ಬೆಳಗಾವಿ, ಡಿಸೆಂಬರ್ 10: ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಸಾಮೂಹಿಕ ಸಮಾಧಿ ಕೇಸ್ ವಿಚಾರವಾಗಿ ಎಸ್ ಐಟಿ ತನಿಖೆಯಲ್ಲಿ ಬುರುಡೆ ಗ್ಯಾಂಗ್ಕಳ್ಳಾಟ ಬಯಲಾಗಿದೆ. ಈ ಬಗ್ಗೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದ ಜೈನ ಮುನಿಗಳ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಸ್ತಾಪಿಸಿದ್ದಾರೆ. ವೀರೇಂದ್ರ ಹೆಗ್ಗಡೆ ಅವರ ಕಷ್ಟಕಾಲದಲ್ಲಿ ನಾನು ತೆಗೆದುಕೊಂಡ ನಿರ್ಧಾರದ ಬಗ್ಗೆ ರಾಷ್ಟ್ರೀಯ ಮಾಧ್ಯಮದವರೂ ಸೇರಿ ಅನೇಕ ನಾಯಕರು ನನ್ನ ಪ್ರಶ್ನೆ ಮಾಡಿದರು. ವೀರೇಂದ್ರ ಹೆಗ್ಗಡೆಯವರ ಮೇಲೆ ಯಾವ ರೀತಿ ಷಡ್ಯಂತ್ರ ಆಯ್ತು ಎಂದು ಈಗ ಗೊತ್ತಾಗಿದೆ. ಹೀಗಾಗಿ ಇಡೀ ಜೈನ ಸಮುದಾಯ ಒಳ್ಳೆಯ ಕೆಲಸ ಮಾಡಿದ್ದೀರಾ ಎಂದು ನನ್ನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.