಉದ್ದೇಶದಿಂದ ಸಂದೀಪ್ ಜೊತೆ ಗಣೇಶ್ 8ಕ್ಕೂ ಅಧಿಕ ಯುವಕರೊಂದಿಗೆ ಬಂದು ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ ಎಂದು ನಾಗಭೂಷಣ್ ಹಾಗೂ ಸಂಜಯ್ ಆರೋಪಿಸಿದ್ದಾರೆ. ಇವರ ದೂರು ಆಧರಿಸಿ ಮೃತ ಗಣೇಶ್‌ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರಾದ ಸಂದೀಪ್, ಅಪ್ಪು, ಚಂದು,ಅಭಿ, ಬಿಂದು, ರೋಷನ್ ಸೇರಿದಂತೆ 8 ಜನರ ಮೇಲೆ ಎಫ್‌ಐಆರ್ ದಾಖಲಾಗಿದೆ.

ಡಿಸೆಂಬರ್ 5ರ ರಾತ್ರಿ ಸಖರಾಯಪಟ್ಟಣದಲ್ಲಿ ನಡೆದಿದ್ದೇನು?

ಸಖರಾಯಪಟ್ಟಣದಲ್ಲಿ ಡಿಸೆಂಬರ್ 5ರ ರಾತ್ರಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯ ಅಂತ್ಯವಾಗಿತ್ತು. ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿತ್ತು. ನಂತರ ಬಜರಂಗದಳದ ಕಾರ್ಯಕರ್ತ ಸಂಜಯ್, ನಾಗಭೂಷಣ್ ಸೇರಿದಂತೆ ಹಲವರನ್ನು ಬಂಧಿಸಿದ್ದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ, ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *