Headlines

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಯತೀಂದ್ರ ಹೇಳಿಕೆಗೆ ಡಿಕೆಶಿ ಕೌಂಟರ್ ಹೀಗಿತ್ತು ನೋಡಿ

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಯತೀಂದ್ರ ಹೇಳಿಕೆಗೆ ಡಿಕೆಶಿ ಕೌಂಟರ್ ಹೀಗಿತ್ತು ನೋಡಿ


ಬೆಂಗಳೂರು, ಡಿಸೆಂಬರ್ 9: ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಎಂದು ಪುತ್ರ ಯತೀಂದ್ರ ಸಿದ್ದರಾಮಯ್ಯ ಸೋಮವಾರ ಬೆಳಗಾವಿಯಲ್ಲಿ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ. ಯತೀಂದ್ರ ಹೇಳಿಕೆಯ ಬೆನ್ನಲ್ಲೇ ವಿರೋಧ ಪಕ್ಷಗಳು ಕೂಡ ಈ ವಿಷಯಕ್ಕೆ ಧ್ವನಿಗೂಡಿಸಿ, ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿವೆ. ಈ ಹೇಳಿಕೆಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಗೆ ತೆರಳುವ ಮುನ್ನ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ‘ಬಹಳ ಸಂತೋಷ, ಒಳ್ಳೆಯದಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ’ ಎಂದು ಹೇಳಿದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *