ಮೈಸೂರು, (ಡಿಸೆಂಬರ್ 10): ಸ್ಥಳೀಯವಾಗಿ ಉತ್ಪಾದನೆಯಾಗುವ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆಯ ಕೇಂದ್ರ ಸರ್ಕಾರದ ಜೊತೆಗೆ ಮೈಸೂರಿನಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ ‘ಯೂನಿಟಿ ಮಾಲ್’ ನಿರ್ಮಾಣಕ್ಕೆ ಪ್ರಾರಂಭದಲ್ಲಿಯೇ ವಿಘ್ನ ಎದುರಾಗಿದೆ. ಕರ್ನಾಟಕ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದ ಸರ್ವೆ ನಂ.1ರ 6.5 ಕೇಂದ್ರ ಪ್ರದೇಶದಲ್ಲಿ ‘ಯೂನಿಟಿ ಮಾಲ್’ ನಿರ್ಮಾಣಕ್ಕೆ ಕೆಲ ತಿಂಗಳುಗಳ ಹಿಂದಷ್ಟೇ ಚಾಲನೆ ನೀಡಲಾಗಿದೆ.
ಮೇಕ್ ಇನ್ ಇಂಡಿಯಾ ಕ್ರಿಯಾತ್ಮಕ ಕೇಂದ್ರ ಸರ್ಕಾರದ ಯೋಜನೆಯಲ್ಲಿ 193 ಕೋಟಿ ವೆಚ್ಚದಲ್ಲಿ ರಾಜ್ಯ ಸರ್ಕಾರ ಈ ಯುನಿಟಿ ಮಾಲ್ ನಿರ್ಮಾಣಕ್ಕೆ ಮುಂದಾಗಿತ್ತು. ಕೇಂದ್ರದ ಯೋಜನೆ ಎಂದು ಬಿಜೆಪಿ ಸಂಸದ ಯದುವೀರ್ ಸಹ ಭೇಟಿ ನೀಡಿ ಯೂನಿಟಿ ಮಾಲ್ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ. ಆದರೆ, ಇದೀಗ ಯುನಿಟಿ ಮಾಲ್ ನಿರ್ಮಾಣ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ.
ರಾಜಮಾತೆ ಪ್ರಮೋದಾದೇವಿಯವರು ‘ಯೂನಿಟಿ ಮಾಲ್’ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ಯೂನಿಟಿ ಮಾಲ್ ನಿರ್ಮಿಸಲು ಮುಂದಾಗಿರುವ ಜಾಗವು ಮೈಸೂರು ಅರಮನೆಗೆ ಸೇರಿದ್ದು ಎಂದು ತಕರಾರು ಅರ್ಜಿ ಹಾಕಿದ್ದರು. ಹೀಗಾಗಿ ಕೋರ್ಟ್, ಆ ಜಾಗದಲ್ಲಿ ಯಾವುದೇ ನಿರ್ಮಾಣ ಕಾರ್ಯ ನಡೆಸದಂತೆ ಹಾಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿತ್ತು.