ಬೆಳಗಾವಿ, (ಡಿಸೆಂಬರ್ 10): ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿಯೂ ಸಹ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಕಿತ್ತಾಟ ಪ್ರಸ್ತಾಪವಾಗಿದ್ದು, ವಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೆ ಟಾಂಗ್ ಕೊಡುವ ಕೆಲಸ ಮಾಡಿದ್ದಾರೆ. ಹಾಗೆಯೇ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದ್ದ ವೇಳೆ ಅಶೋಕ್ ವಾಯುಮಾಲಿನ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ, ಸಿಎಂ ಸಿದ್ದರಾಮಯ್ಯನವರು ಬೆಂಗಳೂರು ಬಿಟ್ಟು ಮೈಸೂರಿನಲ್ಲೇ ಬಂಗ್ಲೆ ಕಟ್ಟಿದ್ದಾರೆ ಎಂದು ಕಾಲೆಳೆದರು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ