ಧರ್ಮಸ್ಥಳ ಬುರುಡೆ ಕೇಸ್​​ಗೆ ಮೇಜರ್​​ ಟ್ವಿಸ್ಟ್​​: SIT ತನಿಖೆಯಿಂದ ಕೊನೆಗೂ ಬಯಲಾಯ್ತು ಸತ್ಯ!

ಧರ್ಮಸ್ಥಳ ಬುರುಡೆ ಕೇಸ್​​ಗೆ ಮೇಜರ್​​ ಟ್ವಿಸ್ಟ್​​: SIT ತನಿಖೆಯಿಂದ ಕೊನೆಗೂ ಬಯಲಾಯ್ತು ಸತ್ಯ!


ಮಂಗಳೂರು, ಡಿಸೆಂಬರ್ 10: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರೋದಾಗಿ ಮಾಸ್ಕ್ಮ್ಯಾನ್ ಚಿನ್ನಯ್ಯ ಆರೋಪಿಸಿದ್ದ ಹಿನ್ನಲೆ ಎಸ್‌ಐಟಿ ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲಾಗಿದೆ. ಧರ್ಮಸ್ಥಳದ ವಿರುದ್ಧ ಬುರುಡೆ ಗ್ಯಾಂಗ್ ಷಡ್ಯಂತ್ರ ಪ್ರಾಥಮಿಕ ತನಿಖೆಯಲ್ಲಿದೆ. ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ, ಟಿ. ಜಯಂತ್ ಹಾಗೂ ಸುಜಾತಾ ಭಟ್ ಸೇರಿ ಆರೂ ಆರೋಪಿಗಳು ಅಪರಾಧ ಕೃತ್ಯದಲ್ಲಿ ಶಾಮೀಲಾಗಿರುವ ಬಗ್ಗೆ ಎಸ್ ಐಟಿ ದೃಢಪಟ್ಟಿದೆ.

ಹಣದ ಆಮಿಷಕ್ಕೆ ಒಳಗಾಗಿ ಎ೧ ಚಿನ್ನಯ್ಯ ಬುರುಡೆ ಕಥೆ ಕಟ್ಟಿದ್ದ. ಬುರುಡೆ ಗ್ಯಾಂಗ್ ಚಿನ್ನಯ್ಯನಿಗೆ ಹಣ ಕೊಟ್ಟು ಪುಸಲಾಯಿಸಿತ್ತು. ಅಪರಿಚಿತ ಶವಗಳನ್ನು ಹೂತಿದ್ದೇನೆಂದು ಚಿನ್ನಯ್ಯನಿಂದ ಸುಳ್ಳು ಹೇಳಿ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿದೆ. ಚಿನ್ನಯ್ಯನಿಗೆ ಮೊದಲಿನಿಂದ ಪರಿಚಿತನಾಗಿದ್ದ ವಿಠ್ಠಲಗೌಡ ಮಹೇಶ್ ತಿಮರೋಡಿ ಮನೆಗೆ ಆತನನ್ನು ಕರೆದೊಯ್ದಿದ್ದ. ತಿಮರೋಡಿ ಮನೆಯಲ್ಲಿ ನಡೆದ ಸಭೆಯಲ್ಲಿ ಮಟ್ಟಣ್ಣನವರ್, ಜಯಂತ್, ವಿಠ್ಠಲಗೌಡ ಭಾಗವಹಿಸಿದ್ದು, ಧರ್ಮಸ್ಥಳ ಮೇಲ್ವಿಚಾರಕರ ವಿರುದ್ಧ ಪಿತರಿಗೆ ಪ್ಲ್ಯಾನ್ ನಡೆದಿದ್ದರು. ಅದರಂತೆ ತಲೆ ಬುರುಡೆಯಾದ ಚಿನ್ನಯ್ಯನಿಗೆ ಕೊಟ್ಟು ಪೊಲೀಸರಿಗೆ ದೂರು ಕೊಡಿಸಿದ್ದರು. ನ್ಯಾಯಾಧೀಶರ ಮುಂದೆ ಚಿನ್ನಯ್ಯ ಹೇಳಿಕೆ ಕೊಡುವಂತೆ ಪ್ರೇರೇಪಿಸಿದರು.

ಇದನ್ನೂ ಓದಿ: ಮಾಸ್ಕ್ಮ್ಯಾನ್ ಚಿನ್ನಯ್ಯ, ಪ್ರಭಾವಿ ಸ್ವಾಮೀಜಿ ನಡುವಣ ಸಭೆ ರಹಸ್ಯ ಬಿಚ್ಚಿಟ್ಟ ಮಹೇಶ್ ಶೆಟ್ಟಿ ತಿಮರೋಡಿ

ಧರ್ಮಸ್ಥಳ ಪ್ರಕರಣ ಸಂಬಂಧ ಇತ್ತೀಚೆಗೆ ಸ್ವಾಮೀಜಿ ಒಬ್ಬರ ಹೆಸರನ್ನು ಮಹೇಶ್ ಶೆಟ್ಟಿ ತಿಮರೋಡಿ ಉಲ್ಲೇಖಿಸಿದ್ದಾರೆ. ನಾನು ಮತ್ತು ಚಿನ್ನಯ್ಯ ಆ ಮಠಕ್ಕೆ ಹೋಗಿರುವುದು ಸತ್ಯ. ನಮ್ಮ ಜೊತೆಗೆ ಸೌಜನ್ಯ ಮನೆಯವರೂ ಬಂದಿದ್ದರು. ಆ ವೇಳೆ ಸ್ವಾಮೀಜಿ ಮುಂದೆ ಒಂದೂವರೆ ಗಂಟೆಗಳ ಕಾಲ ಚಿನ್ನಯ್ಯ ಎಲ್ಲವನ್ನೂ ಹೇಳಿದ್ದಾನೆ. ಯಾರೆಲ್ಲ ಅತ್ಯಾಚಾರ ಎಸಗಿದ್ದಾರೆ, ಮಾಡಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮತ್ತೊಂದೆಡೆ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೋರ್ಟ್ ಜಾಮೀನು ನೀಡಿದರೂ ಬಿಡುಗಡೆ ಭಾಗ್ಯಮಾತ್ರ ಸಿಕ್ಕಿಲ್ಲ. ನವೆಂಬರ್ 26 ರಂದು ಚಿನ್ನಯ್ಯಗೆ ನ್ಯಾಯಾಲಯದಿಂದ ಜಾಮೀನು ಮಂಜೂರು ಆಗಿದೆ. ಇಬ್ಬರು ಜಾಮೀನುದಾರರು, 1 ಲಕ್ಷ ಭದ್ರತೆ ಬಾಂಡ್ ನೀಡಲು ಕೋರ್ಟ್ ಆದೇಶ ನೀಡಿದೆ. ಆದರೆ, ಯಾರೂ ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡಿದ ಹಿನ್ನೆಲೆ ಇನ್ನೂ ಶಿವಮೊಗ್ಗದ ಜೈಲಿನಲ್ಲಿಯೇ ಚಿನ್ನಯ್ಯ ಇದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 12:04 pm, ಬುಧವಾರ, 10 ಡಿಸೆಂಬರ್ 25



Source link

Leave a Reply

Your email address will not be published. Required fields are marked *